ಬ್ಯಾಂಕಾಕ್: ಮಯನ್ಮಾರ್‌ನಲ್ಲಿ ಸಂಭವಿಸಿದ ಭಾರೀ ಭೂಕಂಪನದಿಂದ ಸಾವಿನ ಪ್ರಮಾಣ ಏರಿಕೆಯಾಗುತ್ತಲೇ ಇದ್ದು, ಮಾಹಿತಿ ಪ್ರಕಾರ ಸಾವಿನ ಸಂಖ್ಯೆ 694ಕ್ಕೆ ಏರಿಕೆಯಾಗಿದೆ.
1600ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿದ್ದು, ರಸ್ತೆಗಳಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಕಟ್ಟಡ ಕುಸಿತದಿಂದ ಅವಶೇಷಗಳಡಿ ಇನ್ನೂ ನೂರಾರು ಮಂದಿ ಸಿಲುಕಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಸ್ಥಳದಲ್ಲಿ ರಕ್ಷಣಾ ತಂಡಗಳು ಶೋಧ ಕಾರ್ಯ ಮುಂದುವರಿಸಿವೆ.
ಮಯನ್ಮಾರ್‌ನ ನೈಪಿತಾವು ಸೇರಿದಂತೆ 6 ಪ್ರದೇಶ ಹಾಗೂ ರಾಜ್ಯಗಳಲ್ಲಿ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದೆ.
ಇನ್ನು ಸಂತ್ರಸ್ತವಾಗಿರುವ ಮಯನ್ಮಾರ್‌ಗೆ ಭಾರತ ನೆರವಿನ ಹಸ್ತ ಚಾಚಿದೆ. ತಾತ್ಕಾಲಿಕ ಟೆಂಟ್‌ಗಳು, ಮಲಗುವ ಹಾಸಿಗೆ, ಹೊದಿಕೆಗಳು, ಆಹಾರ, ನೀರು, ಕಿಟ್, ಸೋಲಾರ್ ಲೈಟ್, ಔಷಧಗಳ ನೆರವನ್ನು ಭಾರತ ನೀಡಿದೆ.





