ದೇಶ- ವಿದೇಶ

ನನ್ನದು ಕೃಷ್ಣತತ್ವ ಕಾಂಗ್ರೆಸ್ ಪಕ್ಷದ್ದು ಕಂಸತತ್ವ: ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು

ನವದೆಹಲಿ: ಭಗವದ್ಗೀತೆಯನ್ನು ಶಾಲಾ ಮಕ್ಕಳಿಗೆ ಬೋಧಿಸಬೇಕು ಎಂದು ಪುನರುಚ್ಚರಿಸಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು, ತಮ್ಮನ್ನು ಮನುವಾದಿ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸೈದ್ಧಾಂತಿಕ ಅಧಃಪತನ ಎಂದ ಸಚಿವ ಹೆಚ್.ಸಿ.ಮಹದೇವಪ್ಪ ಇಬ್ಬರಿಗೂ ತಿರುಗೇಟು ನೀಡಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ನಾನು ಕೃಷ್ಣತತ್ವ ನಂಬಿದವನೇ ಹೊರತು ಕಂಸ ಹಿಂಸೆಯನ್ನಲ್ಲ. ಕಾಂಗ್ರೆಸ್‌ ಕಂಸನಲ್ಲಿ ನಂಬಿಕೆ ಇಟ್ಟಿದೆ ಎಂದು ಕಟುವಾಗಿ ಟೀಕಿಸಿದ್ದಾರೆ.

ನನ್ನನ್ನು ಮನುವಾದಿ ಎಂದಿರುವ ಮುಖ್ಯಮಂತ್ರಿ, ಸೈದ್ಧಾಂತಿಕ ಅಧಃಪತನ ಎಂದು ತಾಳ ಹಾಕಿದ ಸಚಿವ ಮಹದೇವಪ್ಪ, ಇವರಿಬ್ಬರೂ ಶಾಲಾ ಮಕ್ಕಳಿಗೇನು ಬೋಧಿಸುತ್ತಾರೆ ಎಂಬುದನ್ನು ಹೇಳಲಿ. ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ? ಎಂದು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಭಗವದ್ಗೀತೆ ಜಗದ ಬೆಳಕು, ಅರಿವು. ಸನ್ಮಾರ್ಗದ ದೀವಿಗೆ. ಆದರ್ಶಗಳ ಮಹಾಸಾರ. ಮಕ್ಕಳನ್ನು ಬಾಲ್ಯದಿಂದಲೇ ಒಳ್ಳೇ ಮಾರ್ಗದಲ್ಲಿ ನಡೆಸುವ ಸುದುದ್ದೇಶದಿಂದ ನಾನು ಕೇಂದ್ರದ ಶಿಕ್ಷಣ ಸಚಿವರಾದ ಧರ್ಮೇಂದ್ರ ಪ್ರಧಾನ್‌ ಅವರಿಗೆ ಪತ್ರ ಬರೆದು ಪಠ್ಯದಲ್ಲಿ ಭಗವದ್ಗೀತೆ ಸೇರಿಸಬೇಕು ಎಂದು ವಿನಂತಿಸಿದ್ದೇನೆ. ಬಹುಶಃ ಮಹದೇವಪ್ಪನವರಿಗೆ ಭಗವದ್ಗೀತೆಯ ಸಾರ ಗೊತ್ತಿಲ್ಲ. ಅವರಿಗೆ ಇನ್ನಾವುದೋ ಗ್ರಂಥದ ಸಾರ ಗಾಢವಾಗಿ ಇಳಿದಿರಬೇಕು!? ಎಂದು ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ.

ನಾನೂ ಸೇರಿ ಜನಪ್ರತಿನಿಧಿಗಳೆಲ್ಲರೂ ಪ್ರಮಾಣ ಸ್ವೀಕರಿಸುವುದು ಸಂವಿಧಾನಬದ್ಧವಾಗಿಯೇ. ದೇವರು, ತಂದೆ ತಾಯಿ ಹೆಸರಿನಲ್ಲಿ ಪ್ರಮಾಣ ಸ್ವೀಕರಿಸುತ್ತೇವೆ. ಇದು ಕೂಡ ಸನ್ಮಾರ್ಗವೇ. ಹಾಗಾದರೆ ಮಹದೇವಪ್ಪನವರ ‘ಮಾರ್ಗ’ ಯಾವುದು? ಕಂಸ ಮಾರ್ಗವೇ?? ಎಂದು ಪ್ರಶ್ನಿಸಿದ್ದಾರೆ.

