ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಆಡಳಿತದ ಅವಧಿಗೆ ಹೋಲಿಸಿದರೆ ನರೇಂದ್ರ ಮೋದಿ ನೇತೃತ್ವದ ಸರ್ಕಾರದ 10 ವರ್ಷಗಳ ಅವಧಿಯಲ್ಲಿ 5 ಪಟ್ಟು ಅಧಿಕ ಉದ್ಯೋಗ ಸೃಷ್ಟಿಯಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.
ಬಿಜೆಪಿ ನೇತೃತ್ವದ ಆಡಳಿತದ ಅವಧಿಯಲ್ಲಿ ದೇಶದಲ್ಲಿ ಉದ್ಯೋಗಗಳ ಸೃಷ್ಟಿ ಕಡಿಮೆಯಾಗಿದೆ ಎಂದು ಸರ್ಕಾರದ ಮೇಲೆ ಒತ್ತಡ ಹೇರುತ್ತಿರುವ ಹಿನ್ನಲೆಯಲ್ಲಿ ಕೇಂದ್ರ ಸಚಿವರು ಮಾಹಿತಿ ನೀಡಿದ್ದಾರೆ.
2014-15ರ ಅವಧಿಯಲ್ಲಿ 47.15 ಕೋಟಿ ಇದ್ದ ಉದ್ಯೋಗವಕಾಶವು 2023-24ರಲ್ಲಿ ಶೇ.36 ರಷ್ಟು ಏರಿಕೆಯಾಗಿದೆ ಎಂದು ಕೇಂದ್ರ ಕಾರ್ಮಿಕ ಸಚಿವ ಮನ್ಸುಖ್ ಮಾಂಡವೀಯ ತಿಳಿಸಿದ್ದಾರೆ.
2004-14ರ ನಡುವಿನ ಕಾಂಗ್ರೆಸ್ ನೇತೃತ್ವದ ಆಡಳಿತದ ಅವಧಿಯಲ್ಲಿ ಭಾರತದಲ್ಲಿ ಉದ್ಯೋಗವು ಕೇವಲ 7 ಪ್ರತಿಶತದಷ್ಟು ಬೆಳೆದಿದೆ. ಇವರ ಅವಧಿಯಲ್ಲಿ 2.9 ಕೋಟಿ ಉದ್ಯೋಗ ಹೆಚ್ಚುವರಿಯಾಗಿ ಸೃಷ್ಟಿಯಾಗಿದೆ.
ಆದರೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಅವಧಿಯಲ್ಲಿ 2014-24ರ ನಡುವೆ 17.19 ಕೋಟಿ ಉದ್ಯೋಗ ಹೆಚ್ಚುವರಿಯಾಗಿ ಸೇರ್ಪಡೆಗೊಂಡಿವೆ. ಕಳೆದ ವರ್ಷ ದೇಶದಲ್ಲಿ ಸುಮಾರು 4.6 ಕೋಟಿ ಉದ್ಯೋಗಗಳು ಸೃಷ್ಟಿಯಾಗಿವೆ ಎಂದು ಮನ್ಸುಖ್ ಮಾಂಡವೀಯ ಮಾಹಿತಿ ನೀಡಿದ್ದು, ವಿರೋಧ ಪಕ್ಷಗಳಿಗೆ ಟಾಂಗ್ ನೀಡಿದ್ದಾರೆ.
ನವದೆಹಲಿ: ಮೇ.3ರಂದು ನಡೆದಿದ್ದ ನೀಟ್ ಯುಜಿ ಪರೀಕ್ಷೆಯನ್ನು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ರದ್ದುಗೊಳಿಸಿದೆ. ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಎನ್‌ಜಿಎ…
ಗುವಾಹಟಿ: ಹಿಮಂತ ಬಿಸ್ವಾ ಶರ್ಮಾ ಅವರು ಸತತ ಎರಡನೇ ಬಾರಿಗೆ ಅಸ್ಸಾಂನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಗುವಾಹಟಿಯ ಖಾನಾಪಾರಾದಲ್ಲಿರುವ ಪಶುವೈದ್ಯಕೀಯ…
ಮೈಸೂರು: SIR ಮೂಲಕ ರಾಜ್ಯದ 86 ಲಕ್ಷ ಮತದಾರರ ಹಕ್ಕಿಗೆ ಕನ್ನ ಹಾಕುವ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಕೆಪಿಸಿಸಿ ವಕ್ತಾರ…
ಚೆನ್ನೈ: ತಮಿಳುನಾಡು ವಿಧಾನಸಭಾ ಸ್ಪೀಕರ್ ಆಗಿ ಶಾಸಕ ಜೆಸಿಡಿ ಪ್ರಭಾಕರ್ ಅವರಿಂದು ಸರ್ವಾನುಮತದಿಂದ ಆಯ್ಕೆಯಾದರು. ಸಿಎಂ ವಿಜಯ್ ಅವರು ಪ್ರಭಾಕರ್…
ಮಂಡ್ಯ: ರಾಜ್ಯದಲ್ಲಿ ತಾಪಮಾನ ಏರಿಕೆಯಾಗುತ್ತಿದ್ದಂತೆ ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ 90 ಅಡಿಗೆ ಕುಸಿದಿದೆ. 124.80 ಅಡಿ ಗರಿಷ್ಠ ಮಟ್ಟವನ್ನು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ…