ಢಾಕಾ: ನೊಬೆಲ್ ಶಾಂತಿ ಪುರಸ್ಕೃತ ಹಾಗೂ ಗ್ರಾಮೀಣ ಬ್ಯಾಂಕ್ ಸ್ಥಾಪಿಸಿದ್ದ ಮೊಹಮ್ಮದ್ ಯೂನುಸ್‌ರನ್ನು ಬಾಂಗ್ಲಾದೇಶ ಸರ್ಕಾರದ ಮುಖ್ಯಸ್ಥರನ್ನಾಗಿ ಆಯ್ಕೆ ಮಾಡಲಾಗಿದೆ.
ಬಾಂಗ್ಲಾದೇಶದಲ್ಲಿ ಕ್ಷಿಪ್ರ ಬೆಳವಣಿಗೆ ನಡೆಯುತ್ತಿದ್ದು, ಹಿಂದು ದೇವಾಲಯಗಳೇ ಸಂಘಟನೆಗಳ ಟಾರ್ಗೆಟ್ ಆಗಿವೆ. ಅಲ್ಲಿ ಹಲವು ಹಿಂದು ದೇವಾಲಯಗಳನ್ನು ಧ್ವಂಸ ಮಾಡಲಾಗಿದೆ.
ಈ ಬೆನ್ನಲ್ಲೇ ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಮೊಹಮ್ಮದ್ ಯೂನುಸ್ ಅವರನ್ನು ಪ್ರಧಾನಿಯನ್ನಾಗಿ ನೇಮಿಸಬೇಕು ಎಂದು ಆಗ್ರಹಿಸಿದ್ದರು.
ಸಂಸತ್ತನ್ನ ವಿಸರ್ಜಿಸಿದ ಬೆನ್ನಲ್ಲೇ ಬಾಂಗ್ಲಾದೇಶದ ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್ ಅವರು, 13 ಸದಸ್ಯರೊಂದಿಗೆ ಮಧ್ಯಂತರ ಸರ್ಕಾರದ ರಚನೆ ಬಗ್ಗೆ ಚರ್ಚೆ ನಡೆಸಿದ್ದರು. ಈ ವೇಳೆ ಯೂನುಸ್ ಅವರಿಗೆ ಅಧಿಕಾರ ನೀಡಬೇಕೆಂದು ವಿದ್ಯಾರ್ಥಿಗಳು ಆಗ್ರಹಿಸಿದ್ದರು.
ಈ ಹಿನ್ನೆಲೆಯಲ್ಲಿ ಮೊಹಮ್ಮದ್ ಶಹಾಬುದ್ದೀನ್ ಅವರು ಇಂದು ನೊಬೆಲ್ ಪ್ರಶಸ್ತಿ ವಿಜೇತ ಮೊಹಮ್ಮದ್ ಯೂನುಸ್ ಅವರನ್ನು ಮಧ್ಯಂತರ ಸರ್ಕಾರದ ಮುಖ್ಯಸ್ಥರನ್ನಾಗಿ ನೇಮಕ ಮಾಡಿದ್ದಾರೆ.
ಈ ಮೂಲಕ ಯೂನುಸ್ ಅವರಿಗೆ ಬಾಂಗ್ಲಾದೇಶದ ಸೇನೆ ಬೆಂಬಲ ನೀಡಿದ್ದರಿಂದ ಸದ್ಯ ತಲೆದೋರಿರುವ ಸಮಸ್ಯೆಗೆ ತಾತ್ಕಾಲಿಕ ಪರಿಹಾರ ಸಿಕ್ಕಿದಂತಾಗಿದೆ.
ಮಂಡ್ಯ: ರಾಜಕಾರಣಿಗಳನ್ನು ಹೆದರಿಸ ಬಲ್ಲಂತಹ ಶಕ್ತಿ ಸಾಹಿತ್ಯಕ್ಕಿದೆ. ಹಾಗಾಗಿ ರಾಜ ಕಾರಣಿಗಳು ಹಾದಿ ತಪ್ಪದಂತೆ ಸಾಹಿತಿಗಳು ಎಚ್ಚರಿಸಬೇಕು ಎಂದು ಕಾನೂನು…
ಮಂಡ್ಯ: ಪಾರ್ಸೆಲ್ ಕೊಡುವ ನೆಪದಲ್ಲಿ ಬಂದು ವ್ಯಕ್ತಿಯೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯದ ಕ್ಯಾತನಹಳ್ಳಿ ಗ್ರಾಮದಲ್ಲಿ ನಡೆದಿದೆ. ರಮೇಶ್…
ಬೆಂಗಳೂರು: ನಿವೃತ್ತ ಸಾರಿಗೆ ನೌಕರರಿಗೆ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದ್ದು, ಗ್ರಾಚ್ಯುಟಿ ಹಣವನ್ನು ಬಿಡುಗಡೆ ಮಾಡಿದೆ. ಗ್ರಾಚ್ಯುಟಿ ಮತ್ತು ಗಳಿಕೆ…
ಬೆಂಗಳೂರು: ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ವೇದಿಕೆಯನ್ನು ಸಿಎಂ ಸಿದ್ದರಾಮಯ್ಯ ದುರುಪಯೋಗಪಡಿಸಿಕೊಂಡಿದ್ದಾರೆ…
ಹೈದರಾಬಾದ್: ಡಿಸೆಂಬರ್.4ರಂದು ಸಂಧ್ಯಾ ಥಿಯೇಟರ್ ಬಳಿ ನಡೆದ ಕಾಲ್ತುಳಿತದಲ್ಲಿ ಮಹಿಳೆಯೋರ್ವರು ಮೃತಪಟ್ಟಿದ್ದು ದುರದೃಷ್ಟಕರ ಎಂದು ನಟ ಅಲ್ಲು ಅರ್ಜುನ್ ಬೇಸರ…