Mysore
31
clear sky

Social Media

ಶುಕ್ರವಾರ, 28 ಮಾರ್ಚ್ 2025
Light
Dark

ಅವೈಜ್ಞಾನಿಕ ಘನತ್ಯಾಜ್ಯ ಘಟಕ ತೆರವಿಗೆ ಸಂಸದ ಯದುವೀರ್‌ ಆಗ್ರಹ

ನವದೆಹಲಿ: ಮೈಸೂರಿನ ಹಳೆ ಕೆಸರೆ ಗ್ರಾಮದ ಸಮೀಪ ನಿರ್ಮಾಣ ಮಾಡಿರುವ ಘನತ್ಯಾಜ್ಯ ಘಟಕಗಳು ಅವೈಜ್ಞಾನಿಕವಾಗಿದ್ದು ಕೂಡಲೇ ತೆರವುಗೊಳಿಸಬೇಕು ಎಂದು ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಆಗ್ರಹಿಸಿದ್ದಾರೆ.

ನಿನ್ನೆಯ ಸಂಸತ್‌ ಅಧಿವೇಶನದಲ್ಲಿ ಮಾತನಾಡಿದ ಅವರು, ನನ್ನ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಸಿದ್ದಲಿಂಗಪುರ ಗ್ರಾಮ ಪಂಚಾಯಿತಿಗೆ ಸೇರುವ ಹಳೆ ಕೆಸರೆ ಗ್ರಾಮದ ಬಳಿ ಘನತ್ಯಾಜ್ಯ ಘಟಕ ನಿರ್ಮಾಣದಿಂದ ಅಲ್ಲಿನ ಜನರಿಗೆ ತುಂಬಾ ತೊಂದರೆಯಾಗುತ್ತಿದೆ ಎಂದು ಕನ್ನಡದಲ್ಲಿ ಪ್ರಸ್ತಾಪ ಮಾಡುವ ಮೂಲಕ ಗಮನ ಸೆಳೆದರು.

ಅವೈಜ್ಞಾನಿಕವಾಗಿ ಘನತ್ಯಾಜ್ಯ ಘಟಕಗಳನ್ನು ನಿರ್ಮಾಣ ಮಾಡಿದ್ದು, ಇದರಿಂದ ಕೊಳೆತ ದುರ್ವಾಸನೆ ಹೊರಹೊಮ್ಮುತ್ತಿದೆ. ಇದರಿಂದ ಸುತ್ತಮುತ್ತಲಿನ ಗ್ರಾಮದ ನಿವಾಸಿಗಳು ನಿರಂತರ ಆರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಕೇಂದ್ರ ಪರಿಸರ, ಅರಣ್ಯ ಮತ್ತು ಹವಮಾನ ಬದಲಾವಣೆ ಸಚಿವಾಲಯ ಈಗಾಗಲೇ ಹೊರಡಿಸಿರುವ ಮಾರ್ಗಸೂಚಿಗಳಲ್ಲಿ ಯಾವುದನ್ನು ಪಾಲಿಸಿಲ್ಲ ಎಂದು ಅಲ್ಲಿನ ಸಮಸ್ಯೆಗಳ ಬಗ್ಗೆ ವಿವರಿಸಿದರು.

ಹಾಗೆಯೇ, ಈ ಪ್ರದೇಶದಲ್ಲಿ ಕಾವೇರಿ ನೀರಾವರಿ ನಿಗಮಕ್ಕೆ ಸೇರಿದ್ದ ಜಾಗವಿದ್ದು, ಅಲ್ಲಿಯೂ, ಅವೈಜ್ಞಾನಿಕವಾಗಿ ತ್ಯಾಜ್ಯ ಸುಡುವುದು ಹೆಚ್ಚಾಗಿದೆ. ಈ ಬಗ್ಗೆ ಜನರು ಪ್ರತಿಭಟನೆ ನಡೆಸಿ ಮೇಲಾಧಿಕಾರಿಗಳಿಗೆ ಮನವಿ ಸಲ್ಲಿಸದರೂ ಯಾವುದೇ ಪ್ರಯೋಜನವಾಗಿಲ್ಲ. ಕೂಡಲೇ ಅವೈಜ್ಞಾನಿಕ ಘಟಕಗಳನ್ನು ತೆರವುಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ

Tags: