Mysore
23
scattered clouds

Social Media

ಮಂಗಳವಾರ, 27 ಜನವರಿ 2026
Light
Dark

ನನ್ನ ಆರೋಗ್ಯ ಉತ್ತಮವಾಗಿದೆ: ರತನ್‌ ಟಾಟಾ ಮಾಹಿತಿ

ಮುಂಬೈ: ನನಗೆ ಏನೂ ಆಗಿಲ್ಲ. ವಯೋಸಹಜ ಪರೀಕ್ಷೆ ಕಾರಣಕ್ಕೆ ಆಸ್ಪತ್ರೆಗೆ ತೆರಳಿದ್ದೆ ಅಷ್ಟೇ ಎಂದು ತಮ್ಮ ಆರೋಗ್ಯದ ಬಗ್ಗೆ ರತನ್‌ ಟಾಟಾ ಮಾಹಿತಿ ನೀಡಿದ್ದಾರೆ.

ಅಪಾರ ಪ್ರಮಾಣದ ಅಭಿಮಾನಿ ಬಳಗವನ್ನು ಹೊಂದಿರುವ 86 ವರ್ಷದ ರತನ್‌ ಟಾಟಾ ಅವರ ಆರೋಗ್ಯದಲ್ಲಿ ಏರು ಪೇರಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸುದ್ದಿ ಪ್ರಕಟವಾಗಿತ್ತು.

ಈ ಹಿನ್ನೆಲೆಯಲ್ಲಿ ರತನ್‌ ಟಾಟಾ ಅಭಿಮಾನಿಗಳು ಹಾಗೂ ಹಿತೈಷಿಗಳು ಭಾರೀ ಆತಂಕಕ್ಕೆ ಒಳಗಾಗಿದ್ದರು.

ಈ ಬಗ್ಗೆ ಸ್ವತಃ ರತನ್‌ ಟಾಟಾ ಅವರೇ ತಮ್ಮ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ್ದು, ನನಗೆ ಏನೂ ಆಗಿಲ್ಲ. ವಯೋಸಹಜ ಪರೀಕ್ಷೆಗೆಂದು ಆಸ್ಪತ್ರೆಗೆ ತೆರಳಿದ್ದೆ ಅಷ್ಟೆ. ನನ್ನ ಆರೋಗ್ಯ ಉತ್ತಮವಾಗಿದೆ. ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ಮಾಹಿತಿ ನೀಡಿದ್ದಾರೆ.

Tags:
error: Content is protected !!