ನವದೆಹಲಿ: ಸಂಸದ ಜಗದೀಶ್ ಶೆಟ್ಟರ್ ಅವರಿಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಬೆಂಗಳೂರು-ಧಾರವಾಡದ ನಡುವೆ ಸಂಚರಿಸುತ್ತಿರುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸಂಚಾರವನ್ನು ಬೆಳಗಾವಿಯವರೆಗೂ ವಿಸ್ತರಿಸಬೇಕು ಎಂದು ಮನವಿ ಮಾಡಿದರು.
ಇಂದು ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ಸಂಸದ ಜಗದೀಶ್ ಶೆಟ್ಟರ್ ಅವರು, ಹುಬ್ಬಳ್ಳಿ ಸಾಹಿತ್ಯ ಭಂಡಾರ ಪ್ರಕಟಿಸಿದ “ಟೆಂಪಲ್ ಟ್ರೆಷರ್ಸ್: ಎ ಜರ್ನಿ ಥ್ರೂ ಟೈಮ್” ಪುಸ್ತಕವನ್ನು ನೀಡಿ, ಹೊಸ ವರ್ಷದ ಶುಭಾಶಯ ತಿಳಿಸಿದರು.
ಬಳಿಕ ಸವದತ್ತಿಯಲ್ಲಿರುವ ಶ್ರೀ ರೇಣುಕಾ ಯೆಲ್ಲಮ್ಮ ದೇವಾಲಯದ ಪುನರಾಭಿವೃದ್ಧಿಗಾಗಿ ₹100 ಕೋಟಿ ಮಹತ್ವದ ನಿಧಿಯನ್ನು ಘೋಷಿಸಿದ್ದಕ್ಕಾಗಿ ಪ್ರಧಾನಿ ಮೋದಿಯವರಿಗೆ ಕೃತಜ್ಞತೆ ಸಲ್ಲಿಸಿದರು. ಬಳಿಕ ರಾಮದುರ್ಗದ ಐತಿಹಾಸಿಕ ಶಬರಿ ಕೊಲ್ಲದ ಅಭಿವೃದ್ಧಿಗೆ ಬೆಂಬಲ ಕೋರಿದರು.
ಹೆಚ್ಚುವರಿಯಾಗಿ, ಬೆಳಗಾವಿ ಕ್ಷೇತ್ರದ ಜನರ ಬಹುಕಾಲದ ಬೇಡಿಕೆಯನ್ನು ಪೂರೈಸುವ ಮೂಲಕ ಬೆಂಗಳೂರು ಮತ್ತು ಧಾರವಾಡದ ನಡುವೆ ಪ್ರಸ್ತುತ ಓಡುತ್ತಿರುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಬೆಳಗಾವಿಗೆ ವಿಸ್ತರಿಸುವಂತೆ ಮನವಿ ಮಾಡಿದರು.
ಇದಲ್ಲದೆ, ಬೆಳಗಾವಿ ಮತ್ತು ಇತರ ಟೈಯರ್-2 ನಗರಗಳಿಗೆ ವಿಮಾನ ಪ್ರಯಾಣ ಸಂಪರ್ಕವನ್ನು ಸುಧಾರಿಸಲು ಉಡಾನ್ 3.0 ಯೋಜನೆಯ ಪ್ರಯೋಜನಗಳನ್ನು ವಿಸ್ತರಿಸುವಂತೆ ಒತ್ತಾಯಿಸಿದರು.
ಇದಕ್ಕೆ ಸ್ಪಂದಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಈ ಪ್ರಮುಖ ವಿಷಯಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಸಚಿವಾಲಯಗಳಿಗೆ ಸೂಚನೆ ನೀಡುವುದಾಗಿ ಭರವಸೆ ನೀಡಿದ್ದಾರೆ.
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…
ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…
ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…
ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…