ಮಹದೇವಪ್ಪನವರೇ.. ನಿಮಗೆ ತಿಳಿದಿರಲಿ. ಇವತ್ತು ಭಾರತದ ರಾಜನೀತಿ ನಿಂತಿರುವುದೇ ಕೃಷ್ಣತತ್ತ್ವದ ಮೇಲೆ. ಸಮರ, ರಾಜಕೀಯ, ಜ್ಞಾನ, ಆಡಳಿತ, ಮನುಷ್ಯ ಸಂಬಂಧಗಳು ಎಲ್ಲಕ್ಕೂ ಭಗವದ್ಗೀತೆಯೇ ದೀವಿಗೆ. ಕೃಷ್ಣಬೋಧೆ ಸಾರ್ವಕಾಲಿಕ, ಭಗವದ್ಗೀತೆ ಕಾಲಾತೀತ. ನಿಮ್ಮನ್ನು ಅಜ್ಞಾನಿ ಎನ್ನುವುದು ನನಗೆ ಇಷ್ಟವಿಲ್ಲ. ಸಂವಿಧಾನ, ಪ್ರಜಾಪ್ರಭುತ್ವ ಎಂದು ಸದಾ ಜಪಿಸುವ ನೀವು, ಭಗವದ್ಗೀತೆಯ ಜತೆಗೆ ರಾಮಾಯಣ, ಮಹಾಭಾರತವನ್ನೂ ಓದಿ. ಇದು ನನ್ನ ಸಲಹೆಯಷ್ಟೇ. ಕೊನೆಗೆ; ಭಗವದ್ಗೀತೆ ಓದಬೇಡಿ ಎಂದು ನಾನೆಂದೂ ಹೇಳಿಲ್ಲ. ಹೇಳುವುದೂ ಇಲ್ಲ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ರಾಮ್ ಜೀ ಸಕ್ಪಾಲ್ ಬಡಾವಣೆಯಲ್ಲಿ ಮೂಲಸೌಕರ್ಯ ಮರೀಚಿಕೆ

ಕೃಷ್ಣ ಸಿದ್ದಾಪುರ ನೀರಿಗೂ ಪರದಾಟ, ಕತ್ತಲಲ್ಲೇ ಮಕ್ಕಳ ವಿದ್ಯಾಭ್ಯಾಸ   ಸಿದ್ದಾಪುರ: ಕುಶಾಲನಗರ ತಾಲ್ಲೂಕಿನ ಚೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪೊನ್ನತ್…

7 mins ago

ಡೆಡ್ ಬಾಡಿ ಬಿಸಾಕಿದ ಜಾಗದಲ್ಲಿ ಹೊಸ ಸುಳಿವು

ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಸ್ಕಾರ್ಪಿಯೋ ಹೋಗಿ-ಬರುವುದು, ೩ ಜನರು ನಡೆದು ಬರುವುದು ವಿಡಿಯೋದಲ್ಲಿ ಸೆರೆ ನಾಳೆ ೧೦ ಗಂಟೆಯವರೆಗೆ…

19 mins ago

ಪುಸ್ತಕ ಮೇಳದಲ್ಲಿ ‘ಕವಿತೆ ಹೇಳಿ, ಗಿಡ ಪಡೆಯಿರಿ’

ಚಿರಂಜೀವಿ ಸಿ.ಹುಲ್ಲಹಳ್ಳಿ ಸಾಹಿತ್ಯ, ಪರಿಸರ ಸಂರಕ್ಷಣೆ ಕಾರ್ಯಕ್ಕೆ ಮುಂದಾಗಿರುವ ಸಂತೋಷ್ ಸಂಬಳದ ಹಣವೇ ವಿನಿಯೋಗ; ಬಿಎಂಟಿಸಿಯಲ್ಲಿ ಮೆಕ್ಯಾನಿಕ್ ಆಗಿ ಸೇವೆ…

32 mins ago

ಸಿಇಸಿ ಜ್ಞಾನೇಶ್​ ಕುಮಾರ್​ರನ್ನು ಹುದ್ದೆಯಿಂದ ಕೆಳಗಿಳಿಸುವ ನಿರ್ಣಯ; ಕೇರಳಂ ವಿಧಾನಸಭೆಯಲ್ಲಿ ಪಾಸ್​​

ಕೇರಳಂ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ಕೆಳಗಿಳಿಸುವಂತೆ ಆಗ್ರಹಿಸಿ ಕೇರಳಂ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ. ಎಸ್‌ಐಆರ್‌…

19 hours ago

ಧನಂಜಯ ಆನೆಯ ಹೆಗಲಿಗೆ ಶ್ರೀರಂಗಪಟ್ಟಣ ದಸರಾ ಜವಾಬ್ದಾರಿ

ಶ್ರೀರಂಗಪಟ್ಟಣ: ಇಲ್ಲಿ ನಡೆಯುವ ದಸರಾ ಮಹೋತ್ಸವದಲ್ಲಿ ಭಾಗವಹಿಸುವ ಆನೆಗಳನ್ನು ಆಯ್ಕೆ ಮಾಡಲಾಗಿದೆ. ಧನಂಜಯ, ಲಕ್ಷ್ಮಿ ಹಾಗೂ ರೂಪ ಆನೆಗಳು ಈ…

20 hours ago