ದೇಶ- ವಿದೇಶ

ಐರನ್‌ ಮ್ಯಾನ್‌ 70.3 ರೇಸ್‌: ಸ್ಪರ್ಧೆ ಪೂರ್ಣಗೊಳಿಸಿದ ಸಂಸದ ತೇಜಸ್ವಿ ಸೂರ್ಯ

ನವದೆಹಲಿ: ಗೋವಾದಲ್ಲಿ ನಡೆದ ಐರನ್‌ ಮ್ಯಾನ್‌ 70.3 ಚಾಲೆಂಜ್‌ನಲ್ಲಿ ಸಂಸದ ತೇಜಸ್ವಿ ಸೂರ್ಯ ಅವರು ಇತರೆ ಸ್ಪರ್ಧಿಗಳ ಜೊತೆ ಒಟ್ಟು 113 ಕಿ.ಮೀ.ನಷ್ಟು ದೂರ ಕ್ರಮಿಸಿ ಟ್ರಿಯಾಥ್ಲಾನ್‌ ಸವಾಲಿನಲ್ಲಿ ಪಾಲ್ಗೊಂಡ ಪ್ರಥಮ ಸಂಸದ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಈ ರೇಸ್‌ನ್ನು ತೇಜಸ್ವಿ ಸೂರ್ಯ ಅವರು, ಕೇವಲ 8 ಗಂಟೆ 27 ನಿಮಿಷ 32 ಸೆಕೆಂಡ್‌ಗಳಲ್ಲಿ ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ. ಅಲ್ಲದೇ, ಈ ಸ್ಪರ್ಧೆಯಲ್ಲಿ 1.9 ಕಿ.ಮೀ ಈಜು, 90 ಕಿ.ಮೀ. ಸೈಕ್ಲಿಂಗ್‌ ಹಾಗೂ 21.1 ಕಿ.ಮೀ. ಓಟ ಸೇರಿದಂತೆ ಒಟ್ಟು 113 ಕಿ.ಮೀ. ದೂರ ಕ್ರಮಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಎಕ್ಸ್‌ ಖಾತೆಯಲ್ಲಿ ತೇಜಸ್ವಿ ಸೂರ್ಯರಿಗೆ ಅಭಿನಂದನೆ ಸಲ್ಲಿಸಿದ್ದು, ತೇಜಸ್ವಿ ಸೂರ್ಯ ಯುವಕರಿಗೆ ಸ್ಫೂರ್ತಿಯಾಗಿದ್ದಾರೆ. ಫಿಟ್‌ನೆಸ್‌ ಸಂಬಂಧಿತ ಚಟುವಟಿಕೆಗಳನ್ನು ಮುಂದುವರೆಸಲು ಮಾದರಿಯಾಗಿದ್ದಾರೆ ಎಂದು ಶ್ಲಾಘಿಸಿದ್ದಾರೆ.

ಇನ್ನು ಸ್ಪರ್ಧೆಯಲ್ಲಿ ಭಾಗವಹಿಸಿದ್ದ ತೇಜಸ್ವಿ ಸೂರ್ಯ ಮಾತನಾಡಿ, ಭಾರತ ಸೇರಿದಂತೆ ವಿಶ್ವದ ಕ್ರೀಡಾಪಟುಗಳು ಹಾಗೂ ಫಿಟ್ನೆಸ್‌ ಪ್ರಿಯರಿಗಾಗಿ ಐರನ್‌ ಮ್ಯಾನ್‌ ಸ್ಪರ್ಧೆ ಏರ್ಪಡಿಸಲಾಗಿದೆ. ಈ ರೇಸ್‌ ಗೋವಾದಲ್ಲಿ ನಡೆದಿದ್ದು, ಸುಮಾರು 50ಕ್ಕೂ ಅಧಿಕ ರಾಷ್ಟ್ರಗಳ ಕ್ರೀಡಾಪಟುಗಳು ಭಾಗವಹಿಸಿದ್ದಾರೆ. ಬಳಿಕ, ಇದೊಂದು ಕಠಿಣ ಸ್ಪರ್ಧೆಯಾಗಿದ್ದು, ನಾನು ಕಳೆದ 4 ತಿಂಗಳಿನಿಂದ ಕಷ್ಟಕರ ತರಬೇತಿಯನ್ನು ಪಡೆದಿದ್ದೇನೆ. ಈ ಕಾರಣಕ್ಕಾಗಿಯೇ ನಾನು ಈ ಸ್ಪರ್ಧೆಯನ್ನು ಪೂರ್ಣಗೊಳಿಸಿ ಯಶಸ್ವಿಯಾಗಿದ್ದೇನೆ. ಅದಕ್ಕೆ ಪ್ರಧಾನಿ ಮೋದಿ ಅವರು ಆರಂಭಿಸಿದ ಫಿಟ್‌ ಇಂಡಿಯಾ ಅಭಿಯಾನವೇ ಸ್ಫೂರ್ತಿ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಐತಿಹಾಸಿಕ ಸಂಗತಿ!

ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…

4 hours ago

ಓದುಗರ ಪತ್ರ: ಟ್ರಾಫಿಕ್ ದಂಡ: ಸುಪ್ರೀಂ ಸಲಹೆ ಸ್ವಾಗತಾರ್ಹ

ಟ್ರಾಫಿಕ್ ನಿಯಮ ಉಲ್ಲಂಘಿಸಿ ದಂಡ ಪಾವತಿಸದೆ ಬಾಕಿ ಉಳಿಸಿಕೊಂಡಿರುವವರಿಂದ ಹಣ ವಸೂಲಿ ಮಾಡಲು, ಆ ದಂಡದ ಮೊತ್ತವನ್ನು ಅವರ ಮನೆ…

4 hours ago

ಓದುಗರ ಪತ್ರ: ಆಕಾಶದಲ್ಲಿ ಶೌರ‍್ಯಪ್ರದರ್ಶನಕ್ಕೊಂದು ಸಲಾಂ

ತನ್ನ ಪ್ರಾಣವನ್ನೇ ಒತ್ತೆಯಿಟ್ಟು ದುಬೈನಿಂದ ಇಸ್ರೇಲ್‌ನ ಅವೀವ್‌ಗೆ ತೆರಳುತ್ತಿದ್ದ -ದುಬೈ ವಿಮಾನ ಹೈಜಾಕ್ ತಪ್ಪಿಸಿದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್…

4 hours ago

ಬ್ರೇಕ್ ಕಿತ್ತ ಬಸ್ಸಿನಲ್ಲಿ ಇಳಿಜಾರಿನಲ್ಲಿ ಸಾಗುತ್ತಿದ್ದೇವೆ…

ಡಾ . ಚೇತನ ಗುರುರಾಜು, ಮುಖ್ಯ ಶಿಕ್ಷಕಿ, ಅರಿವು ವಿದ್ಯಾಸಂಸ್ಥೆ, ಮೈಸೂರು  ಸಾಮಾಜಿಕ ಮಾಧ್ಯಮಗಳ ಬಲೆಗೆ ಸಿಲುಕಿವೆ ಹಲವು ದೇಶಗಳು…

4 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಸ್ವಾವಲಂಬನೆಯ ಸಂಕೇತ ಮಹಾತ್ಮ ಗಾಂಧೀಜಿ ಮಹಾತ್ಮ ಗಾಂಧೀಜಿ ಅವರು ಭಾರತದ ಸ್ವಾತಂತ್ರ್ಯ ಹೋರಾಟದ ಮಹಾನ್ ನಾಯಕ ಹಾಗೂ ರಾಷ್ಟ್ರಪಿತ ಎಂದು…

4 hours ago

ಜಗದ ಸೌಹಾರ್ದ ನದಿ ಗಾಂಧಿ

ಪರಶುರಾಮ್, ನಿರ್ದೇಶಕರು, ಒಡನಾಡಿ ಸೇವಾ ಸಂಸ್ಥೆ ಗಾಂಧಿ ವಿಚಾರಗಳನ್ನು ಸಂವಾದದ ಮೂಲಕ ಮುನ್ನಡೆಸಲು ಸಾಧ್ಯವೇ? ಅಥವಾ ಅನುಸರಿಸಲು ಸಾಧ್ಯವಾಗದಿರುವ ನಡೆಯನ್ನು…

5 hours ago