ಹೈದರಾಬಾದ್: ಪ್ರತಿಪಕ್ಷಗಳು ವಿಫಲವಾಗಿರುವುದರಿಂದಲೇ ಬಿಜೆಪಿಯು ಸತತವಾಗಿ ಚುನಾವಣೆಗಳನ್ನು ಗೆಲ್ಲುತ್ತಿದೆ. ಏಕೆಂದರೆ ಅದು ಹಿಂದೂ ಮತಗಳನ್ನು ಕ್ರೋಢೀಕರಿಸಿದೆ ಎಂದು ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರು ಮೋದಿ ವಿರೋಧಿಗಳಿಗೆ ತಿರುಗೇಟು ಕೊಟ್ಟಿದ್ದಾರೆ.
ಈ ಕುರಿತು ಮಾತನಾಡಿರುವ ಸಂಸದ ಅಸಾದುದ್ದೀನ್ ಓವೈಸಿ ಅವರು, ನೀವು ನನ್ನ ಮೇಲೆ ಹೇಗೆ ಆರೋಪ ಹೊರಿಸುತ್ತೀರಿ, 2024ರ ಸಂಸತ್ ಚುನಾವಣೆಯಲ್ಲಿ ನಾನು ಹೈದರಾಬಾದ್, ಔರಂಗಾಬಾದ್, ಕಿಶನ್‍ಗಂಜ್ ಮತ್ತು ಇತರ ಕೆಲವು ಸ್ಥಾನಗಳಲ್ಲಿ ಸ್ಪರ್ಧಿಸಿದರೆ ಮತ್ತು ಬಿಜೆಪಿ 240 ಸ್ಥಾನಗಳನ್ನು ಪಡೆದರೆ ನಾನೇ ಹೊಣೆಯೇ? ಎಂದು ಪ್ರಶ್ನೆ ಮಾಡಿದ್ದಾರೆ.
ಬಿಜೆಪಿ ಅಧಿಕಾರಕ್ಕೆ ಬರುತ್ತಿದೆ. ಏಕೆಂದರೆ ಪ್ರತಿಪಕ್ಷಗಳು ವಿಫಲವಾಗಿವೆ. ಬಿಜೆಪಿಯು ಸುಮಾರು ಶೇಕಡಾ 50ರಷ್ಟು ಹಿಂದೂ ಮತಗಳನ್ನು ಕೋಢೀಕರಿಸಿದ ಕಾರಣ ಚುನಾವಣೆಯಲ್ಲಿ ಗೆಲ್ಲುತ್ತಿದೆ. ಅವರನ್ನು ದೂಷಿಸುವ ಪ್ರಯತ್ನಗಳು ಮತ್ತು ಬಿಜೆಪಿಯ ಬಿ-ಟೀಮ್ ಎಂದು ಕರೆಯುವ ಪ್ರಯತ್ನಗಳು ತಮ್ಮ ಪಕ್ಷಕ್ಕೆ ವಿರೋಧ ಪಕ್ಷದ ದ್ವೇಷ ಹೊರತು ಬೇರೇನೂ ಅಲ್ಲ. ಏಕೆಂದರೆ ಅದು ಮುಸ್ಲಿಮರನ್ನು ಹೆಚ್ಚಾಗಿ ಪ್ರತಿನಿಧಿಸುತ್ತದೆ ಎಂದರು.
ಕಾಂಗ್ರೆಸ್‍ನಂತಹ ವಿರೋಧ ಪಕ್ಷಗಳು ಓವೈಸಿಯ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ಪಕ್ಷವನ್ನು ಹೈದರಾಬಾದ್ ಪ್ರದೇಶದ ಹೊರಗೆ ತನ್ನ ಭದ್ರಕೋಟೆಯ ಹೊರಗೆ ಬೆಳೆಸುವ ಪ್ರಯತ್ನಗಳನ್ನು ಅಪಹಾಸ್ಯ ಮಾಡಿದ್ದು, ಬಹುತೇಕ ಮುಸ್ಲಿಮರ ಮತಗಳನ್ನು ಕಸಿದುಕೊಳ್ಳುವ ಮೂಲಕ ಬಿಜೆಪಿಗೆ ಲಾಭದಾಯಕವಾಗಿದೆ ಎಂದು ಹೇಳಿದರು.
ಚಾಮರಾಜನಗರ : ಆರು ತಿಂಗಳ ಹೆಣ್ಣು ಮಗುವನ್ನು ಮಾರಾಟ ಮಾಡಿರುವ ಪ್ರಕರಣ ನಗರದಲ್ಲಿ ನಡೆದಿದ್ದು, ಈ ಸಂಬಂಧ ಪೋಷಕರು ಸೇರಿದಂತೆ…
ಹನೂರು : ಜಮೀನಿನಲ್ಲಿ ಹುರುಳಿ ಫಸಲನ್ನು ಹಸು ಮೇಯ್ದಿದ್ದದನ್ನು ಪ್ರಶ್ನೆಸಿದ್ದಕ್ಕೆ ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ…
ಹಾಸನ : ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಸಿದ್ಧತೆ ನಡೆಸುವ ಸಂದೇಶವನ್ನು ರಾಜ್ಯದ ಜನರಿಗೆ ತಲುಪಿಸುವ ಗುರಿಯೊಂದಿಗೆ ನಗರದಲ್ಲಿ ಆಯೋಜಿಸಿದ್ದ…
ಮಳವಳ್ಳಿ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹತ್ತುಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಹೊಸಹಳ್ಳಿ…
ನಂಜನಗೂಡು : ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿನ ಅನಧಿಕೃತ ಅಂಗಡಿಗಳನ್ನು ಇಂದು(ಜ.24) ಮತ್ತೋಮ್ಮೆ ತೆರವು ಗೊಳಿಸಲಾಯಿತು. ದೇವಾಲಯದ ನೂತನ ಕಾರ್ಯನಿರ್ವಾಹಕ ಅಧಿಕಾರ…
ಮುಂಬೈ : ಸೌದಿ ಅರೇಬಿಯಾದಿಂದ ಅಂತರರಾಷ್ಟ್ರೀಯ ಕೊರಿಯರ್ ಟರ್ಮಿನಲ್‌ನಲ್ಲಿ ಸಾಗಿಸುತ್ತಿದ್ದ ಗ್ರೈಂಡರ್‌ನಲ್ಲಿ ಬಚ್ಚಿಟ್ಟಿದ್ದ 2.89 ಕೋಟಿ ರೂ.ಮೌಲ್ಯದ ಚಿನ್ನವನ್ನು ಕಂದಾಯ…