Mysore
27
clear sky

Social Media

ಮಂಗಳವಾರ, 14 ಏಪ್ರಿಲ 2026
Light
Dark

ಕೇಂದ್ರ ಸಚಿವ ಪಿಯೂಷ್ ಗೋಯಲ್ ಭೇಟಿ ಮಾಡಿದ ಸಂಸದ ಯದುವೀರ್‌ ಒಡೆಯರ್‌

ನವದೆಹಲಿ: ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿ ಮಾಡಿ ಪರವಾನಗಿ ರಹಿತ ತಂಬಾಕು ಬೆಳೆಗಾರರಿಗೆ ಮಾರಾಟಕ್ಕೆ ಅವಕಾಶ ಮಾಡಿಕೊಡಲು ಹಾಗೂ ಅವರ ಮೇಲೆ ವಿಧಿಸಲಾಗುತ್ತಿದ್ದ ದಂಡವನ್ನು ಮನ್ನಾ ಮಾಡಬೇಕೆಂದು ಮನವಿ ಸಲ್ಲಿಸಿದ್ದೇನೆ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ತಿಳಿಸಿದ್ದಾರೆ.

ನವದೆಹಲಿಯಲ್ಲಿ ಇಂದು ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಅವರನ್ನು ಸಂಸದ ಯದುವೀರ್‌ ಒಡೆಯರ್‌ ಭೇಟಿ ಮಾಡಿ ಮಾತುಕತೆ ನಡೆಸಿದರು.

ಇದಕ್ಕೆ ಸೂಕ್ತವಾಗಿ ಸ್ಪಂದನೆ ವ್ಯಕ್ತಪಡಿಸಿದ ವಾಣಿಜ್ಯ ಸಚಿವ ಪಿಯೂಷ್ ಗೋಯಲ್, ಕಾರ್ಡ್ ಹೊಂದಿರದ (ಪರವಾನಗಿ ರಹಿತ) ತಂಬಾಕು ಬೆಳೆಗಾರರು ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲು ಅವಕಾಶ ಕಲ್ಪಿಸುವ ಕುರಿತು ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.

ಪರವಾನಗಿ ತಂಬಾಕು ಬೆಳೆಗಾರರಿಗೆ ವಿಧಿಸುತ್ತಿದ್ದ ದಂಡವನ್ನು ಮನ್ನಾ ಮಾಡುವ ಸಂಬಂಧ ತಂಬಾಕು ಮಂಡಳಿಗೆ ಸೂಕ್ತ ನಿರ್ದೇಶನ ನೀಡುವ ಭರವಸೆಯನ್ನೂ ನೀಡಿದ್ದಾರೆ ಎಂದು ಸ್ಪಷ್ಟಪಡಿಸಿದ್ದು, ಅತಿ ಶೀಘ್ರದಲ್ಲೇ ನಿರ್ಧಾರ ಹೊರಬೀಳುವ ನಿರೀಕ್ಷೆ ಇದೆ. ನಮ್ಮ ಕ್ಷೇತ್ರದ ಬೆಳಗಾರರ ಪರವಾಗಿ ದನಿ ಎತ್ತಲು ನಾನು ಸದಾ ಬದ್ಧನಾಗಿದ್ದೇನೆ ಎಂದು ಭರವಸೆ ನೀಡಿದರು.

Tags:
error: Content is protected !!