Mysore
29
overcast clouds

Social Media

ಮಂಗಳವಾರ, 29 ಸೆಪ್ಟೆಂಬರ್ 2026
Light
Dark

ಕರ್ನಾಟಕದಲ್ಲಿ ರೈತರ ಸಾವು ಹೆಚ್ಚಾಗಲು ಕಾರಣ ಹೇಳಿದ ಪ್ರಧಾನಿ ನರೇಂದ್ರ ಮೋದಿ

ಚಂಡೀಗಢ: ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಹಲವಾರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಗಂಭೀರ ಆರೋಪ ಮಾಡಿದ್ದಾರೆ.

ಈ ಬಗ್ಗೆ ಚಂಡೀಗಢದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರ ರೈತರ ಜೀವದ ವೈರಿಯಾಗಿದೆ. ಅವರು ರೈತರಿಗೆ ಸುಳ್ಳು ಮಾತ್ರ ಹೇಳುತ್ತಾರೆ. ರೈತರಿಗೆ ನೀಡಿದ ಒಂದೂ ಭರವಸೆಯನ್ನು ಈಡೇರಿಸುವುದಿಲ್ಲ ಎಂದು ಕಿಡಿಕಾರಿದ್ದಾರೆ.

ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ರೈತರಿಗೆಂದು ದೊಡ್ಡ ದೊಡ್ಡ ಭರವಸೆ ನೀಡಿದೆ. ಆದರೆ ಅದು ಒಂದನ್ನೂ ಈಡೇರಿಸುತ್ತಿಲ್ಲ. ಕಾಂಗ್ರೆಸ್‌ ಸಂಪೂರ್ಣ ರೈತರ ವಿರೋಧಿಯಾಗಿದೆ ಎಂದು ಕಿಡಿಕಾರಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ನಮ್ಮ ಸರ್ಕಾರ ಬಂದ ಮೇಲೆ ರೈತರು ನೆಮ್ಮದಿಯಿಂದ ಜೀವನ ನಡೆಸುತ್ತಿದ್ದಾರೆ. ಕಿಸಾನ್‌ ಸಮ್ಮಾನ್‌ ಯೋಜನೆಯಿಂದ ರೈತರಿಗೆ ತುಂಬಾ ಅನುಕೂಲವಾಗಲಿದೆ ಎಂದರು.

Tags:
error: Content is protected !!