Mysore
27
scattered clouds

Social Media

ಶುಕ್ರವಾರ, 20 ಡಿಸೆಂಬರ್ 2024
Light
Dark

ಇಂದಿನಿಂದ ಲೋಕಸಭೆ ಮುಂಗಾರು ಅಧಿವೇಶನ ಆರಂಭ

ನವದೆಹಲಿ : ಇಂದಿನಿಂದ ಲೋಕಸಭೆ ಮುಂಗಾರು ಅಧಿವೇಶನ ಆರಂಭವಾಗಲಿದ್ದು, ಆಗಸ್ಟ್‌ ೧೨ರ ವರೆಗೂ  ಅಧಿವೇಶನ ನಡೆಯಲಿದೆ.

ನಾಳೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ೩ನೇ ಅವಧಿಯ ಮೊದಲ ಬಜೆಟ್‌ ಮಂಡನೆಯಾಗಲಿದ್ದು,ಹಣಕಾಸು ಸಚಿವೆ ನಿರ್ಮಾಲಾ ಸೀತರಾಮನ್‌ ಬಜೆಟ್‌ ಮಂಡಿಸಲಿದ್ದಾರೆ.

ಇನ್ನು ಈ ಬಾರಿಯ ಅಧಿವೇಶನದಲ್ಲಿ ವಿಪತ್ತು ನಿರ್ವಹಣಾ ಕಾನೂನನ್ನ ತಿದ್ದುಪಡಿ ಮಾಡುವುದು ಸೇರಿದಂತೆ ೬ ಹೊಸ ಮಸೂದೆಗಳನ್ನು ಕೇಂದ್ರ ಸರ್ಕಾರ  ಪರಿಚಯ ಮಾಡಲಿದೆ. ಲೋಕಸಭೆಯ ಸೆಕ್ರೆಟರಿಯೇಟ್‌ ಮಾಹಿತಿ ಪ್ರಕಾರ ಹಣಕಾಸು ಮಸೂದೆ, ವಿಪತ್ತು ನಿರ್ವಹಣಾ ಮಸೂದೆ, ಬಾಯ್ಲರ್‌ ಗಳ ಮಸೂದೆ, ಭಾರತೀಯ ವಾಯುಯಾನ ವಿಧೇಯಕಗಳ ಮಸೂದೆ, ಕಾಫಿ ಮಸೂದೆ, ರಬ್ಬರ್‌ ಮಸೂದೆ ಮಂಡನೆಯಾಗಲಿದೆ.

ಇನ್ನು ಮತ್ತೊಂದು ಕಡೆ ನೀಟ್‌ ಅಕ್ರಮ, ಕನ್ವರ್‌ ಯಾತ್ರೆ, ಮಣಿಪುರ ಸಂಘರ್ಷ, ರೈಲ್ವೆ ಸುರಕ್ಷತೆ ಸೇರಿದಂತೆ ಹಲವು ವಿಚಾರಗಳನ್ನು ಮುಂದಿಟ್ಟುಕೊಂಡು ಆಡಳಿತ ಪಕ್ಷವನ್ನು ಕಟ್ಟಿ ಹಾಕಲು ಕಾಂಗ್ರೆಸ್‌ ನೇತೃತ್ವದ ವಿರೋಧ ಪಕ್ಷಗಳ ಒಕ್ಕೂಟ ಇಂಡಿಯಾ ಸನ್ನದ್ಧವಾಗಿದೆ.

 

 

Tags: