ಅಹಮದಾಬಾದ್: ಬ್ಲಾಕ್, ಜಿಲ್ಲಾ, ತಾಲ್ಲೂಕು ಮಟ್ಟದಲ್ಲಿ ಕಾಂಗ್ರೆಸ್ ಪಕ್ಷ ಬಲಪಡಿಸುವ ಬಗ್ಗೆ ಅಹಮಾದಾಬಾದ್ ಅಧೀವೇಶನದಲ್ಲಿ ಚರ್ಚಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಅಹಮದಾಬಾದ್ ಅಧಿವೇಶನದಲ್ಲಿ ಭಾಗವಹಿಸಲು ತೆರಳುವ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಳೆದ ಬೆಳಗಾವಿ ಅಧಿವೇಶನದ ಅವಧಿಯಲ್ಲೇ ಪಕ್ಷ ಸಂಘಟನೆಯ ವಿಷಯವಾಗಿ ಚರ್ಚಿಸಲಾಗಿತ್ತು. ಪಕ್ಷ ಸಂಘಟನೆಯ ವಿಚಾರದಲ್ಲಿ ಎಲ್ಲಾ ವಿಭಾಗಗಳಲ್ಲಿಯೂ ಒಂದೊಂದೇ ಬದಲಾವಣೆ ಮಾಡಲಾಗುತ್ತಿದೆ. ನಾವೆಲ್ಲರೂ ಒಟ್ಟಿಗೆ ಕೆಲಸ ಮಾಡುವುದಕ್ಕೆ ಈ ಸಮಾವೇಶ ಮುನ್ನುಡಿ ಎಂದು ಹೇಳಿದರು.
ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಪಕ್ಷ ಬಲವರ್ಧನೆಗಾಗಿ ಚರ್ಚೆ ಮಾಡಲಾಗುವುದು. 1924 ರಲ್ಲಿ ಕಾಂಗ್ರೆಸ್ ಅಧಿವೇಶನದ ಅಧ್ಯಕ್ಷತೆ ವಹಿಸಿಕೊಂಡಿದ್ದ ಮಹಾತ್ಮ ಗಾಂಧಿ ಅವರು ಏಕ ನಾಯಕತ್ವದಲ್ಲಿ ನಂಬಿಕೆ ಇಟ್ಟವರಲ್ಲ. ಸಾಮೂಹಿಕ ನಾಯಕತ್ವದಲ್ಲಿ ನಂಬಿಕೆ ಇಟ್ಟವರು. ಅದೇ ನಿಟ್ಟಿನಲ್ಲಿ ಈ ಅಧಿವೇಶನ ಮಹತ್ವ ಪಡೆದುಕೊಳ್ಳಲಿದೆ ಎಂದು ತಿಳಿಸಿದರು.
ಈ ಬಾರಿ ಕಾಂಗ್ರೆಸ್‌ನ ಗೆಲುವು ಪ್ರಧಾನಿ ಮೋದಿ ಅವರ ತವರು ಗುಜರಾತಿನಿಂದಲೇ ಆಗಲಿದೆ. ಜೊತೆಗೂಡುವುದು ಆರಂಭ, ಜೊತೆಗೂಡಿ ನಡೆಯುವುದು ಪ್ರಗತಿ ಎನ್ನುವ ಮಾತನ್ನು ನಾನು ಪುನರುಚ್ಚಿಸುತ್ತೇನೆ ಎಂದರು.
ಭೇರ್ಯ ಮಹೇಶ್ ಶಾಸೋಕ್ತವಾಗಿ ನಡೆದ ಕಾರ್ಯಕ್ರಮ; ಮುತ್ತೈದೆಯರ ಮೂಲಕ ಹಸುವಿಗೆ ಸೀರೆ ತೊಡಿಸಿ, ಹಣ್ಣು, ಸಿಹಿ ನೀಡಿP ಕೆ.ಆರ್.ನಗರ :…
ಹನೂರು ತಾಲ್ಲೂಕಿನ ಪಚ್ಚೆದೊಡ್ಡಿ ಶಾಲೆಗೆ ಪದೇಪದೇ ಕಾಡಾನೆ ಲಗ್ಗೆ; ಪೋಷಕರು, ಗ್ರಾಮಸ್ಥರಲ್ಲಿ ಭೀತಿ ಹನೂರು: ಕಾಡಾನೆ ದಾಳಿಯಿಂದ ಪದೇಪದೇ ಶಾಲಾ…
‘ಪ್ರಸ್ತುತ ರಾಜಕೀಯ ನಿಲುವುಗಳು’ ಸಂವಾದದಲ್ಲಿ ಪತ್ರಕರ್ತ ದಿನೇಶ್ ಅಮಿನ್‌ಮಟ್ಟು ಅಭಿಮತ ಮೈಸೂರು: ಚಳವಳಿಗಳ ಉತ್ಪನ್ನವಾಗಿ ಪ್ರಾದೇಶಿಕ ಪಕ್ಷಗಳು ಉಗಮಿಸಬೇಕು. ರಾಷ್ಟ್ರೀಯ…
ರವಿಚಂದ್ರ ಚಿಕ್ಕೆಂಪಿಹುಂಡಿ ರಾಹುಲ್ ಬಳಿ ಅಧಿಕಾರ ಹಂಚಿಕೆ ವಿಚಾರ ಪ್ರಸ್ತಾಪ ತಕ್ಷಣಕ್ಕೆ ಸಿಗದ ಸ್ಪಂದನೆ; ಚರ್ಚೆ ಮುಂದೂಡಿದ ರಾಹುಲ್ ಹೈಕಮಾಂಡ್ ನಾಯಕರಿಂದ…
ಬೆಳಗಾವಿ : ಉತ್ತರ ಕರ್ನಾಟಕದ ಸಮಸ್ಯೆ, ಕಾನೂನು ಸುವ್ಯವಸ್ಥೆಯಲ್ಲಿ ಲೋಪ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಇನ್ನೂ ದೀರ್ಘ ಚರ್ಚೆ…