ನವದೆಹಲಿ: ವಯನಾಡಿನ ಭೀಕರ ಭೂಕುಸಿತದಲ್ಲಿ ಅನೇಕರು ನಾಪತ್ತೆಯಾಗಿದ್ದು, ಹಲವಾರು ಮಂದಿ ಸಾವನ್ನಪ್ಪಿದ್ದಾರೆ. ಈ ಭೀಕರ ಭೂಕುಸಿತವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಬೇಕು ಎಂದು ವಿಪಕ್ಷಗಳು ಆಗ್ರಹಿಸಿವೆ. ಈ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಇಂದು(ಆ.10)ವಯನಾಡ್‌ಗೆ ಭೇಟಿ ನೀಡಿ ವೈಯಕ್ತಿಕವಾಗಿ ಅವಲೋಕನ ಮಾಡಲಿದ್ದಾರೆ.
ಇನ್ನೂ ಈ ಕುರಿತು ಟ್ವೀಟ್ ಮಾಡಿ ಮೋದಿಯನ್ನು ಸ್ವಾಗತ ಕೋರಿರುವ ವಿಪಕ್ಷ ನಾಯಕ ರಾಹುಲ್ ಗಾಂಧಿ ʼದುರಂತದ ಬಗ್ಗೆ ವೈಯಕ್ತಿಕವಾಗಿ ಅವಲೋಕನ ಮಾಡಲು ವಯನಾಡ್‌ಗೆ ಭೇಟಿ ನೀಡುತ್ತಿರುವುದಕ್ಕೆ ಧನ್ಯವಾದಗಳು. ಇದೊಂದು ಉತ್ತಮ ನಿರ್ಧಾರ ಎಂದಿದ್ದಾರೆ.
ಮುಂದುವರೆದು, ವಯನಾಡು ಭೂಕುಸಿದ ಪ್ರಮಾಣವನ್ನು ನೇರವಾಗಿ ನೋಡಿದ ಮೇಲೆ ಪ್ರಧಾನಿ ನರೇಂದ್ರ ಮೋದಿ ಅವರು ಅದನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸುವ ವಿಶ್ವಾಸವಿದೆ. ವಿನಾಶದ ಪ್ರಮಾಣವನ್ನು ನೇರವಾಗಿ ನೋಡಿದ ನಂತರ ನೀವು ಅದನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸುತ್ತೀರಿ ಎಂಬ ವಿಶ್ವಾಸ ನನಗಿದೆ ಎಂದು ಪೋಸ್ಟ್ ಮಾಡಿದ್ದಾರೆ.