ದೇಶ- ವಿದೇಶ

ಆಗಸ್ಟ್‌ನಲ್ಲಿ ಪ್ರಧಾನಿ ಮೋದಿ ಚೀನಾ ಪ್ರವಾಸ ಸಾಧ್ಯತೆ

ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರು ಚೀನಾದಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಸಂಸ್ಥೆ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಆಗಸ್ಟ್ ತಿಂಗಳಲ್ಲಿ ಚೀನಾಗೆ ತೆರಳುವ ಸಾಧ್ಯತೆಗಳಿವೆ.

ಚೀನಾದಲ್ಲಿ ಎಸ್‍ಸಿಒ ಸಭೆಯ ಆಗಸ್ಟ್ 31ರಿಂದ ಸೆಪ್ಟೆಂಬರ್ 1ರವರೆಗೆ ಅಂದರೆ ಎರಡು ದಿನಗಳ ಕಾಲ ನಡೆಯಲಿದೆ. ಭಾರತ ಮತ್ತು ಚೀನಾ ನಡುವಿನ ಸಂಬಂಧಗಳನ್ನು ಸುಧಾರಿಸಲು ಪ್ರಯತ್ನಗಳು ನಡೆಯುತ್ತಿವೆ. ಇಂತಹ ಸಂದರ್ಭದಲ್ಲೇ ಮೋದಿ ಚೀನಾ ಪ್ರವಾಸ ವಿಶ್ವದ ಗಮನ ಸೆಳೆದಿದೆ.

ವಿದೇಶಾಂಗ ಸಚಿವ ಜೈಶಂಕರ್ ಅವರ ಚೀನಾ ಭೇಟಿಯ ನಂತರ, ಪ್ರಧಾನಿ ಮೋದಿ ಅವರು ಜಪಾನ್ ಮತ್ತು ನಂತರ ಶೃಂಗಸಭೆಗಾಗಿ ಚೀನಾಕ್ಕೆ ಭೇಟಿ ನೀಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

2020ರ ಗಾಲ್ವಾನ್ ಕಣಿವೆ ಘರ್ಷಣೆ ಬಳಿಕ ಕಹಿಯಾಗಿದ್ದ ಭಾರತ ಚೀನಾ ನಡುವಿನ ಸಂಬಂಧ ಇದೀಗ ಸಿಹಿಯಾಗಲು ಪ್ರಾರಂಭವಾಗಿದೆ. ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರ ಚೀನಾ ಭೇಟಿಯ ನಂತರ, ಭಾರತದ ಪ್ರಧಾನಿ ನರೇಂದ್ರ ಮೋದಿ ಆಗಸ್ಟ್ ಅಂತ್ಯದಲ್ಲಿ ವಾರ್ಷಿಕ ಶೃಂಗಸಭೆಯಲ್ಲಿ ಭಾಗವಹಿಸಲು ಜಪಾನ್‍ಗೆ ಭೇಟಿ ನೀಡಬಹುದು. ಇದರ ನಂತರ, ಪ್ರಧಾನಿ ಶಾಂಘೈ ಸಹಕಾರ ಸಂಸ್ಥೆ ನಲ್ಲಿ ಭಾಗವಹಿಸಲು ಚೀನಾಕ್ಕೂ ಭೇಟಿ ನೀಡಬಹುದು ಎಂದು ಮೂಲಗಳು ತಿಳಿಸಿವೆ.

ಪ್ರಧಾನಿ ಮೋದಿ ಶೃಂಗಸಭೆಯಲ್ಲಿ ಭಾಗವಹಿಸಿದರೆ, ಅವರು ಚೀನಾದ ಅಧ್ಯಕ್ಷ ಕ್ಸಿ ಜಿನ್‍ಪಿಂಗ್ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಬಹುದು. ಕಜನ್ ಬ್ರಿಕ್ಸ್ ಶೃಂಗಸಭೆಯಲ್ಲಿ ಇಬ್ಬರು ನಾಯಕರು ಕೊನೆಯ ಬಾರಿಗೆ ಭೇಟಿಯಾಗಿದ್ದರು.‌ ಅಂದಿನಿಂದ, ಎರಡೂ ದೇಶಗಳ ನಡುವಿನ ಸಂಬಂಧವನ್ನು ಸುಧಾರಿಸಲು ಪ್ರಯತ್ನಗಳನ್ನು ಪ್ರಾರಂಭಿಸಲಾಯಿತು.

ಮೋದಿ ಶೃಂಗಸಭೆಯಲ್ಲಿ ರಷ್ಯಾ ಅಧ್ಯಕ್ಷರು ಸೇರಿದಂತೆ ಇತರ ಎಸ್‍ಸಿಒ ನಾಯಕರನ್ನು ಸಹ ಭೇಟಿಯಾಗಬಹುದು ಎನ್ನಲಾಗಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

5 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

5 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

5 hours ago

ಆತ್ಮಹತ್ಯೆ ತಡೆಗೆ ಇರಲಿ ಮಾನವೀಯ ಸುರಕ್ಷಾ ಜಾಲ

ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…

5 hours ago

ಕೆರೆ ನೀರಿಗಾಗಿ ಎರಡು ಗ್ರಾಮಸ್ಥರ ತಿಕ್ಕಾಟ!

ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ  ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…

5 hours ago

ಅಪಾಯಕಾರಿ ರೈಲ್ವೆ ಅಂಡರ್‌ಪಾಸ್ ಫುಟ್‌ಪಾತ್

ಹೇಮಂತ್‌ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…

5 hours ago