ದೇಶ- ವಿದೇಶ

ಇ.ಡಿ. ಸಂಸ್ಥೆ ಪ್ರಧಾನಿ ನರೇಂದ್ರ ಮೋದಿ, ಅಮಿತ್‌ ಶಾ ಅವರ ಸಾಕು ನಾಯಿ: ಸಂಸದ ಮಾಣಿಕ್ಯಂ ಟ್ಯಾಗೋರ್‌

ಚೆನ್ನೈ: ಜಾರಿ ನಿರ್ದೇಶನಾಲಯ(ಇ.ಡಿ.) ಸಂಸ್ಥೆಯೂ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ಸಾಕು ನಾಯಿ ಎಂದು ಕಾಂಗ್ರೆಸ್‌ ಸಂಸದ ಮಾಣಿಕ್ಯಂ ಟ್ಯಾಗೋರ್‌ ಆರೋಪಿಸಿದ್ದಾರೆ.

ಛತ್ತೀಸ್‌ಗಢ ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ಅಲ್ಲಿನ ಮಾಜಿ ಸಿಎಂ ಭೂಪೇಶ್‌ ಬಘೇಲ್‌ ಅವರ ಮಗ ಚೈತನ್ಯ ಅವರಿಗೆ ಸಂಬಂಧಿಸಿದ ಸ್ಥಳಗಳಲ್ಲಿ ಇ.ಡಿ.ಅಧಿಕಾರಿಗಳು ಶೋಧ ನಡೆಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಇ.ಡಿ. ಸಂಸ್ಥೆಯೂ ಮೋದಿ ಮತ್ತು ಅಮಿತ್‌ ಶಾ ಅವರ ಸಾಕು ನಾಯಿಯಾಗಿದೆ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರವಾಗಿದೆ. ಅವರು ಆ ನಾಯಿಯನ್ನು ಎಲ್ಲಿಗೆ ಬೇಕಾದರೂ ಕಳುಹಿಸಬಲ್ಲರು. ಬಘೇಲ್‌ ಕಾಂಗ್ರೆಸ್‌ನ ಪ್ರಬಲ ನಾಯಕರಾಗಿದ್ದು, ಅವರು ಸಾಕಷ್ಟು ಹೋರಾಟಗಳನ್ನು ಮಾಡಿದ್ದಾರೆ. ಹೀಗಾಗಿ ನಮ್ಮ ಪಕ್ಷ ಹಾಗೂ ಛತ್ತೀಸ್‌ಗಢದ ಜನತೆ ಅವರೊಂದಿಗೆ ಇರಲಿದೆ ಎಂದು ಹೇಳಿದ್ದಾರೆ.

ದೇಶದಲ್ಲಿ ಬಿಜೆಪಿ ಮತ್ತು ಆರ್‌ಎಸ್‌ಎಸ್‌ ನಡೆಸುತ್ತಿರುವ ಇಂತಹ ನಕಲಿ ನೀರೂಪಣೆಗಳು ಎಂದಿಗೂ ಯಶಸ್ವಿಯಾಗುವುದಿಲ್ಲವೆಂಬುದು ಎಲ್ಲರಿಗೂ ತಿಳಿದಿದೆ. ಅಲ್ಲದೇ ಹಿಂದುಳಿದ ವರ್ಗದ ನಾಯಕ, ಸಾರ್ವಜನಿಕರೊಂದಿಗೆ ನಿಂತು ಅವರ ಅನೇಕ ಸಮಸ್ಯೆಗಳನ್ನು ಬಗೆಹರಿಸಿದ್ದಕ್ಕಾಗಿ ಬಿಜೆಪಿಯೇ ಅವರನ್ನು ಗುರಿಯಾಗಿದೆ ಎಂದು ತಿಳಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

10 mins ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

12 mins ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

14 mins ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

15 mins ago

ಮೋದಿ ಅಧಿಕಾರ ಪರ್ವ ರಜತ ಮಹೋತ್ಸವ: ಏನಿತ್ತು? ಏನಿಲ್ಲ?

ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…

18 mins ago

ತನ್ನನ್ನು ತಾನೇ ಚಿವುಟಿ ಎಚ್ಚರಿಸಿದ್ದ ನೆಹರೂ

ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…

24 mins ago