ನವದೆಹಲಿ: ಮೈಸೂರಿನ ಹಳೆ ಕೆಸರೆ ಗ್ರಾಮದ ಸಮೀಪ ನಿರ್ಮಾಣ ಮಾಡಿರುವ ಘನತ್ಯಾಜ್ಯ ಘಟಕಗಳು ಅವೈಜ್ಞಾನಿಕವಾಗಿದ್ದು ಕೂಡಲೇ ತೆರವುಗೊಳಿಸಬೇಕು ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಆಗ್ರಹಿಸಿದ್ದಾರೆ.
ನಿನ್ನೆಯ ಸಂಸತ್ ಅಧಿವೇಶನದಲ್ಲಿ ಮಾತನಾಡಿದ ಅವರು, ನನ್ನ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಸಿದ್ದಲಿಂಗಪುರ ಗ್ರಾಮ ಪಂಚಾಯಿತಿಗೆ ಸೇರುವ ಹಳೆ ಕೆಸರೆ ಗ್ರಾಮದ ಬಳಿ ಘನತ್ಯಾಜ್ಯ ಘಟಕ ನಿರ್ಮಾಣದಿಂದ ಅಲ್ಲಿನ ಜನರಿಗೆ ತುಂಬಾ ತೊಂದರೆಯಾಗುತ್ತಿದೆ ಎಂದು ಕನ್ನಡದಲ್ಲಿ ಪ್ರಸ್ತಾಪ ಮಾಡುವ ಮೂಲಕ ಗಮನ ಸೆಳೆದರು.
ಅವೈಜ್ಞಾನಿಕವಾಗಿ ಘನತ್ಯಾಜ್ಯ ಘಟಕಗಳನ್ನು ನಿರ್ಮಾಣ ಮಾಡಿದ್ದು, ಇದರಿಂದ ಕೊಳೆತ ದುರ್ವಾಸನೆ ಹೊರಹೊಮ್ಮುತ್ತಿದೆ. ಇದರಿಂದ ಸುತ್ತಮುತ್ತಲಿನ ಗ್ರಾಮದ ನಿವಾಸಿಗಳು ನಿರಂತರ ಆರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಕೇಂದ್ರ ಪರಿಸರ, ಅರಣ್ಯ ಮತ್ತು ಹವಮಾನ ಬದಲಾವಣೆ ಸಚಿವಾಲಯ ಈಗಾಗಲೇ ಹೊರಡಿಸಿರುವ ಮಾರ್ಗಸೂಚಿಗಳಲ್ಲಿ ಯಾವುದನ್ನು ಪಾಲಿಸಿಲ್ಲ ಎಂದು ಅಲ್ಲಿನ ಸಮಸ್ಯೆಗಳ ಬಗ್ಗೆ ವಿವರಿಸಿದರು.
ಹಾಗೆಯೇ, ಈ ಪ್ರದೇಶದಲ್ಲಿ ಕಾವೇರಿ ನೀರಾವರಿ ನಿಗಮಕ್ಕೆ ಸೇರಿದ್ದ ಜಾಗವಿದ್ದು, ಅಲ್ಲಿಯೂ, ಅವೈಜ್ಞಾನಿಕವಾಗಿ ತ್ಯಾಜ್ಯ ಸುಡುವುದು ಹೆಚ್ಚಾಗಿದೆ. ಈ ಬಗ್ಗೆ ಜನರು ಪ್ರತಿಭಟನೆ ನಡೆಸಿ ಮೇಲಾಧಿಕಾರಿಗಳಿಗೆ ಮನವಿ ಸಲ್ಲಿಸದರೂ ಯಾವುದೇ ಪ್ರಯೋಜನವಾಗಿಲ್ಲ. ಕೂಡಲೇ ಅವೈಜ್ಞಾನಿಕ ಘಟಕಗಳನ್ನು ತೆರವುಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…