ವಾಷಿಂಗ್ಟನ್: ಅಮೇರಿಕಾ-ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಿಂದ ಇರಾನ್‌ನ ಸರ್ವೋಚ್ಛ ನಾಯಕ ಮೊಜ್ತಾಬಾ ಖಮೇನಿ ಅವರ ಮುಖ ವಿರೂಪಗೊಂಡಿದ್ದು, ಪ್ಲಾಸ್ಟಿಕ್ ಸರ್ಜರಿ ಅಗತ್ಯವಿದೆ ಎಂದು ವರದಿಯಾಗಿದೆ.
ವರದಿಯ ಪ್ರಕಾರ ಮೊಜ್ತಾಬಾ ಅವರ ಮುಖ ಹಾಗೂ ತುಟಿಗಳು ತೀವ್ರವಾಗಿ ಸುಟ್ಟುಹೋಗಿವೆ. ಈ ಕಾರಣದಿಂದ ಅವರಿಗೆ ಮಾತನಾಡಲು ತುಂಬಾ ಕಷ್ಟವಾಗುತ್ತಿದ್ದು, ಶೀಘ್ರದಲ್ಲೇ ಪ್ಲಾಸ್ಟಿಕ್ ಸರ್ಜರಿ ಮಾಡಲು ಇರಾನ್ ಆಡಳಿತ ಮುಂದಾಗಿದೆ.
ಮುಖದ ಗಾಯಗಳಿಂದಾಗಿ ಅವರಿಗೆ ಸ್ಪಷ್ಟವಾಗಿ ಮಾತನಾಡಲು ಕಷ್ಟವಾಗುತ್ತಿದೆ. ಈ ಕಾರಣದಿಂದಲೇ ಅವರು ಯಾವುದೇ ಆಡಿಯೋ ಅಥವಾ ವಿಡಿಯೋ ಸಂದೇಶಗಳನ್ನು ಬಿಡುಗಡೆ ಮಾಡುತ್ತಿಲ್ಲ ಎಂದು ಹೇಳಲಾಗುತ್ತಿದೆ.





