ನವದೆಹಲಿ: ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಬಿಸಿಯೂಟ ಸಿಬ್ಬಂದಿಯ ಗೌರವಧನ ಹೆಚ್ಚಳ ಹಾಗೂ ಸಾಮಾಜಿಕ ಭದ್ರತೆಯ ಬಗ್ಗೆ ಸಂಸದ ಡಾ.ಕೆ.ಸುಧಾಕರ್ ಅವರು ಕೇಂದ್ರ ಸರ್ಕಾರ ಗಮನ ಸೆಳೆದಿದ್ದಾರೆ.
ರಾಜ್ಯದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಬಿಸಿಯೂಟ ಸಿಬ್ಬಂದಿ ಧರಣಿ ನಡೆಸುತ್ತಿರುವ ಸಮಯದಲ್ಲೇ ಸಂಸದ ಸುಧಾಕರ್ ಅವರು ಲೋಕಸಭೆಯಲ್ಲಿ ಶೂನ್ಯವೇಳೆಯಲ್ಲಿ ಈ ಸಮಸ್ಯೆ ಕುರಿತು ಮಾತನಾಡಿದರು.
ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಬಿಸಿಯೂಟ ಸಿಬ್ಬಂದಿಯಲ್ಲಿ ಬಹುತೇಕ ಬಡಕುಟುಂಬದ ಮಹಿಳೆಯರೇ ಆಗಿದ್ದಾರೆ. ಶಾಲಾ ಮಕ್ಕಳಿಗೆ ಬಿಸಿಯೂಟ ಪೂರೈಕೆ, ಅಪೌಷ್ಟಿಕತೆ ನಿವಾರಣೆ, ಗರ್ಭಿಣಿಯರು ಹಾಗೂ ತಾಯಂದಿರಿಗೆ ಸರ್ಕಾರಿ ಯೋಜನೆಗಳ ನೆರವು ಸೇರಿದಂತೆ ಹಲವಾರು ವಿಧದಲ್ಲಿ ಇವರು ಕಾರ್ಯನಿರ್ವಹಿಸುತ್ತಿದ್ದಾರೆ. ಅಪೌಷ್ಟಿಕತೆ ವಿರುದ್ಧ ಹೋರಾಡುತ್ತಿರುವ ಈ ಮಹಿಳೆಯರು ಅತೀ ಕಡಿಮೆ ಗೌರವಧನ ಪಡೆಯುತ್ತಿದ್ದು, ಆರ್ಥಿಕವಾಗಿ ತೀರಾ ದುರ್ಬಲರಾಗಿದ್ದಾರೆ ಎಂಬುದು ಬೇಸರದ ಸಂಗತಿ. ಆದ್ದರಿಂದ ಹೋರಾಟ ಮಾಡುತ್ತಿರುವ ಮಹಿಳೆಯರ ಅಹವಾಲುಗಳನ್ನು ಕೇಂದ್ರ ಸರ್ಕಾರ ಆಲಿಸಬೇಕು ಎಂದು ಮನವಿ ಮಾಡಿದರು.
ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಇಸ್ಕಾನ್ ಸಂಸ್ಥೆಯ ಅಕ್ಷಯಪಾತ್ರೆ ಫೌಂಡೇಶನ್ ಸಹಯೋಗದೊಂದಿಗೆ…
ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಅವರ ಕಚೇರಿಯಲ್ಲಿ ಸಮವಸ್ತ್ರದಲ್ಲಿದ್ದಾಗಲೇ ಮಹಿಳೆಯೊಂದಿಗೆ ನಡೆಸಿದ್ದಾರೆ ಎನ್ನಲಾದ ರಾಸಲೀಲೆಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್…
ಉತ್ತರ ಅಟ್ಲಾಂಟಿಕ್ ಸಮುದ್ರದಲ್ಲಿ ಇರುವ ವಿಶ್ವದ ಅತಿದೊಡ್ಡ ದ್ವೀಪವಾಗಿರುವ ಹಾಗೂ ಡೆನ್ಮಾರ್ಕ್ ದೇಶದ ನಿಯಂತ್ರಣದಲ್ಲಿರುವ ‘ಗ್ರೀನ್ ಲ್ಯಾಂಡ್’ ದ್ವೀಪವನ್ನು ತನ್ನ…
ನವೀನ್ ಡಿಸೋಜ ಅರಣ್ಯ ಇಲಾಖೆಯಿಂದ ಬೆಂಕಿ ರೇಖೆ ನಿರ್ಮಾಣ ಕಾರ್ಯ ಚುರುಕು; ಜನರಲ್ಲಿ ಜಾಗೃತಿ ಮೂಡಿಸಲು ಚಿಂತ ಮಡಿಕೇರಿ: ಬೇಸಿಗೆ…
ಎಂ ಯೋಗಾನಂದ್ ಜ.೨೩ರಿಂದ ೨೬ರವರೆಗೆ ಜಾತ್ರಾ ಮಹೋತ್ಸವ; ಮೆರುಗು ನೀಡಲಿರುವ ಗಾಡಿ ಓಡಿಸುವ ಸ್ಪರ್ಧೆ ಹುಣಸೂರು: ತಾಲ್ಲೂಕಿನ ಬಾಚಳ್ಳಿ ಗ್ರಾಮದಲ್ಲಿ…