ದೇಶ- ವಿದೇಶ

ಮುಂಬೈ ಸರಣಿ ಸ್ಫೋಟದ ಅಪರಾಧಿ ಮೊಹಮ್ಮದ ಅಲಿಖಾನ್‌ ಹತ್ಯೆ

ಮುಂಬೈ:  1993ರ ಬಾಂಬೆ ಸರಣಿ ಸ್ಫೋಟದ ಆರೋಪಿ ಮೊಹಮದ್ ಅಲಿಖಾನ್‍ನನ್ನು ಭಾನುವಾರ(ಜೂ.2) ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಮಹಾರಾಷ್ಟ್ರದ ಕೊಲ್ಹಾಪುರದ ಜೈಲಿನಲ್ಲಿ ಈ ಘಟನೆ ನಡೆದಿದೆ. ಪೊಲೀಸರ ಪ್ರಕಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಐವರು ಆರೋಪಿಗಳು ಕೊಲೆ ಮಾಡಿದ್ದಾರೆ. ಈ ಆರೋಪಿಗಳು ಮೊಹಮದ್ ಅಲಿಖಾನ್‍ರ ಶಿರಚ್ಛೇದ ಮಾಡಿದ್ದಾರೆ ಎಂದು ಹೇಳಲಾಗಿದೆ.

ಪ್ರತೀಕ್ ಪಾಟೀಲ್, ದೀಪಕ್ ಖೋಟ್, ಸಂದೀಪ್ ಚವ್‍ಹಾಣ್, ರಿತುರಾಜ್ ಇನಾಮದಾರ್ ಮತ್ತು ಸೌರಭ್‍ಸಿದ್ಧ ಎಂಬುವ ಖೈದಿಗಳೇ ಮೊಹಮ್ಮದ ಅಲಿಖಾನ್‌ನನ್ನು ಹತ್ಯೆ ಮಾಡಿರುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಹತ್ಯೆ ವಿವರ
ಮೊಹಮದ್ ಅಲಿಖಾನ್ ಇದ್ದ ಬ್ಯಾರಕ್‌ನಲ್ಲಿಯೇ,  ಇನ್ನೊಂದು ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಐವರು ಆರೋಪಿಗಳನ್ನು  ಇರಿಸಲಾಗಿತ್ತು.

ಮೃತ ಮೊಹಮದ್ ಅಲಿ ಖಾನ್ ಸೇರಿದಂತೆ ಈ ಎಲ್ಲಾ ಆರೋಪಿಗಳು ಒಂದೇ ಬ್ಯಾರಕ್‍ನಲ್ಲಿ ಇದ್ದರು. ಇದರಿಂದಾಗಿ ಅವರ ನಡುವೆ ಏನಾದರೂ ಜಗಳವಾಗಿದೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕೊಲ್ಲಾಪುರ ಜೈಲಿನಲ್ಲಿರುವ ಮುಂಬೈ ಸ್ಫೋಟದ ಇತರ ಆರೋಪಿಗಳ ಭದ್ರತೆಯನ್ನು ಹೆಚ್ಚಿಸಲಾಗಿದೆ. ಜೈಲಿನೊಳಗೆ ನಡೆದ ಈ ಹತ್ಯೆಗೆ ಪ್ರಮುಖ ಕಾರಣ ಏನು ಎಂಬ ಬಗ್ಗೆ ತನಿಖೆ ಆರಂಭಿಸಲಾಗಿದೆ ಎಂದು ಜೈಲು ಇಲಾಖೆಯ ಡೆಪ್ಯುಟಿ ಇನ್ಸ್‌ಪೆಕ್ಟರ್ ಜನರಲ್ ಸ್ವಾತಿ ಸಾಠೆ ಮಾಹಿತಿ ನೀಡಿದ್ದಾರೆ.

ಯಾರು ಈ ಮೊಹಮ್ಮದ್‌ ಅಲಿಖಾನ್‌
ಮುಂಬೈ ಸರಣಿ ಸ್ಫೋಟ ಪ್ರಕರಣದಲ್ಲಿ ಮೊಹಮದ್ ಅಲಿಖಾನ್ ಅಲಿಯಾಸ್ ಮುನ್ನಾ ಅಲಿಯಾಸ್ ಮನೋಜ್‍ಕುಮಾರ್ ಭನ್ವರ್‍ಲಾಲ್ ಗುಪ್ತಾ ಕೋಲ್ಹಾಪುರ ಜೈಲಿನಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ. ಐವರು ಆರೋಪಿಗಳ ವಿರುದ್ಧ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. 1993ರ ಮಾರ್ಚ್ 12ರಂದು ಬಾಂಬೆ ಸ್ಟಾಕ್ ಎಕ್ಸ್‌ ಚೆಂಜ್ 28 ಅಂತಸ್ತಿನ ಕಟ್ಟಡದ ನೆಲಮಾಳಿಗೆಯಲ್ಲಿ ಸಂಭವಿಸಿದ ಬೃಹತ್ ಸ್ಫೋಟದಲ್ಲಿ 50 ಜನರು ಸಾವನ್ನಪ್ಪಿದರು. ಅರ್ಧ ಗಂಟೆಯ ನಂತರ ಕಾರಿನಲ್ಲಿ ಎರಡನೇ ಸ್ಫೋಟ ಸಂಭವಿಸಿತ್ತು ಮತ್ತು ಒಂದರ ನಂತರ ಒಂದರಂತೆ ಸರಣಿ ಸ್ಫೋಟಗಳು ಪ್ರಾರಂಭವಾದವು. ಎರಡು ಗಂಟೆಗಳಲ್ಲಿ ಮುಂಬೈನ 12 ಸ್ಥಳಗಳಲ್ಲಿ 13 ಸ್ಫೋಟಗಳು ಸಂಭವಿಸಿವೆ. ಈ ಸರಣಿ ಸ್ಫೋಟಗಳಲ್ಲಿ 257 ಜನರು ಸಾವನ್ನಪ್ಪಿದ್ದರು ಮತ್ತು 713 ಜನರು ಗಾಯಗೊಂಡಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಚಾರಣದಲ್ಲಿ ಮಾರ್ಗಸೂಚಿ ಕಟ್ಟುನಿಟ್ಟು ಅನುಸರಣೆಗೆ ಕ್ರಮ ಅಗತ್ಯ

ರಾಜ್ಯದ ಅರಣ್ಯ ಪ್ರದೇಶ ಒಂದು ವಾರದ ಅಂತರದಲ್ಲಿ ಕೇರಳ ರಾಜ್ಯದ ಇಬ್ಬರು ಹೆಣ್ಣುಮಕ್ಕಳ ಪೈಕಿ ಒಬ್ಬಾಕೆಯ ಪ್ರಾಣವನ್ನೇ ಬಲಿತೆಗೆದುಕೊಂಡರೆ, ಇನ್ನೊಬ್ಬಾಕೆಯ…

29 mins ago

ಐತಿಹಾಸಿಕ ಸಂಸತ್ ಅಧಿವೇಶನಕ್ಕೆ ದಿನಗಣನೆ!

ಶಾಸನ ಸಭೆಗಳಲ್ಲಿ ಮಹಿಳೆಯರಿಗೆ ಶೇ.೩೩ರಷ್ಟು ಮೀಸಲಾತಿ ಕಲ್ಪಿಸುವ ಕುರಿತು ನಿರ್ಧಾರ  ಏಪ್ರಿಲ್ ೧೬ರಿಂದ ೧೮ರವರೆಗೆ ಮೂರು ದಿನಗಳ ಕಾಲ ಸಂಸತ್ತಿನ…

34 mins ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಕಾಂಗ್ರೆಸ್, ಬಿಜೆಪಿ ಪಾಳೆಯದಲ್ಲಿ ಮಿಶ್ರಭಾವನೆ ಹುಟ್ಟು ಹಾಕಿದ ಉಪಚುನಾವಣೆ

ಅಭ್ಯರ್ಥಿಗಳ ಗೆಲುವಿಗಾಗಿ ಸ್ವತಃ ಫೀಲ್ಡಿಗಿಳಿದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆ ಆಡಳಿತಾರೂಢ ಕಾಂಗ್ರೆಸ್ ಮತ್ತು…

41 mins ago

ಬಿಸಿಲ ಝಳಕ್ಕೆ ನೀರಿಗಿಳಿಯುವ ಮುನ್ನಇರಲಿ ಎಚ್ಚರ..!

ನವೀನ್ ಡಿಸೋಜ ಕೊಡಗು ಜಿಲ್ಲೆಯಲ್ಲಿ ಇವೆ ಅಪಾಯಕಾರಿ ಸ್ಥಳಗಳು; ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸಲಹೆ ಮಡಿಕೇರಿ:ಬೇಸಿಗೆಯಲ್ಲಿ ಬಿಸಿಲ ಝಳಕ್ಕೆ ನೀರಿಗಿಳಿದು…

3 hours ago

ಹಾಲಿ-ಮಾಜಿ ಶಾಸಕರಿಗೆ ಕ್ಷೇತ್ರ ಪುನರ್‌ವಿಂಗಡಣೆ ಗುಮ್ಮ!

ಕೆ.ಬಿ.ರಮೇಶನಾಯಕ ಶೇ.೩೩ ಮಹಿಳಾ ಮೀಸಲು ಜಾರಿಯಾದರೆ ಐದು ಸ್ಥಾನ ಮೀಸಲು  ಚಾಮುಂಡೇಶ್ವರಿ, ಕೃಷ್ಣರಾಜ, ನರಸಿಂಹರಾಜ ಕ್ಷೇತ್ರದ ಕೆಲ ಭಾಗಗಳನ್ನು ಬೇರ್ಪಡಿಸಿ…

3 hours ago

150 ವರ್ಷಕ್ಕೆ ಸಾಕ್ಷಿಯಾದ ಸರ್ಕಾರಿ ಶಾಲೆ!

ಹೇಮಂತ್‌ಕುಮಾರ್ ಮಂಡ್ಯ: ಜಿಲ್ಲೆಯ ಮೇಲುಕೋಟೆ ಪ್ರಖ್ಯಾತ ಧಾರ್ಮಿಕ ಮತ್ತು ಐತಿಹಾಸಿಕ ಕ್ಷೇತ್ರವಾಗಿದ್ದು, ಹತ್ತಾರು ಶತಮಾನಗಳ ವಿಶೇಷತೆಗಳನ್ನು ಒಳಗೊಂಡಿದೆ. ಈ ಪಟ್ಟಿಯಲ್ಲಿ…

3 hours ago