ನವದೆಹಲಿ : ಇಂದಿನಿಂದ ಲೋಕಸಭೆ ಮುಂಗಾರು ಅಧಿವೇಶನ ಆರಂಭವಾಗಲಿದ್ದು, ಆಗಸ್ಟ್ ೧೨ರ ವರೆಗೂ ಅಧಿವೇಶನ ನಡೆಯಲಿದೆ.
ನಾಳೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ೩ನೇ ಅವಧಿಯ ಮೊದಲ ಬಜೆಟ್ ಮಂಡನೆಯಾಗಲಿದ್ದು,ಹಣಕಾಸು ಸಚಿವೆ ನಿರ್ಮಾಲಾ ಸೀತರಾಮನ್ ಬಜೆಟ್ ಮಂಡಿಸಲಿದ್ದಾರೆ.
ಇನ್ನು ಈ ಬಾರಿಯ ಅಧಿವೇಶನದಲ್ಲಿ ವಿಪತ್ತು ನಿರ್ವಹಣಾ ಕಾನೂನನ್ನ ತಿದ್ದುಪಡಿ ಮಾಡುವುದು ಸೇರಿದಂತೆ ೬ ಹೊಸ ಮಸೂದೆಗಳನ್ನು ಕೇಂದ್ರ ಸರ್ಕಾರ ಪರಿಚಯ ಮಾಡಲಿದೆ. ಲೋಕಸಭೆಯ ಸೆಕ್ರೆಟರಿಯೇಟ್ ಮಾಹಿತಿ ಪ್ರಕಾರ ಹಣಕಾಸು ಮಸೂದೆ, ವಿಪತ್ತು ನಿರ್ವಹಣಾ ಮಸೂದೆ, ಬಾಯ್ಲರ್ ಗಳ ಮಸೂದೆ, ಭಾರತೀಯ ವಾಯುಯಾನ ವಿಧೇಯಕಗಳ ಮಸೂದೆ, ಕಾಫಿ ಮಸೂದೆ, ರಬ್ಬರ್ ಮಸೂದೆ ಮಂಡನೆಯಾಗಲಿದೆ.
ಇನ್ನು ಮತ್ತೊಂದು ಕಡೆ ನೀಟ್ ಅಕ್ರಮ, ಕನ್ವರ್ ಯಾತ್ರೆ, ಮಣಿಪುರ ಸಂಘರ್ಷ, ರೈಲ್ವೆ ಸುರಕ್ಷತೆ ಸೇರಿದಂತೆ ಹಲವು ವಿಚಾರಗಳನ್ನು ಮುಂದಿಟ್ಟುಕೊಂಡು ಆಡಳಿತ ಪಕ್ಷವನ್ನು ಕಟ್ಟಿ ಹಾಕಲು ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳ ಒಕ್ಕೂಟ ಇಂಡಿಯಾ ಸನ್ನದ್ಧವಾಗಿದೆ.
ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್ಗಳ ವಿಚಾರ…
ಈ ವರ್ಷದ ದಸರಾ ಮಹೋತ್ಸವದಲ್ಲಿನ ವಿದ್ಯುತ್ ದೀಪಾಲಂಕಾರಗಳು ಪ್ರತಿ ವರ್ಷದಂತೆ ಈ ವರ್ಷವೂ ಜನರ ಮನಸ್ಸನ್ನು ಆಕರ್ಷಿಸುತ್ತಿದೆ. ಅದರಲ್ಲೂ ದೇವರಾಜ…
‘ಮತ್ತೆ ಹಾರ್ಟ್ ಸರ್ಜರಿ ಮಾಡಿಸಿಕೊಳ್ಳಬೇಕಾಗುತ್ತದೆ’- ಇದು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರ ಕುರಿತು…
ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ನನ್ನ ಮನೆಯಲ್ಲಿ ಇಟ್ಟಿದ್ದ ನೋಟಿನ ಕಂತೆಗಳನ್ನು ಪೊಲೀಸ್ ಸಿಬ್ಬಂದಿ ಮತ್ತು ಮಹಜರ್ ಸಾಕ್ಷಿದಾರರು ಎಣಿಸಿದರು.…
ಕೆ.ಎಸ್.ಚಂದ್ರಶೇಖರ ಮೂರ್ತಿ ಮೈಸೂರಿನ ಎನ್.ಆರ್. ಕ್ಷೇತ್ರದಲ್ಲಿ ೫೦೦ಕ್ಕೂ ಹೆಚ್ಚು ಮತದಾರರ ವಿರುದ್ಧ ಸುಳ್ಳು ಮಾಹಿತಿ ಸಲ್ಲಿಕೆ ಆರೋಪ; ಪೊಲೀಸ್ ತನಿಖೆ …
ಆರ್.ಎಲ್.ಮಂಜುನಾಥ್ ದಸರಾ ನೋಡಲು ಬಂದವರ ಪಾಡು ಅಯೋಮಯ; ತಾತ್ಕಾಲಿಕ ಶೆಲ್ಟರ್ ಅಳವಡಿಸಲು ಆಗ್ರಹ ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ದಸರಾ ಮಹೋತ್ಸವದ…