ತಿರುವನಂತಪುರಂ: ರಾಷ್ಟ್ರೀಯ ಉದ್ಯಾನವನ ಬಂಡೀಪುರದಲ್ಲಿ ರಾತ್ರಿ ಸಂಚಾರಕ್ಕೆ ಅವಕಾಶ ಮಾಡಿಕೊಡುವುದೇ ನನ್ನ ಗುರಿ ಎಂದು ವಯನಾಡು ಕ್ಷೇತ್ರದ ಸಂಸದೆ ಪ್ರಿಯಾಂಕಾ ಗಾಂಧಿ ಭರವಸೆ ನೀಡಿದ್ದಾರೆ.
ರಾಹುಲ್ ಗಾಂಧಿ ಜೊತೆ ಕ್ಷೇತ್ರ ಪ್ರವಾಸ ಕೈಗೊಂಡಿರುವ ಪ್ರಿಯಾಂಕಾ ಗಾಂಧಿ ಅವರು, ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ್ದಾರೆ.
ಬಂಡೀಪುರ ಭಾಗದಲ್ಲಿ ರಾತ್ರಿ ಸಂಚಾರಕ್ಕೆ ಅವಕಾಶ ಇಲ್ಲದಿರುವುದರಿಂದ ನಿಮಗೆ ಎಷ್ಟು ಸಮಸ್ಯೆ ಆಗುತ್ತಿದೆ ಎಂಬುದು ನನಗೆ ಗೊತ್ತಾಗಿದೆ. ಈ ಸಮಸ್ಯೆಯನ್ನು ಇತ್ಯರ್ಥ ಮಾಡುವುದೇ ನನ್ನ ಗುರಿ ಎಂದರು.
ನನಗೆ ನೈಟ್ ಬ್ಯಾನ್ ವಿಚಾರವೂ ಗೊತ್ತು. ಮನುಷ್ಯ-ಪ್ರಾಣಿಗಳ ನಡುವಿನ ಸಂಘರ್ಷದ ವಿಚಾರವೂ ಗೊತ್ತು. ನಿಮ್ಮೆಲ್ಲರ ಪರವಾಗಿ ನಾನು ಹೋರಾಟ ಮಾಡುತ್ತೇನೆ ಎಂದು ಭರವಸೆ ನೀಡಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ನನ್ನ ಮನೆ ಹಾಗೂ ಕಚೇರಿ ನಿಮಗಾಗಿ ತೆರೆದಿರುತ್ತದೆ. ನಾನು ನಿಮ್ಮನ್ನು ನಿರಾಸೆಗೊಳಿಸಲ್ಲ ಎಂದು ಜನರಿಗೆ ಅಭಯ ನೀಡಿದರು.