ದೇಶ- ವಿದೇಶ

ಚೀನಾದಲ್ಲಿ ಕೋವಿಡ್‌ ಮಾದರಿಯ ನಿಗೂಢ ವೈರಸ್‌ ಪತ್ತೆ: ರೋಗಿಗಳಿಂದ ತುಂಬಿ ತುಳುಕುತ್ತಿರುವ ಆಸ್ಪತ್ರೆಗಳು

ಬೀಜಿಂಗ್:‌ ಕೋವಿಡ್‌ ವೈರಸ್‌ನಿಂದ ಸುಧಾರಿಸಿಕೊಳ್ಳುವ ಮುನ್ನವೇ ನೆರೆಯ ದೇಶ ಚೀನಾದಲ್ಲಿ ಮತ್ತೊಂದು ನಿಗೂಢ ವೈರಾಣು ಪತ್ತೆಯಾಗಿದ್ದು, ಜನತೆಯಲ್ಲಿ ಮತ್ತಷ್ಟು ಆತಂಕ ಹೆಚ್ಚಿಸಿದೆ.

ಹ್ಯೂಮನ್‌ ಮೆಟಾಪ್ನ್ಯೂಮೊ ವೈರಸ್‌ ಈ ಬಾರಿ ಚೀನಾದಲ್ಲಿ ಕಾಣಿಸಿಕೊಂಡಿದ್ದು, ನೆರೆಯ ರಾಷ್ಟ್ರ ವೈರಸ್‌ನಿಂದ ಪಾರಾಗಲು ಸ್ಕ್ರೀನಿಂಗ್‌, ಪತ್ತೆ ಮತ್ತು ಪ್ರತ್ಯೇಕತೆಯ ಪ್ರೊಟೋಕಾಲ್‌ಗಳ ಮೊರೆ ಹೋಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಚೀನಾ ದೇಶದಲ್ಲಿ ಎಚ್‌ಎಂಪಿವಿಯ ವೈರಾಣು ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ವಿಶೇಷವಾಗಿ ಉತ್ತರ ಪ್ರಾಂತ್ಯದಲ್ಲಿ 14 ವರ್ಷದೊಳಗಿನ ಮಕ್ಕಳನ್ನು ಅತೀ ಹೆಚ್ಚಾಗಿ ಬಾಧಿಸುತ್ತಿದೆ.

ಇನ್ನು ಚೀನಾದಲ್ಲಿ ಕೋವಿಡ್‌ ಮಾದರಿಯ ಸ್ಥಿತಿ ಎದುರಾಗದಂತೆ ತಡೆಗಟ್ಟಲು ಚೀನಾ ಸರ್ಕಾರ ಹೆಚ್ಚಿನ ಕ್ರಮ ಕೈಗೊಂಡಿದ್ದು, ಜನತೆಯಲ್ಲಿ ಮುನ್ನೆಚ್ಚರಿಕೆ ವಹಿಸುವಂತೆ ಸೂಚನೆ ನೀಡಿದೆ.

ರಾಯಿಟರ್ಸ್‌ ವರದಿ ಪ್ರಕಾರ, ಚೀನಾದಲ್ಲಿ ಎಚ್‌ಎಂಪಿವಿ ಪ್ರಕರಣಗಳು ಹೆಚ್ಚಾಗಿ ವರದಿಯಾಗಿವೆ. ರೈನೋವೈರಸ್‌ನಂತಹ ಇತರ ಸಾಂಕ್ರಾಮಿಕ ರೋಗಗಳನ್ನು ಹರಡುವ ಅಪಾಯದಲ್ಲಿದೆ ಎಂದು ಹೇಳಿದ್ದು, ಜನತೆಯಲ್ಲಿ ಭಾರೀ ಆತಂಕ ಸೃಷ್ಟಿಯಾಗಿದೆ.

ಈ ವೈರಸ್‌ ಎಲ್ಲಾ ವಯಸ್ಸಿನ ಜನರಲ್ಲಿ ಉಸಿರಾಟದ ಕಾಯಿಲೆಗಳನ್ನು ಉಂಟು ಮಾಡಬಹುದು. ಚಿಕ್ಕಮಕ್ಕಳು, ಹಿರಿಯ ವಯಸ್ಕರು ಮತ್ತು ದುರ್ಬಲ ರೋಗ ನಿರೋಧಕ ಶಕ್ತಿ ಹೊಂದಿರುವ ಜನರು ಈ ರೋಗಕ್ಕೆ ಬೇಗ ಗುರಿಯಾಗುತ್ತಾರೆ. ಈ ವೈರಸನ್ನು ಮೊದಲಿಗೆ 2001ರಲ್ಲಿ ಪತ್ತೆ ಮಾಡಲಾಗಿತ್ತು.

ಇನ್ನು ಚೀನಾದಲ್ಲಿ ಕೆಮ್ಮು, ಜ್ವರ, ಮೂಗು ಕಟ್ಟುವಿಕೆ, ಉಸಿರಾಟದ ತೊಂದರೆ ಇರುವವರು ನಿರ್ಲಕ್ಷ್ಯ ಮಾಡದೇ ಆಸ್ಪತ್ರೆಗಳಲ್ಲಿ ಪರೀಕ್ಷೆ ಮಾಡಿಸಿಕೊಳ್ಳಬೇಕು. ಪರೀಕ್ಷೆ ನಡೆಸಿದ ಬಳಿಕ ಒಂದು ವೇಳೆ ಅವರಿಗೆ ಸೋಂಕು ಹರಡಿದೆ ಎಂದು ದೃಢವಾದರೆ, ಆ ವ್ಯಕ್ತಿಗಳನ್ನು ಪ್ರತ್ಯೇಕ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತದೆ. ಯಾರೂ ಕೂಡ ಹೆದರುವ ಅವಶ್ಯಕತೆಯಿಲ್ಲ. ಎಲ್ಲರೂ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಎಲ್ಲೆಂದರಲ್ಲಿ ಗುಂಪುಗೂಡಬಾರದು. ಆಗಾಗ್ಗೆ ಸ್ಯಾನಿಟೈಸರ್‌ ಬಳಸಬೇಕು ಎಂದು ಅಲ್ಲಿನ ಆರೋಗ್ಯ ಇಲಾಖೆ ಸೂಚನೆ ನೀಡಿದೆ.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

3 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

7 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

7 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

7 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

7 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

8 hours ago