ನವದೆಹಲಿ: ಕರ್ನಾಟಕ ಸೇರಿದಂತೆ ದಕ್ಷಿಣದ ಐದು ರಾಜ್ಯಗಳಿಗೆ ಹೆಚ್ಚುವರಿ ಭಾರತ್ ರೈಸ್ ಹಂಚಿಕೆ ಮಾಡಲಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ.
ಅಕ್ಕಿಯ ಪೂರೈಕೆ ಹೆಚ್ಚಿಸಿ, ಬೆಲೆ ಸ್ಥಿರತೆ ಕಾಯ್ದುಕೊಳ್ಳುವುದು ಹಾಗೂ ಅಕ್ರಮ ದಾಸ್ತಾನು ತಡೆಯುವುದು ಈ ಕ್ರಮದ ಉದ್ದೇಶವಾಗಿದೆ.
ಮುಕ್ತ ಮಾರುಕಟ್ಟೆ ಮಾರಾಟ ಯೋಜನೆಯಡಿ ಅಕ್ಕಿ ಮಾರಾಟದ ಗುರಿಯನ್ನು 50 ಲಕ್ಷ ಮೆಟ್ರಿಕ್ ಟನ್‌ಗೆ ಹೆಚ್ಚಿಸಲಾಗಿದೆ.
ಜೊತೆಗೆ, ಅಗತ್ಯವಿರುವ ಕಡೆ ಅಕ್ಕಿ ಮತ್ತು ಭತ್ತದ ದಾಸ್ತಾನಿಗೆ ಮಿತಿ ವಿಧಿಸಲು ರಾಜ್ಯಗಳಿಗೆ ಅನುಮತಿ ನೀಡಲಾಗಿದೆ. ಈ ಅನುಮತಿ 2027ರ ಜನವರಿ 31ರವರೆಗೆ ಅನ್ವಯವಾಗಲಿದೆ ಎಂದು ಜೋಶಿ ಮಾಹಿತಿ ನೀಡಿದ್ದಾರೆ.
ಗ್ರಾಹಕರಿಗೆ ಸಮಂಜಸ ಬೆಲೆಯಲ್ಲಿ ಅಕ್ಕಿ ಲಭ್ಯವಾಗುವಂತೆ ಮಾಡಲು ಹಾಗೂ ಕಪ್ಪು ಮಾರುಕಟ್ಟೆ ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ಮೈಸೂರು: ಮೈಸೂರು ಅರಮನೆ ಕುರಿತ ಹೇಳಿಕೆಯನ್ನು ಯತೀಂದ್ರ ಸಿದ್ದರಾಮಯ್ಯ ಮತ್ತೊಮ್ಮೆ ಸಮರ್ಥಿಸಿಕೊಂಡಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಮಹಾರಾಜರು ಅರಮನೆ…
ಹನೂರು: ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಕೈಗೊಳ್ಳುವ ಭಕ್ತರ ಗಮನಕ್ಕೆ! ದೀಪಾವಳಿ ಜಾತ್ರೆಯ ಹಿನ್ನೆಲೆಯಲ್ಲಿ ನವೆಂಬರ್ 11ರವರೆಗೆ ರಾತ್ರಿ ವೇಳೆ ಕಾಲ್ನಡಿಗೆ…
ಮಂಡ್ಯ: ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ ಕುಸಿಯುತ್ತಿದ್ದು, ರೈತರಲ್ಲಿ ಆತಂಕ ಹೆಚ್ಚಾಗಿದೆ. ಕಳೆದ ಹತ್ತು ದಿನಗಳಲ್ಲಿ ನೀರಿನ ಮಟ್ಟ ಆರು ಅಡಿ…
ಬೆಂಗಳೂರು: ನವೆಂಬರ್ 13ರಂದು ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ. ಬೆಂಗಳೂರು ಮತ್ತು ಮೈಸೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ…
ರೈತರ ಹೆಸರನ್ನು ಮುಂದಿಟ್ಟುಕೊಂಡು ಸರ್ಕಾರ ಹಾಲಿನ ದರ ಹೆಚ್ಚಳದ ಘೋಷಣೆ ಮಾಡುತ್ತದೆ. ಆದರೆ ಆ ಘೋಷಣೆಯ ಪೂರ್ಣ ಲಾಭ ಮಾತ್ರ…
ಸರ್ಕಾರಿ ಶಾಲೆಗಳ ನಿರ್ವಹಣೆಯನ್ನು ಖಾಸಗಿ ಸಂಸ್ಥೆಗಳಿಗೆ ಸಿಎಸ್‌ಆರ್(ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ) ಯೋಜನೆಯಡಿ ವಹಿಸಲು ರಾಜ್ಯ ಸರ್ಕಾರ ಮುಂದಾಗಿರುವುದು ಆತಂಕಕಾರಿ ಬೆಳವಣಿಗೆ.…