ದೇಶ- ವಿದೇಶ

ಮೈಸೂರು ಕೇಂದ್ರೀಯ ಸಂಪರ್ಕ ಬ್ಯೂರೋ-CBC ಕಚೇರಿ ಸ್ಥಗಿತ ಬೇಡ : ಕೇಂದ್ರ ವಾರ್ತಾ ಸಚಿವ ಅಶ್ವಿನಿ ವೈಷ್ಣವ್‌ಗೆ ಪತ್ರ ಬರೆದ ಸಚಿವ ಎಚ್‌ಡಿಕೆ

ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ (ಸೆಂಟ್ರಲ್ ಬ್ಯೂರೋ ಆಫ್ ಕಮ್ಯುನಿಕೇಷನ್ -CBC) ಕಚೇರಿಯನ್ನು ಸ್ಥಗಿತಗೊಳಿಸುವ ಕ್ರಮ ಕೈಗೊಳ್ಳಬಾರದು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಮನವಿ ಮಾಡಿದ್ದಾರೆ.

ಈ ಬಗ್ಗೆ ಕೇಂದ್ರದ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಪತ್ರ ಬರೆದಿರುವ ಕುಮಾರಸ್ವಾಮಿ ಅವರು; ಮೈಸೂರಿನಲ್ಲಿ ಕೇಂದ್ರೀಯ ಸಂಪರ್ಕ ಬ್ಯೂರೋವನ್ನು ಮತ್ತಷ್ಟು ಉನ್ನತೀಕರಿಸಿ ಯಥಾಸ್ಥಿತಿಯಲ್ಲಿ ಮುಂದುವರಿಸುವುದು ಅತ್ಯಗತ್ಯವಾಗಿದೆ. ರಾಜ್ಯದಲ್ಲಿಯೇ ಮೈಸೂರು ನಗರಕ್ಕೆ ಐತಿಹಾಸಿಕ ಪ್ರಾಮುಖ್ಯತೆ ಹೊಂದಿದೆ. ಇಲ್ಲಿಗೆ ದೇಶ ವಿದೇಶಗಳಿಂದ ಅಸಂಖ್ಯಾತ ಪ್ರವಾಸಿಗರು ಭೇಟಿ ನೀಡುತ್ತಾರೆ ಎಂಬ ಅಂಶವನ್ನು ಉಲ್ಲೇಖ ಮಾಡಿದ್ದಾರೆ.

ಕೇಂದ್ರ ಸರ್ಕಾರ ಕೈಗೊಳ್ಳುತ್ತಿರುವ ಜನಪರ ಕಾರ್ಯಕ್ರಗಳನ್ನು ಪ್ರಸರಣ ಮಾಡುವಲ್ಲಿ ಈ ಬ್ಯೂರೋ ಪ್ರಮುಖ ಪಾತ್ರ ವಹಿಸುತ್ತಿದ್ದು, ಮುಖ್ಯವಾಗಿ ಮೈಸೂರು, ಚಾಮರಾಜನಗರ, ಕೊಡಗು, ಹಾಸನ ಜಿಲ್ಲೆಗಳ ಜನತೆಗೆ ಮಾಹಿತಿ ನೀಡುವಲ್ಲಿ ಉತ್ತಮವಾಗಿ ಕೆಲಸ ಮಾಡುತ್ತಿದೆ. ಒಂದು ವೇಳೆ ಈ ಬ್ಯೂರೋದ ಕಚೇರಿ ಸ್ಥಗಿತವಾದರೆ ಕೇಂದ್ರ ಸರ್ಕಾರ ಹಾಗೂ ಜನರ ನಡುವಿನ ಸಂಪರ್ಕ ಸೇತುವೆ ಇಲ್ಲವಾಗುತ್ತದೆ ಎಂಬ ಅಂಶವನ್ನು ಸಚಿವ ಕುಮಾರಸ್ವಾಮಿ ಅವರು ವಾರ್ತಾ ಸಚಿವರ ಗಮನಕ್ಕೆ ತಂದಿದ್ದಾರೆ.

ಇದನ್ನು ಓದಿ: ಉನ್ನಾವೋ ಅತ್ಯಾಚಾರ ಪ್ರಕರಣ : ರಾಹುಲ್‌ಗಾಂಧಿ ಭೇಟಿಯಾದ ಸಂತ್ರಸ್ತೆ ಕುಟುಂಬ 

ಮೈಸೂರು ಮತ್ತು ಸುತ್ತಮುತ್ತಲಿನ ಜಿಲ್ಲೆಗಳು ಅನನ್ಯ ಸಾಂಸ್ಕೃತಿಕ ಮತ್ತು ಐತಿಹಾಸಿಕ ಮಹತ್ವವನ್ನು ಹೊಂದಿವೆ. ಮೈಸೂರು ನಗರವನ್ನು ಕರ್ನಾಟಕದ ಸಾಂಸ್ಕೃತಿಕ ರಾಜಧಾನಿ ಎಂದು ಪರಿಗಣಿಸಲಾಗಿದೆ. ಈ ನಗರವು ಮೈಸೂರು ಅರಮನೆ ಮತ್ತು ಜಗನ್ಮೋಹನ ಅರಮನೆಯಂತಹ ಸಾಂಪ್ರದಾಯಿಕ ಪರಂಪರೆಯ ಹೆಗ್ಗುರುತುಗಳಿಗೆ ನೆಲೆಯಾಗಿದೆ ಮತ್ತು ಅಲ್ಲದೆ ಜಗದ್ವಿಖ್ಯಾತ ದಸರಾ ಮಹೋತ್ಸವದ ಮೂಲಕ ವಿಶ್ವಪ್ರಸಿದ್ಧಿ ಹೊಂದಿದೆ. ಈ ಮೂಲಕ ಭಾರತೀಯ ಶ್ರೀಮಂತ ಸಾಂಸ್ಕೃತಿಕ ಮೇರು ನೆಲೆಯಾಗಿ ಮೈಸೂರು ಗುರುತಿಸಲ್ಪಡುತ್ತದೆ. ಹೀಗಾಗಿ ಇಲ್ಲಿ ಅನೇಕ ಸಾಂಸ್ಕೃತಿಕ, ಕಲಾ, ಸಂಗೀತ, ಪ್ರವಾಸಿ ಕಾರ್ಯಕ್ರಮಗಳು ನಿರಂತರವಾಗಿ ನಡೆಯುತ್ತವೆ. ಇಂಥ ಸಮಯದಲ್ಲಿ ಸುಗಮ ಸಂವಹನ, ಸಮನ್ವಯ ಮತ್ತು ಸಾರ್ವಜನಿಕ ಸಂಪರ್ಕವನ್ನು ಖಚಿತಪಡಿಸಿಕೊಳ್ಳಲು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕೇಂದ್ರೀಯ ಸಂಪರ್ಕ ಬ್ಯೂರೋ ಕಚೇರಿ ಇರುವುದು ಅತ್ಯಗತ್ಯವಾಗಿದೆ.

ಈ ಜಿಲ್ಲೆಗಳಲ್ಲಿ ಗಣನೀಯ ಪ್ರಮಾಣದಲ್ಲಿ ಬುಡಕಟ್ಟು ಸಮುದಾಯಗಳ ಜನರು ವಾಸ ಮಾಡುತ್ತಿದ್ದಾರೆ. ಜೇನು ಕುರುಬ, ಕಾಡು ಕುರುಬ, ಸೋಲಿಗರು ಹಾಗೂ ಯರವ ಬುಡಕಟ್ಟು ಜನರು ಇಲ್ಲಿದ್ದಾರೆ. ಇಂತಹ ಸಮುದಾಯಗಳಿಗೆ ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ನೀಡುವುದು, ಅವರ ಶ್ರೇಯೋಭಿವೃದ್ಧಿಗೆ ಶ್ರಮಿಸುವ ದೃಷ್ಟಿಯಿಂದ ಮೈಸೂರು ಕಚೇರಿಯನ್ನು ಉಳಿಸಿಕೊಳ್ಳುವುದು ಅಗತ್ಯವಾಗಿದೆ ಎಂದು ಕುಮಾರಸ್ವಾಮಿ ಅವರು ಒತ್ತಿ ಹೇಳಿದ್ದಾರೆ.

