Mysore
29
few clouds

Social Media

ಶುಕ್ರವಾರ, 25 ಏಪ್ರಿಲ 2025
Light
Dark

ಗಣಿಗಾರಿಕೆ ಮೇಲೆ ರಾಜ್ಯ ಸರ್ಕಾರದಿಂದ ಹೆಚ್ಚು ತೆರಿಗೆ: ಕೇಂದ್ರ ಕಾನೂನು ಸಚಿವರ ಜೊತೆ ಎಚ್‌ಡಿಕೆ ಸಭೆ

ನವದೆಹಲಿ: ಕರ್ನಾಟಕ ಸರ್ಕಾರ ಗಣಿಗಾರಿಕೆ ಉದ್ಯಮದ ಮೇಲೆ ಹೆಚ್ಚುವರಿ ತೆರಿಗೆ ವಿಧಿಸುತ್ತಿದೆ. ಇದು ಗಣಿ ಮತ್ತು ಉಕ್ಕು ವಲಯಗಳ ಬೆಳವಣಿಗೆಯ ಮೇಲೆ ಗಂಭೀರ ಪರಿಣಾಮ ಬೀರುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಂದು ಕೇಂದ್ರ ಕಾನೂನು ಸಚಿವ ಅರ್ಜುನ್‌ ರಾಮ್‌ ಮೇಘವಾಲ್‌ ಮತ್ತು ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದರು.

ಸಭೆಯಲ್ಲಿ ಮಾತನಾಡಿದ ಎಚ್.ಡಿ.ಕುಮಾರಸ್ವಾಮಿ ಅವರು, ರಾಜ್ಯ ಸರ್ಕಾರ ಹೆಚ್ಚುವರಿ ತೆರಿಗೆ ವಿಧಿಸುತ್ತಿರುವುದರಿಂದ ದೇಶೀಯ ಉಕ್ಕು ಮತ್ತು ಗಣಿ ಉದ್ಯಮದ ಮೇಲೆ ನಕರಾತ್ಮಕ ಪರಿಣಾಮ ಬೀರುತ್ತಿದೆ. ಹಾಗೆಯೇ ಗಣಿ ಮತ್ತು ಉಕ್ಕು ವಲಯದ ಸಾಧಕ-ಭಾದಕಗಳ ಮಹತ್ವದ ಅಂಶಗಳ ಬಗ್ಗೆ ಸಭೆಯಲ್ಲಿ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ್ದಾರೆ. ಜೊತೆಗೆ ಜಗತ್ತಿನ ಮೂರನೇ ಬೃಹತ್‌ ಆರ್ಥಿಕ ಶಕ್ತಿಯಾಗಿ ಭಾರತ ಹೊರಹೊಮ್ಮುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ನಿರ್ಣಾಯಕ ಹೆಜ್ಜೆ ಇಡುತ್ತಿದ್ದಾರೆ ಎಂದು ಹೇಳಿದರು.

ಮುಖ್ಯವಾಗಿ 2030ರ ವೇಳೆಗೆ ಭಾರತವು 300 ದಶಲಕ್ಷ ಟನ್‌ ಉಕ್ಕು ಉತ್ಪಾದನೆ ಮಾಡುವ ಗುರಿ ನಿಗದಿ ಹೊಂದಿದೆ. ಇಂತಹ ಮಹತ್ವದ ಗುರಿ ಇರುವಾಗ ಗಣಿಗಾರಿಕೆ ಕ್ಷೇತ್ರದಲ್ಲಿರುವ ಅಡೆತಡೆಗಳನ್ನು ನಿವಾರಣೆ ಮಾಡಿಕೊಳ್ಳಬೇಕಾಗಿದೆ ಎಂದು ಹೇಳಿದರು. ಎಚ್‌ಡಿಕೆ ಮಾತಿಗೆ ಕೇಂದ್ರ ಕಾನೂನು ಸಚಿವ ಅರ್ಜುನ್‌ ರಾಮ್‌ ಮೇಘವಾಲ್‌ ಧ್ವನಿಗೂಡಿಸಿದರು.

 

 

Tags: