ದೇಶ- ವಿದೇಶ

ಬೇರೆ ರಾಜ್ಯಗಳ ಲಾಟರಿ ನಿಯಂತ್ರಿಸುವ ಕೇರಳ ಸರ್ಕಾರದ ನಿಯಮ ಪ್ರಶ್ನಿಸಿ ಸುಪ್ರೀಂ ಮೊರೆ ಹೋದ ನಾಗಾಲ್ಯಾಂಡ್; ನೋಟಿಸ್ ಜಾರಿ

ನವದೆಹಲಿ: ಕೇರಳದಲ್ಲಿ ಬೇರೆ ರಾಜ್ಯಗಳು ನಡೆಸುವ ಲಾಟರಿಗಳನ್ನು ನಿಯಂತ್ರಣಕ್ಕೆ ತರುವ ನಿಯಮಾವಳಿಗಳ ಸಿಂಧುತ್ವ ಪ್ರಶ್ನಿಸಿ ನಾಗಾಲ್ಯಾಂಡ್ ಸರ್ಕಾರ ಸಲ್ಲಿಸಿದ ಮನವಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಕೇರಳ ಸರ್ಕಾರದ ಪ್ರತಿಕ್ರಿಯೆ ಕೇಳಿದೆ.

ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರ ವಾದ ಆಲಿಸಿದ ನಂತರ ನ್ಯಾಯಮೂರ್ತಿಗಳಾದ ಕೆ ಎಂ ಜೋಸೆಫ್ ಮತ್ತು ಹೃಷಿಕೇಶ್ ರಾಯ್ ಅವರಿದ್ದ ಪೀಠ ಕೇರಳ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿತು.

ಕೇರಳ ಕಾಗದ ಲಾಟರಿಗಳ (ನಿಯಂತ್ರಣ) ತಿದ್ದುಪಡಿ ನಿಯಮಾವಳಿ- 2018ರ ಸಿಂಧುತ್ವವನ್ನು ಇತ್ತೀಚೆಗೆ ಎತ್ತಿಹಿಡಿದಿದ್ದ ಕೇರಳ ಹೈಕೋರ್ಟ್‌ ತೀರ್ಪನ್ನು ಅರ್ಜಿ ಪ್ರಶ್ನಿಸಿದೆ. ಇತರೆ ರಾಜ್ಯಗಳು ನಡೆಸುವ ಲಾಟರಿಗಳ ಮೇಲ್ವಿಚಾರಣೆ ನಡೆಸಲು ಮತ್ತು ದಂಡ ವಿಧಿಸಲು ಕೇರಳ ಸರ್ಕಾರದ ನಿಯಮಾವಳಿಗಳು ಅನುವು ಮಾಡಿಕೊಡುತ್ತವೆ.

ಇದನ್ನು ಪ್ರಶ್ನಿಸಿರುವ ನಾಗಾಲ್ಯಾಂಡ್‌ ಸರ್ಕಾರ, “ನಿಯಮಗಳು ಸಂವಿಧಾನದಲ್ಲಿ ಕಲ್ಪಿಸಿರುವ ಒಕ್ಕೂಟ ಎಂಬ ಮೂಲಭೂತ ಪರಿಕಲ್ಪನೆಗೆ ವಿರುದ್ಧವಾಗಿದ್ದು ಲಾಟರಿ (ನಿಯಂತ್ರಣ) ಕಾಯಿದೆ ಮತ್ತು ನಿಯಮಗಳ ನೇರ ಉಲ್ಲಂಘನೆಯಾಗಿದೆ. ಹೈಕೋರ್ಟ್‌ ತೀರ್ಪು ರಾಜ್ಯದೊಳಗೆ ಕೇರಳ ಸರ್ಕಾರ ಲಾಟರಿ ಮಾರಾಟದ ಏಕಸ್ವಾಮ್ಯತೆ ಸಾಧಿಸಲು ಅವಕಾಶ ಮಾಡಿಕೊಟ್ಟಿದೆ. ಆದರೆ ಸುಪ್ರೀಂ ಕೋರ್ಟ್‌ ʼರಾಜ್ಯವೊಂದು ಲಾಟರಿ ಮುಕ್ತ ವಲಯವಾಗದ ಹೊರತು ಅದು ನೇರವಾಗಿ ಇಲ್ಲವೇ ಪರೋಕ್ಷವಾಗಿ ತನ್ನ ನೆಲದಲ್ಲಿ ಇತರೆ ರಾಜ್ಯಗಳು ನಡೆಸುವ ಲಾಟರಿಗಳನ್ನು ತಡೆಯುವ/ನಿರ್ಬಂಧಿಸುವ/ನಿಯಂತ್ರಿಸುವ/ಕಡಿವಾಣ ಹಾಕುವ ಕ್ರಮಗಳಿಗೆ ಮುಂದಾಗುವಂತಿಲ್ಲ ಎಂದು ಹೇಳಿರುವುದಾಗಿ ತಿಳಿಸಿದೆ.

