Prime Minister Narendra Modi returns to India after five-nation tour
ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರು ಚೀನಾದಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಸಂಸ್ಥೆ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಆಗಸ್ಟ್ ತಿಂಗಳಲ್ಲಿ ಚೀನಾಗೆ ತೆರಳುವ ಸಾಧ್ಯತೆಗಳಿವೆ.
ಚೀನಾದಲ್ಲಿ ಎಸ್‍ಸಿಒ ಸಭೆಯ ಆಗಸ್ಟ್ 31ರಿಂದ ಸೆಪ್ಟೆಂಬರ್ 1ರವರೆಗೆ ಅಂದರೆ ಎರಡು ದಿನಗಳ ಕಾಲ ನಡೆಯಲಿದೆ. ಭಾರತ ಮತ್ತು ಚೀನಾ ನಡುವಿನ ಸಂಬಂಧಗಳನ್ನು ಸುಧಾರಿಸಲು ಪ್ರಯತ್ನಗಳು ನಡೆಯುತ್ತಿವೆ. ಇಂತಹ ಸಂದರ್ಭದಲ್ಲೇ ಮೋದಿ ಚೀನಾ ಪ್ರವಾಸ ವಿಶ್ವದ ಗಮನ ಸೆಳೆದಿದೆ.
ವಿದೇಶಾಂಗ ಸಚಿವ ಜೈಶಂಕರ್ ಅವರ ಚೀನಾ ಭೇಟಿಯ ನಂತರ, ಪ್ರಧಾನಿ ಮೋದಿ ಅವರು ಜಪಾನ್ ಮತ್ತು ನಂತರ ಶೃಂಗಸಭೆಗಾಗಿ ಚೀನಾಕ್ಕೆ ಭೇಟಿ ನೀಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
2020ರ ಗಾಲ್ವಾನ್ ಕಣಿವೆ ಘರ್ಷಣೆ ಬಳಿಕ ಕಹಿಯಾಗಿದ್ದ ಭಾರತ ಚೀನಾ ನಡುವಿನ ಸಂಬಂಧ ಇದೀಗ ಸಿಹಿಯಾಗಲು ಪ್ರಾರಂಭವಾಗಿದೆ. ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರ ಚೀನಾ ಭೇಟಿಯ ನಂತರ, ಭಾರತದ ಪ್ರಧಾನಿ ನರೇಂದ್ರ ಮೋದಿ ಆಗಸ್ಟ್ ಅಂತ್ಯದಲ್ಲಿ ವಾರ್ಷಿಕ ಶೃಂಗಸಭೆಯಲ್ಲಿ ಭಾಗವಹಿಸಲು ಜಪಾನ್‍ಗೆ ಭೇಟಿ ನೀಡಬಹುದು. ಇದರ ನಂತರ, ಪ್ರಧಾನಿ ಶಾಂಘೈ ಸಹಕಾರ ಸಂಸ್ಥೆ ನಲ್ಲಿ ಭಾಗವಹಿಸಲು ಚೀನಾಕ್ಕೂ ಭೇಟಿ ನೀಡಬಹುದು ಎಂದು ಮೂಲಗಳು ತಿಳಿಸಿವೆ.
ಪ್ರಧಾನಿ ಮೋದಿ ಶೃಂಗಸಭೆಯಲ್ಲಿ ಭಾಗವಹಿಸಿದರೆ, ಅವರು ಚೀನಾದ ಅಧ್ಯಕ್ಷ ಕ್ಸಿ ಜಿನ್‍ಪಿಂಗ್ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಬಹುದು. ಕಜನ್ ಬ್ರಿಕ್ಸ್ ಶೃಂಗಸಭೆಯಲ್ಲಿ ಇಬ್ಬರು ನಾಯಕರು ಕೊನೆಯ ಬಾರಿಗೆ ಭೇಟಿಯಾಗಿದ್ದರು. ಅಂದಿನಿಂದ, ಎರಡೂ ದೇಶಗಳ ನಡುವಿನ ಸಂಬಂಧವನ್ನು ಸುಧಾರಿಸಲು ಪ್ರಯತ್ನಗಳನ್ನು ಪ್ರಾರಂಭಿಸಲಾಯಿತು.
ಮೋದಿ ಶೃಂಗಸಭೆಯಲ್ಲಿ ರಷ್ಯಾ ಅಧ್ಯಕ್ಷರು ಸೇರಿದಂತೆ ಇತರ ಎಸ್‍ಸಿಒ ನಾಯಕರನ್ನು ಸಹ ಭೇಟಿಯಾಗಬಹುದು ಎನ್ನಲಾಗಿದೆ.
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…
ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…
ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…
ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…