ನವದೆಹಲಿ: ಆನೆ-ಮಾನವ ಸಂಘರ್ಷ ತಪ್ಪಿಸುವಂತೆ ಆಗ್ರಹಿಸಿದ ಮೈಸೂರು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು, ಕೇಂದ್ರ ಸಚಿವ ಭೂಪೇಂದ್ರ ಯಾದವ್‌ರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.
ತಮ್ಮ ಕ್ಷೇತ್ರ ಮೈಸೂರು-ಕೊಡಗಿನಲ್ಲಿ ರೈತರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಸಂಸದ ಯದುವೀರ್ ಒಡೆಯರ್ ಅವರು ಕೇಂದ್ರ ಅರಣ್ಯ ಮತ್ತು ಪರಿಸರ ಖಾತೆ ಸಚಿವ ಭೂಪೇಂದ್ರ ಯಾದವ್‌ರಿಗೆ ಮನವರಿಕೆ ಮಾಡಿದ್ದಾರೆ.
ನಮ್ಮ ಭಾಗದಲ್ಲಿ ಅತಿ ಹೆಚ್ಚು ಕೃಷಿ ಭೂಮಿಯಿದೆ. ಕಾಡಂಚಿನ ಗ್ರಾಮಗಳಲ್ಲಿ ಆನೆಗಳ ದಾಳಿಯಿಂದ ರೈತರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ಕೃಷಿ ಭೂಮಿಯಲ್ಲಿ ಆನೆಗಳ ಚಲನ ವಲನ ತಡೆಗಟ್ಟಬೇಕು. ಕೃಷಿ ಭೂಮಿಯತ್ತ ಆನೆಗಳು ಬಾರದಂತೆ ದೊಡ್ಡ ರೈಲ್ವೆ ಬ್ಯಾರಿಕೇಡ್ ಅಳವಡಿಸುವಂತೆ ಮನವಿ ಪತ್ರ ಸಲ್ಲಿಸಿದ್ದಾರೆ.
ಸಂಸದ ಯದುವೀರ್ ಒಡೆಯರ್ ಅವರು ರೈತರ ಪರ ಧ್ವನಿ ಎತ್ತುತ್ತಿತ್ತು, ಕೇಂದ್ರ ಸಚಿವರನ್ನು ಭೇಟಿ ಮಾಡಿ ಅನ್ನದಾತರ ಏಳಿಗೆಗೆ ಶ್ರಮ ವಹಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಂಸದರ ನಡೆಗೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗಿದೆ.