ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಶಿವಸೇನಾ ಸಂಸದ (ಎಂಪಿ) ಸಂಜಯ್ ರಾವುತ್ ಅವರನ್ನು ಆಗಸ್ಟ್ 22ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಮುಂಬೈ ನ್ಯಾಯಾಲಯ ಸೋಮವಾರ ಅದೇಶಿಸಿದೆ.
ಹೆಚ್ಚುವರಿಯಾಗಿ ತನ್ನ ವಶಕ್ಕೆ ಒಪ್ಪಿಸಲು ಕೋರಿಲ್ಲ ಎಂದು ಜಾರಿ ನಿರ್ದೇಶನಾಲಯ ಹೇಳಿದ ಬಳಿಕ ಅಕ್ರಮ ಹಣ ವರ್ಗಾವಣೆ ತಡೆ ಕಾಯಿದೆಯಡಿ ಸ್ಥಾಪಿತವಾದ ವಿಶೇಷ ನ್ಯಾಯಾಲಯ ಈ ಆದೇಶ ನೀಡಿತು.
ಸಂಸದ ರಾವತ್ ಅವರಿಗೆ ಹೃದ್ರೋಗ ಇರುವುದನ್ನು ವೈದ್ಯಕೀಯ ದಾಖಲೆಗಳ ಮೂಲಕ ಗಮನಿಸಿದ ನ್ಯಾಯಾಧೀಶ ಎಂ.ಜಿ.ದೇಶಪಾಂಡೆ ಅವರು ನ್ಯಾಯಾಂಗ ಬಂಧನದಲ್ಲಿರುವಾಗ ಸಂಸದರಿಗೆ ಅವರ ಔಷಧಿಗಳ ಜೊತೆಗೆ ಮನೆಯಿಂದ ಆಹಾರ ಪೂರೈಸಲು ಅನುಮತಿಸಿದರು. ವೈದ್ಯರ ಸೂಚನೆಯಂತೆ ಸೂಕ್ತ ಔಷಧಗಳನ್ನು ಒದಗಿಸಬೇಕು ಎಂದು ಜೈಲು ಅಧಿಕಾರಿಗಳಿಗೆ ನ್ಯಾಯಾಲಯ ಸೂಚಿಸಿತು.
ಮುಂಬೈನ ಪತ್ರಾ ಚಾಲ್ ಭೂ ಹಗರಣ ಮತ್ತು ಅದಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ₹ 1 ಕೋಟಿಗೂ ಹೆಚ್ಚು ಹಣ ನೇರವಾಗಿ ಪಡೆದ ಆರೋಪದಡಿ ಆಗಸ್ಟ್ 1 ರ ಮಧ್ಯರಾತ್ರಿ ರಾವತ್ ಅವರನ್ನು ಬಂಧಿಸಲಾಗಿತ್ತು.
ಬೆಂಗಳೂರು : ಒಳಮೀಸಲಾತಿ ವಿವಾದ ಬಗೆಹರಿದಿರುವುದರಿಂದ ಒಂದು ವಾರದೊಳಗೆ 8 ಸಾವಿರ ಪೊಲೀಸ್ ಕಾನ್‌ಸ್ಟೆಬಲ್‌ಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು…
ವಾಷಿಂಗ್ಟನ್ : ಇರಾನ್ ಅಣ್ವಸ್ತ್ರ ಹೊಂದಲು ಬ್ರಿಟನ್ ರಾಜ ಮೂರನೇ ಚಾರ್ಲ್ಸ್ ಬಯಸುವುದಿಲ್ಲ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್…
ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಈಗ ಎರಡನೇ ಬಾರಿ ಜಾಮೀನಿಗಾಗಿ…
ಚಾಮರಾಜನಗರ : ಮದುವೆ ಮನೆಯಲ್ಲಿ ಸಂಭ್ರಮ ಮನೆ ಮಾಡಬೇಕಿದ್ದ ಹೊತ್ತಲ್ಲಿ ಚಿನ್ನಾಭರಣದ ವಿಚಾರಕ್ಕೆ ಶುರುವಾದ ಜಗಳ ವಿಕೋಪಕ್ಕೆ ಹೋಗಿ, ಚಾಕು…
ಬಿಸಿಲ ಝಳದಿಂದ ಕುಸಿಯುತ್ತಿರುವ ಅಂತರ್ಜಲ ಮಟ್ಟ ; ಮೇ ತಿಂಗಳಲ್ಲಿ ನೀರಿನ ಕೊರತೆ ಸಾಧ್ಯತೆ • ಕೆ.ಬಿ.ಶಂಶುದ್ದೀನ್ ಕುಶಾಲನಗರ :…
1992ರಲ್ಲಿ ಅಯೋಧ್ಯೆಯ ಬಾಬ್ರಿ ಮಸೀದಿ ಉರುಳಿಸಲ್ಪಟ್ಟ ಹಿನ್ನೆಲೆಯಲ್ಲಿ ದೇಶದಲ್ಲಿ ನಡೆದ ಕೋಮು ಗಲಭೆಗಳಲ್ಲಿ 2,000ಕ್ಕೂ ಜನ ಸಾವಿಗೀಡಾದರು. ಅಯೋಧ್ಯೆಯಿಂದ 65ಕಿ.…