Mysore
20
overcast clouds

Social Media

ಮಂಗಳವಾರ, 27 ಜನವರಿ 2026
Light
Dark

ಈ ದೇಶದ ಸಂವಿಧಾನ ಸಂಘದ ನಿಯಮ ಪುಸ್ತಕವಲ್ಲ: ಮೋದಿ ವಿರುದ್ಧ ಪ್ರಿಯಾಂಕಾ ಗಾಂಧಿ ಕಿಡಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಈ ಸಂವಿಧಾನವನ್ನು ಸಂಘದ ನಿಯಮ ಪುಸ್ತಕವಲ್ಲ ಎಂಬುದನ್ನು ಅರಿತುಕೊಂಡಿಲ್ಲ ಎಂದು ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಕಿಡಿಕಾರಿದ್ದಾರೆ.

ಲೋಕಸಭೆಯ ಸಂಸತ್‌ ಅಧಿವೇಶನ ಕಲಾಪದಲ್ಲಿ ಇಂದು(ಡಿ.13) ಮೊದಲ ಚೊಚ್ಚಲ ಭಾಷಣ ಮಾಡಿದ ಅವರು, ಬಿಜೆಪಿ ಸರ್ಕಾರವು ಕಳೆದ 10 ವರ್ಷಗಳಲ್ಲಿ ಸಂವಿಧಾನವನ್ನು ನಾಶಗೊಳಿಸಲು ಪ್ರಯತ್ನಿಸಿದ್ದು, ತನ್ನಿಂದ ಸಾಧ್ಯವಾಗುವಷ್ಟು ಎಲ್ಲಾ ಕಾರ್ಯಗಳನ್ನು ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ನಮ್ಮ ದೇಶದ ಲಿಖಿತ ಸಂವಿಧಾನವು ಸಂಘದ ನಿಯಮ ಪುಸ್ತಕವಲ್ಲ ಎಂಬುದನ್ನು ಮೋದಿ ಅವರು ಇನ್ನು ಅರ್ಥಮಾಡಿಕೊಂಡಿಲ್ಲ. ನಮ್ಮ ಸಂವಿಧಾನ ನ್ಯಾಯ, ಸಮಾನತೆ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯದ ರಕ್ಷಣಾ ಕವಚಗಳಾಗಿವೆ. ಅವುಗಳನ್ನು ಮೋದಿಯವರು ಅರಿತುಕೊಳ್ಳಬೇಕು ಎಂದು ಹೇಳಿದ್ದಾರೆ.

ಸಂಭಲ್‌ ಹಾಗೂ ಮಣಿಪುರ ಹಿಂಸಾಚಾರ ವಿಚಾರದಲ್ಲಿ ಮೌನ ತಾಳಿರುವ ಮೋದಿ ನೇತೃತ್ವದ ಕೇಂದ್ರ ಸರ್ಕಾರವೂ ಸಂತ್ರಸ್ಥರಿಗೆ ನ್ಯಾಯ ಒದಗಿಸುವಲ್ಲಿ ಸಂಪೂರ್ಣ ವೈಫಲ್ಯವಾಗಿದೆ . ಕೇಂದ್ರ ಸರ್ಕಾರ, ಲ್ಯಾಟರಲ್‌ ಎಂಟ್ರಿ ಎಂಬ ಖಾಸಗೀಕರಣದ ಮೂಲಕ ಮೀಸಲಾತಿಯನ್ನು ದುರ್ಬಲಗೊಳಿಸಲು ಪ್ರಯತ್ನಿಸುತ್ತಿದೆ. ಒಂದು ವೇಳೆ ಈಗಿನ ತರ ಲೋಕಸಭಾ ಚುನಾವಣಾ ಫಲಿತಾಂಶ ಬರದಿದ್ದರೆ, ದೇಶದ ಸಂವಿಧಾನವನ್ನೇ ಬದಲಾಯಿಸುವ ಕಾರ್ಯ ಆರಂಭಿಸುತ್ತಿದ್ದರು ಎಂದು ವಾಗ್ದಾಳಿ ನಡೆಸಿದ್ದಾರೆ.

ಇನ್ನು ಲೋಕಸಭೆಯಲ್ಲಿ ಪ್ರಿಯಾಂಕಾ ಗಾಂಧಿ ಅವರ ಚೊಚ್ಚಲ ಭಾಷಣಕ್ಕೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್‌ ಸಂಸದೀಯ ಪಕ್ಷದ ಅಧ್ಯಕ್ಷರಾದ ಸೋನಿಯಾ ಗಾಂಧಿ ಹಾಗೂ ಸಂಸದ ಶಶಿ ತರೂರ್‌ ಸೇರಿದಂತೆ ಇಂಡಿಯಾ ಮೈತ್ರಿಕೂಟದ ಹಲವು ನಾಯಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Tags:
error: Content is protected !!