ನವದೆಹಲಿ: ಕರ್ನಾಟಕ ಸರ್ಕಾರ ಗಣಿಗಾರಿಕೆ ಉದ್ಯಮದ ಮೇಲೆ ಹೆಚ್ಚುವರಿ ತೆರಿಗೆ ವಿಧಿಸುತ್ತಿದೆ. ಇದು ಗಣಿ ಮತ್ತು ಉಕ್ಕು ವಲಯಗಳ ಬೆಳವಣಿಗೆಯ ಮೇಲೆ ಗಂಭೀರ ಪರಿಣಾಮ ಬೀರುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಮತ್ತು ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದರು.
ಸಭೆಯಲ್ಲಿ ಮಾತನಾಡಿದ ಎಚ್.ಡಿ.ಕುಮಾರಸ್ವಾಮಿ ಅವರು, ರಾಜ್ಯ ಸರ್ಕಾರ ಹೆಚ್ಚುವರಿ ತೆರಿಗೆ ವಿಧಿಸುತ್ತಿರುವುದರಿಂದ ದೇಶೀಯ ಉಕ್ಕು ಮತ್ತು ಗಣಿ ಉದ್ಯಮದ ಮೇಲೆ ನಕರಾತ್ಮಕ ಪರಿಣಾಮ ಬೀರುತ್ತಿದೆ. ಹಾಗೆಯೇ ಗಣಿ ಮತ್ತು ಉಕ್ಕು ವಲಯದ ಸಾಧಕ-ಭಾದಕಗಳ ಮಹತ್ವದ ಅಂಶಗಳ ಬಗ್ಗೆ ಸಭೆಯಲ್ಲಿ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ್ದಾರೆ. ಜೊತೆಗೆ ಜಗತ್ತಿನ ಮೂರನೇ ಬೃಹತ್ ಆರ್ಥಿಕ ಶಕ್ತಿಯಾಗಿ ಭಾರತ ಹೊರಹೊಮ್ಮುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ನಿರ್ಣಾಯಕ ಹೆಜ್ಜೆ ಇಡುತ್ತಿದ್ದಾರೆ ಎಂದು ಹೇಳಿದರು.
ಮುಖ್ಯವಾಗಿ 2030ರ ವೇಳೆಗೆ ಭಾರತವು 300 ದಶಲಕ್ಷ ಟನ್ ಉಕ್ಕು ಉತ್ಪಾದನೆ ಮಾಡುವ ಗುರಿ ನಿಗದಿ ಹೊಂದಿದೆ. ಇಂತಹ ಮಹತ್ವದ ಗುರಿ ಇರುವಾಗ ಗಣಿಗಾರಿಕೆ ಕ್ಷೇತ್ರದಲ್ಲಿರುವ ಅಡೆತಡೆಗಳನ್ನು ನಿವಾರಣೆ ಮಾಡಿಕೊಳ್ಳಬೇಕಾಗಿದೆ ಎಂದು ಹೇಳಿದರು. ಎಚ್‌ಡಿಕೆ ಮಾತಿಗೆ ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಧ್ವನಿಗೂಡಿಸಿದರು.
ಮೈಸೂರು : ಜಿಲ್ಲೆಯ ಟಿ.ನರಸೀಪುರ ಪಟ್ಟಣದಲ್ಲಿ ಬೆಳ್ಳಂಬೆಳಿಗ್ಗೆಯೇ ಮಚ್ಚು ಲಾಂಗುಗಳಿಂದ ದುಷ್ಕರ್ಮಿಗಳು ಹಲ್ಲೆ ನಡೆಸಿ ವ್ಯಕ್ತಿಯೋರ್ವನನ್ನು ಹತ್ಯೆ ಮಾಡಿರುವ ಘಟನೆ…
ಕೋಲ್ಕತ್ತಾ : ಇಲ್ಲಿನ ವಿಮಾನ ನಿಲ್ದಾಣದಲ್ಲಿ ಫುಟ್ಬಾಲ್ ಮಾಂತ್ರಿಕ ಲಿಯೋನೆಲ್ ಮೆಸ್ಸಿ ಅವರನ್ನು ನೋಡಲು ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಸೇರಿದ್ದರು.…
ನ್ಯೂಯಾರ್ಕ್ : ಭಾರತದ ಮೇಲೆ ಡೊನಾಲ್ಡ್ ಟ್ರಂಪ್ ಹೇರಿರುವ ಶೇ.50 ಪ್ರತಿಸುಂಕವನ್ನು ಅಂತ್ಯಗೊಳಿಸಲು ಅಮೆರಿಕದ ಮೂವರು ಸಂಸದರು ನಿಲುವಳಿ ಮಂಡಿಸಿದ್ದಾರೆ.…
ಹಾಸನ : ಕರ್ತವ್ಯದ ವೇಳೆ ಲಾರಿ ಡಿಕ್ಕಿಯಾಗಿ KSRTC ಬಸ್‌ನ ಚೆಕ್ಕಿಂಗ್ ಇನ್ಸ್ಪೆಕ್ಟರ್ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಆಲೂರು…
ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್ ಡಿಸೋಜ ಮಡಿಕೇರಿ: ಈ ಬಾರಿಯ…
ಭೇರ್ಯ ಮಹೇಶ್ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…