ದೇಶ- ವಿದೇಶ

ಮುದ್ರಾ ಯೋಜನೆ: ಸಾಲಮಿತಿ 20ಲಕ್ಷ ರೂ.ಗಳಿಗೆ ಹೆಚ್ಚಳ

ಹೊಸದಿಲ್ಲಿ: ಕೇಂದ್ರ ಸರ್ಕಾರವು ದೇಶದಲ್ಲಿ ಉದ್ಯಮಶೀಲತೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ಮುದ್ರಾ ಯೋಜನೆಯಡಿ ನೀಡುವ ಸಾಲದ ಮಿತಿಯನ್ನು ರೂ.20 ಲಕ್ಷಕ್ಕೆ ಹೆಚ್ಚಿಸಿದೆ.

ಕಾರ್ಪೊರೇಟ್‌ ಅಲ್ಲದೆ ಕೃಷಿಯೇತರ ಸಣ್ಣ ಮತ್ತು ಅತಿ ಸಣ್ಣ ಉದ್ಯಮಗಳಿಗೆ ಆರ್ಥಿಕ ನೆರವು ನೀಡುವುದು ಈ ಯೋಜನೆಯ ಮೂಲ ಉದ್ದೇಶವಾಗಿದೆ ಎಂದು ವಿತ್ತ ಸಚಿವಾಲಯವು ತಿಳಿಸಿದೆ. ಈ ಸಂಬಂಧ ಗುರುವಾರ ಅಧಿಸೂಚನೆಯನ್ನು ಹೊರಡಿಸಲಾಗಿದೆ.

ಜುಲೈನಲ್ಲಿ ಮಂಡನೆಯಾಗಿದ್ದ 2024-25 ನೇ ಸಾಲಿನ ಬಜೆಟ್‌ನಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಸಾಲದ ಮಿತಿ ಏರಿಕೆ ಬಗ್ಗೆ ಪ್ರಸ್ತಾಪಿಸಿದರು. ತರುಣ್‌ ವರ್ಗದಡಿ ರೂ 10 ಲಕ್ಷ ಸಾಲ ಪಡೆದು, ಸಕಾಲದಲ್ಲಿ ಮರುಪಾವತಿ ಮಾಡಿದವರಿಗಷ್ಟೆ ಈ ಸೌಲಭ್ಯ ಸಿಗಲಿದೆ ಎಂದು ಅವರು ಹೇಳಿದ್ದರು.

ತರುಣ್‌ ಪ್ಲಸ್‌ ವಿಭಾಗದಲ್ಲಿ 10 ಲಕ್ಷದಿಂದ 20 ಲಕ್ಷದವರೆಗೆ ಸಾಲ ಸೌಲಭ್ಯ ಸಿಗಲಿದೆ. ಈ ಕ್ರಮವು ದೇಶದಲ್ಲಿ ಉದ್ಯಮಶೀಲ ವ್ಯವಸ್ಥೆಯನ್ನು ಗಟ್ಟಿಗೊಳಿಸಲು ಬದ್ಧವಾಗಿದೆ ಎಂದು ಹೇಳಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕುರ್ಚಿಗಾಗಿ ಜಾತಿ ಎಳೆದು ತಂದಿದ್ದಾರೆ ಎಂಬ ಎಚ್‌ಡಿಕೆ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ರಿಯಾಕ್ಷನ್‌

ಬೆಂಗಳೂರು: ಸಾಮಾಜಿಕ ದಿನದ ಆಚರಣೆಯ ಅಂಗವಾಗಿ ಪತ್ರಿಕೆಯೊಂದಕ್ಕೆ ನಾನು ಬರೆದಿದ್ದ ಲೇಖನ ರಾಜ್ಯದ ರಾಜಕೀಯ ವಲಯದಲ್ಲಿ ಬಹುಮುಖಿ ಚರ್ಚೆಗೆ ಒಳಗಾಗಿದೆ…

1 hour ago

ಹನೂರು| ಫೆ.25ರಂದು ವಾಂಗಾಳಿ ಅಮ್ಮನವರ ವಿಗ್ರಹ ಪ್ರತಿಷ್ಠಾಪನೆ ಕಾರ್ಯಕ್ರಮ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಚಂಗವಾಡಿ ಗ್ರಾಮದ ಭೋವಿ ಬಡಾವಣೆಯಲ್ಲಿ ನೂತನವಾಗಿ ನಿರ್ಮಾಣ ಮಾಡಿರುವ…

1 hour ago

ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್‌ ಮತ್ತೆ ಆಸ್ಪತ್ರೆಗೆ ದಾಖಲು

ಮುಂಬೈ: ರಾಷ್ಟ್ರೀಯತಾವಾದಿ ಕಾಂಗ್ರೆಸ್‌ ಪಕ್ಷದ ಮುಖ್ಯಸ್ಥ ಶರದ್‌ ಪವಾಋ ಅವರನ್ನು ಇಂದು ಪುಣೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶರದ್‌ ಪವಾರ್‌…

2 hours ago

ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಶೀಘ್ರದಲ್ಲಿಯೇ ಬ್ಯಾನ್‌ ಆಗಲಿದೆ ಮೊಬೈಲ್?:‌ ಸಿಎಂ ಸಿದ್ದರಾಮಯ್ಯ ಸುಳಿವು

ಬೆಂಗಳೂರು: ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಮೊಬೈಲ್‌ ಫೋನ್‌ ನಿಷೇಧ ಮಾಡುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಚಿಂತನೆ ನಡೆಸಿದೆ.…

3 hours ago

ಎಐ ಇಂಪ್ಯಾಕ್ಟ್‌ ಶೃಂಗಸಭೆ ಒಂದು ಮಹತ್ವದ ತಿರುವು: 131ನೇ ಮನ್‌ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ ಸಂತಸ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ ಮನ್‌ ಕಿ ಬಾತ್‌ನ 131ನೇ ಸಂಚಿಕೆಯಲ್ಲಿ…

3 hours ago

ಮಾಜಿ ಶಾಸಕ ಸುರೇಶ್‌ ಗೌಡ ಕಾರು ಅಪಘಾತ

ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ನಾಗಮಂಗಲದ ಜೆಡಿಎಸ್‌ ಮಾಜಿ ಶಾಸಕ ಸುರೇಶ್‌ ಗೌಡ ಕಾರು ಪಲ್ಟಿಯಾಗಿ ಅಪಘಾತ ಸಂಭವಿಸಿರುವ ಘಟನೆ…

3 hours ago