Mysore
20
overcast clouds
Light
Dark

ಜೂ.9 ರಂದು 3ನೇ ಬಾರಿ ಪ್ರಧಾನಿಯಾಗಿ ಮೋದಿ ಪ್ರಮಾಣ ವಚನ ಸ್ವೀಕಾರ: ಪ್ರಹ್ಲಾದ್‌ ಜೋಶಿ

ನವದೆಹಲಿ: ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಜೂನ್‌ 9 ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಬಿಜೆಪಿ ನಾಯಕ ಪ್ರಲ್ಹಾದ್‌ ಜೋಶಿ ಹೇಳಿದ್ದಾರೆ.

ಇಂದು(ಜೂ.6) ಬೆಳಿಗ್ಗೆಯಿಂದಲೇ ದೆಹಲಿಯ ಹಳೆ ಸಂಸತ್‌ ಭವನದ ಸೆಂಟ್ರಲ್‌ ಹಾಲ್‌ನಲ್ಲಿ ಎನ್‌ಡಿಎ ಸಂಸದೀಯ ಪಕ್ಷದ ಸಭೆ ಆರಂಭವಾಗಿದ್ದು, ಎನ್‌ಡಿಎ ಮಿತ್ರ ಪಕ್ಷಗಳ ನಾಯಕರೆಲ್ಲರೂ ಭಾಗಿಯಾಗಿದ್ದಾರೆ.

ಈ ವೇಳೆ ಮಾತನಾಡಿದ ಪ್ರಲ್ಹಾದ ಜೋಶಿ, ಭಾನುವಾರ ಸಂಜೆ 6 ಕ್ಕೆ ಮೋದಿ ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದರು.

ಸಭೆಯಲ್ಲಿ ಜೆ.ಪಿ ನಡ್ಡಾ ಎನ್‌ಡಿಎ ನಾಯಕರಾಗಿ ನರೇಂದ್ರ ಮೋದಿ ಹೆಸರನ್ನು ಪ್ರಸ್ತಾಪಿಸಲಿದ್ದಾರೆ. ಈ ವೇಳೆ ಒಕ್ಕೂಟದ ನಾಯಕರು ಬೆಂಬಲ ಸೂಚಿಸಲಿದ್ದಾರೆ.

ಇನ್ನೂ ಎನ್‌ಡಿಎ ಮಿತ್ರ ಪಕ್ಷಗಳು ಇಂದೇ ರಾಷ್ಟ್ರಪತಿ ದ್ರೌಪದಿ ಮುರ್ಮ ಅವರನ್ನುಬೇಟಿಯಾಗಿ ನೂತನ ಸರ್ಕಾರ ರಚನೆಗೆ ಹಕ್ಕುಪತ್ರ ಮಂಡಿಸುವ ಸಾಧ್ಯತೆ ಇದೆ. ಈ ವೇಳೆ ಮಿತ್ರ ಪಕ್ಷಗಳ ಬೆಂಬಲದ ಪಟ್ಟಿಯನ್ನು ಸಹ ರಾಷ್ಟ್ರಪತಿಗಳಿಗೆ ಸಲ್ಲಿಸಲಿದ್ದಾರೆ.

೫೪೩ ಸದಸ್ಯ ಬಲದ ಲೋಕಸಭೆ ಚುನಾವಣೆಯಲ್ಲಿ ಎನ್‌ಡಿಎ ಮಿತ್ರಕೂಟ ೨೯೩ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ.