ನವದೆಹಲಿ: ಮುಂಬೈ ದಾಳಿಯ ಸಂಚುಕೋರ ತಹವ್ವೂರ್ ರಾಣಾನನ್ನು ಭಾರತಕ್ಕೆ ವಿಶೇಷ ವಿಮಾನದ ಮೂಲಕ ಕರೆತರಲಾಗಿದೆ.
ರಾಣಾ ಇದ್ದ ವಿಶೇಷ ವಿಮಾನ ಗುರುವಾರ ಮಧ್ಯಾಹ್ನ 3 ಗಂಟೆಗೆ ದೆಹಲಿಯ ಪಾಲಂ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಿದೆ. ಎನ್‌ಐಎ ಬಂಧನ ಪ್ರಕ್ರಿಯೆ ಮುಗಿಸಿದ್ದು, ಸ್ಥಳದಲ್ಲಿ ಭಾರಿ ಬಿಗಿ ಭದ್ರತೆ ಕಲ್ಪಿಸಲಾಗಿದೆ.
ಭಾರತಕ್ಕೆ ಗಡಿಪಾರಾಗಿರುವುದರಿಂದ ತಪ್ಪಿಸಿಕೊಳ್ಳಲು ರಾಣಾ ಅಮೇರಿಕಾದ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದ. ಆತನ ಅರ್ಜಿಯನ್ನು ಕೋರ್ಟ್ ತಿರಸ್ಕರಿಸಿತ್ತು. ಗಡೀಪಾರಿನಿಂದ ತಪ್ಪಿಸಿಕೊಳ್ಳುವ ರಾಣಾನ ಕೊನೆಯ ಪ್ರಯತ್ನವೂ ವಿಫಲವಾಗಿದ್ದು, ಇಂದು ಭಾರತಕ್ಕೆ ಕರೆತರಲಾಗಿದೆ.
ಲಾಸ್ ಏಂಜಲೀಸ್‌ನ ಮೆಟ್ರೋಪಾಲಿಟನ್ ಜೈಲಿನಲ್ಲಿದ್ದ ಪಾಕಿಸ್ತಾನ ಮೂಲದ ಕೆನಡಾ ಪ್ರಜೆ ರಾಣಾ (64)ನನ್ನು ಭಾರತದ ಬಹು ಏಜೆನ್ಸಿ ತಂಡವು ಭಾರತಕ್ಕೆ ಕರೆತರಲು ಪ್ರಕ್ರಿಯೆ ನಡೆಸಿತು.
ರಾಣಾ 2008ರ ಮುಂಬೈ ದಾಳಿಯ ಪ್ರಮುಖ ಸಂಚುಕೋರರಲ್ಲಿ ಒಬ್ಬನಾದ ಅಮೇರಿಕನ್ ಪ್ರಜೆ ಡೇವಿಡ್ ಕೊಲಮನ್ ಹೆಡ್ಲಿ ಅಲಿಯಾಸ್ ದಾವೂದ್ ಗಿಲಾನಿಯ ನಿಕಟ ಸಹಚರನಾಗಿದ್ದ.
ಪ್ರಶಾಂತ್ ಎನ್ ಮಲ್ಲಿಕ್ ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…
ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…
ಮಹಾದೇಶ್ ಎಂ ಗೌಡ ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…
ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…
ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್ ತೀವ್ರ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…