Mysore
14
few clouds

Social Media

ಗುರುವಾರ, 22 ಜನವರಿ 2026
Light
Dark

ಅಂಗನವಾಡಿ ಕಾರ್ಯಕರ್ತೆಯರು, ಬಿಸಿಯೂಟ ಸಿಬ್ಬಂದಿಯ ಸಮಸ್ಯೆಗಳ ಬಗ್ಗೆ ಕೇಂದ್ರದ ಮುಂದಿಟ್ಟ ಸಂಸದ ಕೆ.ಸುಧಾಕರ್‌

ನವದೆಹಲಿ: ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಬಿಸಿಯೂಟ ಸಿಬ್ಬಂದಿಯ ಗೌರವಧನ ಹೆಚ್ಚಳ ಹಾಗೂ ಸಾಮಾಜಿಕ ಭದ್ರತೆಯ ಬಗ್ಗೆ ಸಂಸದ ಡಾ.ಕೆ.ಸುಧಾಕರ್‌ ಅವರು ಕೇಂದ್ರ ಸರ್ಕಾರ ಗಮನ ಸೆಳೆದಿದ್ದಾರೆ.

ರಾಜ್ಯದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಬಿಸಿಯೂಟ ಸಿಬ್ಬಂದಿ ಧರಣಿ ನಡೆಸುತ್ತಿರುವ ಸಮಯದಲ್ಲೇ ಸಂಸದ ಸುಧಾಕರ್‌ ಅವರು ಲೋಕಸಭೆಯಲ್ಲಿ ಶೂನ್ಯವೇಳೆಯಲ್ಲಿ ಈ ಸಮಸ್ಯೆ ಕುರಿತು ಮಾತನಾಡಿದರು.

ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಬಿಸಿಯೂಟ ಸಿಬ್ಬಂದಿಯಲ್ಲಿ ಬಹುತೇಕ ಬಡಕುಟುಂಬದ ಮಹಿಳೆಯರೇ ಆಗಿದ್ದಾರೆ. ಶಾಲಾ ಮಕ್ಕಳಿಗೆ ಬಿಸಿಯೂಟ ಪೂರೈಕೆ, ಅಪೌಷ್ಟಿಕತೆ ನಿವಾರಣೆ, ಗರ್ಭಿಣಿಯರು ಹಾಗೂ ತಾಯಂದಿರಿಗೆ ಸರ್ಕಾರಿ ಯೋಜನೆಗಳ ನೆರವು ಸೇರಿದಂತೆ ಹಲವಾರು ವಿಧದಲ್ಲಿ ಇವರು ಕಾರ್ಯನಿರ್ವಹಿಸುತ್ತಿದ್ದಾರೆ. ಅಪೌಷ್ಟಿಕತೆ ವಿರುದ್ಧ ಹೋರಾಡುತ್ತಿರುವ ಈ ಮಹಿಳೆಯರು ಅತೀ ಕಡಿಮೆ ಗೌರವಧನ ಪಡೆಯುತ್ತಿದ್ದು, ಆರ್ಥಿಕವಾಗಿ ತೀರಾ ದುರ್ಬಲರಾಗಿದ್ದಾರೆ ಎಂಬುದು ಬೇಸರದ ಸಂಗತಿ. ಆದ್ದರಿಂದ ಹೋರಾಟ ಮಾಡುತ್ತಿರುವ ಮಹಿಳೆಯರ ಅಹವಾಲುಗಳನ್ನು ಕೇಂದ್ರ ಸರ್ಕಾರ ಆಲಿಸಬೇಕು ಎಂದು ಮನವಿ ಮಾಡಿದರು.

Tags:
error: Content is protected !!