Mysore
20
broken clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

ಪಕ್ಷ ಸಂಘಟನೆಗೆ ಹೆಚ್ಚು ಒತ್ತು: ಡಿಸಿಎಂ ಡಿಕೆ ಶಿವಕುಮಾರ್‌

ಅಹಮದಾಬಾದ್‌: ಬ್ಲಾಕ್‌, ಜಿಲ್ಲಾ, ತಾಲ್ಲೂಕು ಮಟ್ಟದಲ್ಲಿ ಕಾಂಗ್ರೆಸ್‌ ಪಕ್ಷ ಬಲಪಡಿಸುವ ಬಗ್ಗೆ ಅಹಮಾದಾಬಾದ್‌ ಅಧೀವೇಶನದಲ್ಲಿ ಚರ್ಚಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಹೇಳಿದ್ದಾರೆ.

ಅಹಮದಾಬಾದ್‌ ಅಧಿವೇಶನದಲ್ಲಿ ಭಾಗವಹಿಸಲು ತೆರಳುವ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಳೆದ ಬೆಳಗಾವಿ ಅಧಿವೇಶನದ ಅವಧಿಯಲ್ಲೇ ಪಕ್ಷ ಸಂಘಟನೆಯ ವಿಷಯವಾಗಿ ಚರ್ಚಿಸಲಾಗಿತ್ತು. ಪಕ್ಷ ಸಂಘಟನೆಯ ವಿಚಾರದಲ್ಲಿ ಎಲ್ಲಾ ವಿಭಾಗಗಳಲ್ಲಿಯೂ ಒಂದೊಂದೇ ಬದಲಾವಣೆ ಮಾಡಲಾಗುತ್ತಿದೆ. ನಾವೆಲ್ಲರೂ ಒಟ್ಟಿಗೆ ಕೆಲಸ ಮಾಡುವುದಕ್ಕೆ ಈ ಸಮಾವೇಶ ಮುನ್ನುಡಿ ಎಂದು ಹೇಳಿದರು.

ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್‌ ಗಾಂಧಿ ಅವರ ನೇತೃತ್ವದಲ್ಲಿ ಪಕ್ಷ ಬಲವರ್ಧನೆಗಾಗಿ ಚರ್ಚೆ ಮಾಡಲಾಗುವುದು. 1924 ರಲ್ಲಿ ಕಾಂಗ್ರೆಸ್‌ ಅಧಿವೇಶನದ ಅಧ್ಯಕ್ಷತೆ ವಹಿಸಿಕೊಂಡಿದ್ದ ಮಹಾತ್ಮ ಗಾಂಧಿ ಅವರು ಏಕ ನಾಯಕತ್ವದಲ್ಲಿ ನಂಬಿಕೆ ಇಟ್ಟವರಲ್ಲ. ಸಾಮೂಹಿಕ ನಾಯಕತ್ವದಲ್ಲಿ ನಂಬಿಕೆ ಇಟ್ಟವರು. ಅದೇ ನಿಟ್ಟಿನಲ್ಲಿ ಈ ಅಧಿವೇಶನ ಮಹತ್ವ ಪಡೆದುಕೊಳ್ಳಲಿದೆ ಎಂದು ತಿಳಿಸಿದರು.

ಈ ಬಾರಿ ಕಾಂಗ್ರೆಸ್‌ನ ಗೆಲುವು ಪ್ರಧಾನಿ ಮೋದಿ ಅವರ ತವರು ಗುಜರಾತಿನಿಂದಲೇ ಆಗಲಿದೆ. ಜೊತೆಗೂಡುವುದು ಆರಂಭ, ಜೊತೆಗೂಡಿ ನಡೆಯುವುದು ಪ್ರಗತಿ ಎನ್ನುವ ಮಾತನ್ನು ನಾನು ಪುನರುಚ್ಚಿಸುತ್ತೇನೆ ಎಂದರು.

Tags:
error: Content is protected !!