ದೇಶ- ವಿದೇಶ

ಬಹುಭಾಷಾ ನಟ ಪ್ರಕಾಶ್‌ ರಾಜ್‌ ತಾಯಿ ಸುವರ್ಣಲತಾ ನಿಧನ

ಹೈದರಬಾದ್‌ : ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸುವರ್ಣಲತಾ ಅವರು ನಿಧನರಾಗಿದ್ದಾರೆ. 85 ವರ್ಷದ ಸುವರ್ಣಲತಾ ಅವರು ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದು ಇಂದು(ಮಾರ್ಚ್.‌30) ಹೈದರಾಬಾದ್ ನಲ್ಲಿ ಕೊನೆಯುಸಿರೆಳೆದಿದ್ದಾರೆ.

ಕರ್ನಾಟಕದ ಗದಗ ಮೂಲದವರಾದ ಸುವರ್ಣಲತಾ ಅವರು ಬೆಳಗಾವಿಯ ಅನಾಥಾಶ್ರಾಮದಲ್ಲಿ ಬಾಲ್ಯ ಜೀವನ ಕಳೆದಿದ್ದರು. ನರ್ಸಿಂಗ್ ಟ್ರೇನಿಂಗ್ ಮಾಡಿ ಬೆಂಗಳೂರಿಗೆ ಬಂದು ಜೀವನ ಕಟ್ಟಿಕೊಂಡಿದ್ದ ಅವರು, ಮಂಜುನಾಥ್ ರೈ ಎಂಬುವರ ಜೊತೆ ವಿವಾಹವಾಗಿದ್ದು ದಂಪತಿಗೆ ಮೂವರು ಮಕ್ಕಳು ಜನಿಸಿದರು. ಮೂವರ ಪೈಕಿ ಪ್ರಕಾಶ್ ರಾಜ್ ನಟನಾಗಿ ಗುರುತಿಸಿಕೊಂಡಿದ್ದಾರೆ.

ಸ್ವರ್ಣಲತಾ ಅವರು ಕ್ರಿಶ್ಚಿಯನ್ ಸಮುದಾಯಕ್ಕೆ ಸೇರಿದವರಾಗಿದ್ದರೆ, ಪತಿ ಮಂಜುನಾಥ್ ರೈ ಹಿಂದೂ ಆಗಿದ್ದರು. ಈ ಭಿನ್ನ ಸಂಸ್ಕೃತಿಗಳ ನಡುವೆ ಪ್ರಕಾಶ್ ರಾಜ್ ಬೆಳೆದಿದ್ದರು. ಪ್ರಕಾಶ್ ರಾಜ್ ಕುಟುಂಬದ ಹಿರಿಯ ಮಗನಾಗಿದ್ದು, ಅವರ ಸಹೋದರ ಪ್ರಸಾದ್ ರಾಜ್ ಕೂಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ.

ಇನ್ನೂ ಸುವರ್ಣಲತಾ ಅವರ ನಿಧನಕ್ಕೆ ಆಂಧ್ರಪ್ರದೇಶದ ಡಿಸಿಎಂ, ನಟ ಪವನ್‌ ಕಲ್ಯಾಣ್‌ ಅವರು ಸಂತಾಪ ಸೂಚಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

9 hours ago

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್!

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…

10 hours ago

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

11 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

12 hours ago

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

15 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

16 hours ago