andolana

Recent Posts

ಮುಡಾ ಕಚೇರಿಯಲ್ಲಿ ಇಂದು ಕೂಡ ಸಾರ್ವಜನಿಕರ ಕೆಲಸಗಳಿಗೆ ಬ್ರೇಕ್

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ. ಅಧಿಕಾರಿಗಳು ಇಂದು ಕೂಡ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದು, ಸಾರ್ವಜನಿಕರ ಕೆಲಸಗಳಿಗೆ ಬ್ರೇಕ್‌ ಹಾಕಲಾಗಿದೆ.…

1 min ago

ಬಿಜೆಪಿ ಮುಖಂಡ ರಘು ಕೌಟಿಲ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು

ಮೈಸೂರು: ಕಾನೂನು ಬಾಹಿರವಾಗಿ ಸಿ.ಎ ನಿವೇಶನ ಪಡೆದಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮುಖಂಡ ರಘು ಕೌಟಿಲ್ಯ ವಿರುದ್ಧ ನಾಗೇಂದ್ರ ಎಂಬುವವರು…

24 mins ago

ಕಪಿಲಾ ನದಿಗೆ ಮತ್ತೊಂದು ಸೇತುವೆ

ನಂಜನಗೂಡು: ವರುಣ ಕ್ಷೇತ್ರ ಹಾಗೂ ನಂಜನಗೂಡು ವಿಧಾನಸಭಾ ಕ್ಷೇತ್ರವನ್ನು ಸಂಪರ್ಕಿಸಲು ಕಪಿಲಾ ನದಿಗೆ ಮತ್ತೊಂದು ಸೇತುವೆ ಮಂಜೂರಾಗಿದೆ. ತಾಲ್ಲೂಕಿನ ನಂಜನಗೂಡು-ಹುಲ್ಲಹಳ್ಳಿ…

47 mins ago

ಮುಡಾ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿಗೆ ಸಂಕಷ್ಟ

ಮೈಸೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ಭಾರೀ ಸಂಕಷ್ಟ ಎದುರಾಗಿದೆ ಎಂಬ ಮಾಹಿತಿ…

51 mins ago

ಮೆಟ್ರಿಕ್‌ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಮೈಸೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಮೆಟ್ರಿಕ್ ನಂತರದ ಕೋರ್ಸ್‌ಗಳಾದ ಸ್ನಾತಕೋತ್ತರ ಪದವಿ, ವೃತ್ತಿಪರ ಪದವಿ ಮತ್ತು ವೃತ್ತಿಪರ…

1 hour ago

ನಿಜ್ಜರ್ ಹತ್ಯೆ ಪ್ರತಿಧ್ವನಿ-ಕೆನಡಾ ಭಾರತೀಯರಲ್ಲಿ ಆತಂಕ

ಅಮಿತ್ ಶಾ, ಅಜಿತ್‌ ದೋವಲ್ ಮೇಲೆಯೂ ಆರೋಪ ಡಿ.ವಿ.ರಾಜಶೇಖರ ಖಾಲಿಸ್ತಾನ್ ಉಗ್ರವಾದಿ ನಾಯಕ ಹರದೀಪ್‌ ಸಿಂಗ್ ನಿಜ್ಜರ್ ಹತ್ಯೆಯ ನಂತರದ…

1 hour ago