ಚೆನ್ನೈ: ಜಾರಿ ನಿರ್ದೇಶನಾಲಯ(ಇ.ಡಿ.) ಸಂಸ್ಥೆಯೂ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಸಾಕು ನಾಯಿ ಎಂದು ಕಾಂಗ್ರೆಸ್ ಸಂಸದ ಮಾಣಿಕ್ಯಂ ಟ್ಯಾಗೋರ್ ಆರೋಪಿಸಿದ್ದಾರೆ.
ಛತ್ತೀಸ್‌ಗಢ ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ಅಲ್ಲಿನ ಮಾಜಿ ಸಿಎಂ ಭೂಪೇಶ್ ಬಘೇಲ್ ಅವರ ಮಗ ಚೈತನ್ಯ ಅವರಿಗೆ ಸಂಬಂಧಿಸಿದ ಸ್ಥಳಗಳಲ್ಲಿ ಇ.ಡಿ.ಅಧಿಕಾರಿಗಳು ಶೋಧ ನಡೆಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಇ.ಡಿ. ಸಂಸ್ಥೆಯೂ ಮೋದಿ ಮತ್ತು ಅಮಿತ್ ಶಾ ಅವರ ಸಾಕು ನಾಯಿಯಾಗಿದೆ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರವಾಗಿದೆ. ಅವರು ಆ ನಾಯಿಯನ್ನು ಎಲ್ಲಿಗೆ ಬೇಕಾದರೂ ಕಳುಹಿಸಬಲ್ಲರು. ಬಘೇಲ್ ಕಾಂಗ್ರೆಸ್‌ನ ಪ್ರಬಲ ನಾಯಕರಾಗಿದ್ದು, ಅವರು ಸಾಕಷ್ಟು ಹೋರಾಟಗಳನ್ನು ಮಾಡಿದ್ದಾರೆ. ಹೀಗಾಗಿ ನಮ್ಮ ಪಕ್ಷ ಹಾಗೂ ಛತ್ತೀಸ್‌ಗಢದ ಜನತೆ ಅವರೊಂದಿಗೆ ಇರಲಿದೆ ಎಂದು ಹೇಳಿದ್ದಾರೆ.
ದೇಶದಲ್ಲಿ ಬಿಜೆಪಿ ಮತ್ತು ಆರ್‌ಎಸ್‌ಎಸ್ ನಡೆಸುತ್ತಿರುವ ಇಂತಹ ನಕಲಿ ನೀರೂಪಣೆಗಳು ಎಂದಿಗೂ ಯಶಸ್ವಿಯಾಗುವುದಿಲ್ಲವೆಂಬುದು ಎಲ್ಲರಿಗೂ ತಿಳಿದಿದೆ. ಅಲ್ಲದೇ ಹಿಂದುಳಿದ ವರ್ಗದ ನಾಯಕ, ಸಾರ್ವಜನಿಕರೊಂದಿಗೆ ನಿಂತು ಅವರ ಅನೇಕ ಸಮಸ್ಯೆಗಳನ್ನು ಬಗೆಹರಿಸಿದ್ದಕ್ಕಾಗಿ ಬಿಜೆಪಿಯೇ ಅವರನ್ನು ಗುರಿಯಾಗಿದೆ ಎಂದು ತಿಳಿಸಿದ್ದಾರೆ.





