ಮುಂಬೈ: ಹೈದರಾಬಾದ್‌ನಿಂದ ಮುಂಬೈಗೆ ತೆರಳುತ್ತಿದ್ದ ಬಸ್‌ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 24 ಕೋಟಿ ರೂ. ಮೌಲ್ಯದ ಸುಮಾರು 16 ಕೆ.ಜಿ.ಯಷ್ಟು ಮೆಫೆಡ್ರೋನ್ ಮಾದಕ ವಸ್ತುವನ್ನು ಮುಂಬೈನ ಕಂದಾಯ ಗುಪ್ತಚರ ನಿರ್ದೇಶನಾಲಯ ವಶಪಡಿಸಿಕೊಂಡಿದ್ದು, ಐವರನ್ನು ಬಂಧಿಸಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು(ಡಿ.4) ಡಿಆರ್‌ಐ ಅಧಿಕಾರಿಗಳು ಐವರು ಆರೋಪಿಗಳನ್ನು ಬಂಧಿಸಿದ್ದು, ಬಂಧಿತ ಮೂವರು ಆರೋಪಿಗಳಿಂದ ಅಂದಾಜು 1.9 ಕೋಟಿ ರೂಪಾಯಿಯ ನಗದದನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಡಿಆರ್‌ಐ ಅಧಿಕಾರಿಗಳು ಗುಪ್ತಚರ ಮಾಹಿತಿಯ ಆಧಾರದ ಮೇಲೆ ಇಬ್ಬರು ಶಂಕಿತರ ಮೇಲೆ ಕಣ್ಣಾಗವನ್ನಿಟ್ಟಿತ್ತು. ಬಳಿಕ ಮಂಗಳವಾರ(ಡಿ.3) ಬೆಳಗಿನ ಜಾವದ ವೇಳೆ ಬಸ್‌ನಲ್ಲಿ ಆರೋಪಿಗಳನ್ನು ಬಂಧಿಸಿ ಶೋಧ ನಡೆಸಿತ್ತು. ಈ ಶೋಧ ಸಮಯದಲ್ಲಿ ಆರೋಪಿಗಳ ಲಗ್ಗೇಜ್ ಬ್ಯಾಗ್‌ನಲ್ಲಿ ಸುಮಾರು 16 ಕೆ.ಜಿ. ಮೆಫೆಡ್ರೋನ್ ಪುಡಿಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಇನ್ನು ಆರೋಪಿಗಳ ವಿರುದ್ಧ ಮಾದಕ ವಸ್ತುಗಳು ಹಾಗೂ ಅಮಲು ಪದಾರ್ಥಗಳ ನಿಯಂತ್ರಣ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ಪ್ರಕರಣದ ವಿಚಾರವಾಗಿ ಇಬ್ಬರು ಆರೋಪಿಗಳನ್ನು ವಿಚಾರಣೆ ನಡೆಸಿ, ಮಧ್ಯವರ್ತಿ ಸೇರಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಮೂಲಗಳು ತಿಳಿಸಿವೆ.
ಮೈಸೂರು: ಕ್ರಿಸ್‌ಮಸ್ ಆಚರಣೆಗೆ ಕ್ಷಣಗಣನೆ ಶುರುವಾಗಿದ್ದು, ಮಾರುಕಟ್ಟೆಯಲ್ಲಿ ಖರೀದಿ ಭರಾಟೆ ಜೋರಾಗಿದ್ದರೆ, ಚರ್ಚ್‌ಗಳ ಅಂಗಳವನ್ನು ವಿದ್ಯುತ್ ದೀಪಗಳಿಂದ ಸಿಂಗರಿಸುವ ಕಾರ್ಯ…
ಕೆ.ಬಿ.ರಮೇಶನಾಯಕ ಟಿಎಚ್‌ಒ ಹುದ್ದೆಗೆ ಡಿಎಚ್‌ಒ ವರ್ಗಾವಣೆ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ ಮೈಸೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ…
ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…
ಹಾಸನ: ನಿವೃತ್ತ ಯೋಧರೊಬ್ಬರು ಪಿಸ್ತೂಲ್‌ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಬೇಲೂರು…
ಮೈಸೂರು: ಈ ದೇಶದಲ್ಲಿ ಬಂಡವಾಳಶಾಹಿಗಳಾಗಲೀ, ಸಕ್ಕರೆ ಕಾರ್ಖಾನೆ ಮಾಲೀಕರಾಗಲೀ ಅಥವಾ ಉದ್ಯಮಿಗಳು ಸೇರಿ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆದರೇ,…