ಯಾವುದೇ ಕಾರಣಕ್ಕೂ ಮೈಸೂರು ನಗರದಲ್ಲಿರುವ ಕೇಂದ್ರೀಯ ಸಂಪರ್ಕ ಬ್ಯೂರೊವನ್ನು ಸ್ಥಗಿತಗೊಳಿಸದೆ, ಅದಕ್ಕೆ ಮತ್ತಷ್ಟು ಶಕ್ತಿಯನ್ನು ತುಂಬಿ ಮುಂದುವರಿಸಬೇಕು ಎಂದು ಸಚಿವ ಕುಮಾರಸ್ವಾಮಿ ಅವರು ಅಶ್ವಿನಿ ವೈಷ್ಣವ್ ಅವರನ್ನು ಕೋರಿದ್ದಾರೆ.

ರಾಜ್ಯದಲ್ಲಿ ಕೆಲಸ ಮಾಡುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋಗಳ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿರುವ ಸಚಿವ ಕುಮಾರಸ್ವಾಮಿ ಅವರು, ಮೈಸೂರು ಕಚೇರಿಯನ್ನು ಸ್ಥಗಿತಗೊಳಿಸುವ ಕ್ರಮ ವಹಿಸಬಾರದು ಎಂದು ಮನವಿ ಮಾಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಉನ್ನಾವೋ ಅತ್ಯಾಚಾರ ಪ್ರಕರಣ : ರಾಹುಲ್‌ಗಾಂಧಿ ಭೇಟಿಯಾದ ಸಂತ್ರಸ್ತೆ ಕುಟುಂಬ

ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್‌ನ ರಾಹುಲ್ ಗಾಂಧಿ ಅವರನ್ನು…

1 hour ago

ಉನ್ನಾವೊ ಪ್ರಕರಣ : ಸೆಂಗರ್‌ ಶಿಕ್ಷೆ ಅಮಾನತು ; ಸಂತ್ರಸ್ತೆ ತಾಯಿ ಹೇಳಿದಿಷ್ಟು?

ಹೊಸದಿಲ್ಲಿ : 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್‌ಗೆ ಜಾಮೀನು ದೊರೆತಿರುವುದನ್ನು ವಿರೋಧಿಸಿ ಸಂತ್ರಸ್ತೆ…

2 hours ago

ಚಂದನವನದಲ್ಲಿ ಸ್ಟಾರ್‌ ವಾರ್‌ : ನಟಿ ರಕ್ಷಿತಾ ಪ್ರೇಮ್‌ ಹೇಳಿದಿಷ್ಟು?

ಬೆಂಗಳೂರು : ಮಾರ್ಕ್‌ʼ ಸಿನಿಮಾದ ಪ್ರೀ-ರಿಲೀಸ್‌ ಈವೆಂಟ್‌ನಲ್ಲಿ ಕಿಚ್ಚ ಸುದೀಪ್‌ ಹೇಳಿದ ಮಾತೊಂದು ಸೋಶಿಯಲ್‌ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ…

2 hours ago

ರೈತರಿಗೆ ಅಗತ್ಯವಿರುವ ಸೌಲಭ್ಯ ಒದಗಿಸಲು ಸರ್ಕಾರ ಬದ್ದ : ಸಚಿವ ಕೆ.ವೆಂಕಟೇಶ್

ಚಾಮರಾಜನಗರ : ಅನ್ನದಾತರಾಗಿರುವ ರೈತರ ಬಗ್ಗೆ ಆತ್ಮೀಯ ಕಾಳಜಿಯಿದ್ದು, ಅವರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಕೆಲಸವನ್ನು ಮಾಡುತ್ತಿದೆ…

2 hours ago

ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜಿನಲ್ಲಿ ನೇಮಕಾತಿ ; ಆಸಕ್ತರು ಇಂದೇ ಅರ್ಜಿ ಸಲ್ಲಿಸಿ

ಬೆಂಗಳೂರು : ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು…

2 hours ago

ಕೆಎಸ್‌ಆರ್‌ಟಿಸಿ ಮಹಿಳಾ ಸಿಬ್ಬಂದಿಗಳಿಗೆ ಗುಡ್‌ನ್ಯೂಸ್‌ : ತಿಂಗಳಿಗೊಂದು ಋತುಚಕ್ರ ರಜೆ ನೀಡಲು ಆದೇಶ

ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಕಾರ್ಯನಿರ್ವಾಹಿಸುತ್ತಿರುವ ಮಹಿಳಾ ಸಿಬ್ಬಂದಿಗೆ ತಿಂಗಳಿಗೊಂದು ದಿನ ಋತುಚಕ್ರ ರಜೆ ನೀಡುವಂತೆ…

3 hours ago