ದೇಶ- ವಿದೇಶ

ಬೇರೆ ರಾಜ್ಯಗಳ ಲಾಟರಿ ನಿಯಂತ್ರಿಸುವ ಕೇರಳ ಸರ್ಕಾರದ ನಿಯಮ ಪ್ರಶ್ನಿಸಿ ಸುಪ್ರೀಂ ಮೊರೆ ಹೋದ ನಾಗಾಲ್ಯಾಂಡ್; ನೋಟಿಸ್ ಜಾರಿ

ನವದೆಹಲಿ: ಕೇರಳದಲ್ಲಿ ಬೇರೆ ರಾಜ್ಯಗಳು ನಡೆಸುವ ಲಾಟರಿಗಳನ್ನು ನಿಯಂತ್ರಣಕ್ಕೆ ತರುವ ನಿಯಮಾವಳಿಗಳ ಸಿಂಧುತ್ವ ಪ್ರಶ್ನಿಸಿ ನಾಗಾಲ್ಯಾಂಡ್ ಸರ್ಕಾರ ಸಲ್ಲಿಸಿದ ಮನವಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಕೇರಳ ಸರ್ಕಾರದ ಪ್ರತಿಕ್ರಿಯೆ ಕೇಳಿದೆ.

ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರ ವಾದ ಆಲಿಸಿದ ನಂತರ ನ್ಯಾಯಮೂರ್ತಿಗಳಾದ ಕೆ ಎಂ ಜೋಸೆಫ್ ಮತ್ತು ಹೃಷಿಕೇಶ್ ರಾಯ್ ಅವರಿದ್ದ ಪೀಠ ಕೇರಳ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿತು.

ಕೇರಳ ಕಾಗದ ಲಾಟರಿಗಳ (ನಿಯಂತ್ರಣ) ತಿದ್ದುಪಡಿ ನಿಯಮಾವಳಿ- 2018ರ ಸಿಂಧುತ್ವವನ್ನು ಇತ್ತೀಚೆಗೆ ಎತ್ತಿಹಿಡಿದಿದ್ದ ಕೇರಳ ಹೈಕೋರ್ಟ್‌ ತೀರ್ಪನ್ನು ಅರ್ಜಿ ಪ್ರಶ್ನಿಸಿದೆ. ಇತರೆ ರಾಜ್ಯಗಳು ನಡೆಸುವ ಲಾಟರಿಗಳ ಮೇಲ್ವಿಚಾರಣೆ ನಡೆಸಲು ಮತ್ತು ದಂಡ ವಿಧಿಸಲು ಕೇರಳ ಸರ್ಕಾರದ ನಿಯಮಾವಳಿಗಳು ಅನುವು ಮಾಡಿಕೊಡುತ್ತವೆ.

ಇದನ್ನು ಪ್ರಶ್ನಿಸಿರುವ ನಾಗಾಲ್ಯಾಂಡ್‌ ಸರ್ಕಾರ, “ನಿಯಮಗಳು ಸಂವಿಧಾನದಲ್ಲಿ ಕಲ್ಪಿಸಿರುವ ಒಕ್ಕೂಟ ಎಂಬ ಮೂಲಭೂತ ಪರಿಕಲ್ಪನೆಗೆ ವಿರುದ್ಧವಾಗಿದ್ದು ಲಾಟರಿ (ನಿಯಂತ್ರಣ) ಕಾಯಿದೆ ಮತ್ತು ನಿಯಮಗಳ ನೇರ ಉಲ್ಲಂಘನೆಯಾಗಿದೆ. ಹೈಕೋರ್ಟ್‌ ತೀರ್ಪು ರಾಜ್ಯದೊಳಗೆ ಕೇರಳ ಸರ್ಕಾರ ಲಾಟರಿ ಮಾರಾಟದ ಏಕಸ್ವಾಮ್ಯತೆ ಸಾಧಿಸಲು ಅವಕಾಶ ಮಾಡಿಕೊಟ್ಟಿದೆ. ಆದರೆ ಸುಪ್ರೀಂ ಕೋರ್ಟ್‌ ʼರಾಜ್ಯವೊಂದು ಲಾಟರಿ ಮುಕ್ತ ವಲಯವಾಗದ ಹೊರತು ಅದು ನೇರವಾಗಿ ಇಲ್ಲವೇ ಪರೋಕ್ಷವಾಗಿ ತನ್ನ ನೆಲದಲ್ಲಿ ಇತರೆ ರಾಜ್ಯಗಳು ನಡೆಸುವ ಲಾಟರಿಗಳನ್ನು ತಡೆಯುವ/ನಿರ್ಬಂಧಿಸುವ/ನಿಯಂತ್ರಿಸುವ/ಕಡಿವಾಣ ಹಾಕುವ ಕ್ರಮಗಳಿಗೆ ಮುಂದಾಗುವಂತಿಲ್ಲ ಎಂದು ಹೇಳಿರುವುದಾಗಿ ತಿಳಿಸಿದೆ.

andolana

Recent Posts

ಓದುಗರ ಪತ್ರ: ಪೌರಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಸ್ವಾಗತಾರ್ಹ

ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…

2 hours ago

ಓದುಗರ ಪತ್ರ: ನಿಜವಾದ ಭಾವೈಕ್ಯತೆಯ ಸಂಗಮ

ಮಂಡ್ಯ ಜಿಯ ಮದ್ದೂರಿನಲ್ಲಿ ಭಾನುವಾರ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಮುಸ್ಲಿಮರೇ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಗೌರಿ -ಗಣೇಶ ಮೂರ್ತಿಗಳನ್ನು ಹೊತ್ತ ಟ್ರ್ಯಾಕ್ಟರ್…

2 hours ago

ಓದುಗರ ಪತ್ರ: ನಾಡಿಗೆ ಮಾದರಿ!

ನಾಡಿಗೆ ಮಾದರಿ! ವಿವಿಧ ಧರ್ಮ ಸಮುದಾಯಗಳ ಮನಸುಗಳ ಅಕ್ಕರೆಯಲಿ ಬೆಸೆವ ಸ್ನೇಹ ಸೌಹಾರ್ದ ಸಾಮರಸ್ಯದ ಪ್ರತೀಕ, ಹಬ್ಬ ಉತ್ಸವಗಳು! ನಾಡಿಗೆ…

2 hours ago

ಓದುಗರ ಪತ್ರ: ಪ್ರೀತಿಯ ಅಣ್ಣ ಪ್ರತಾಪ್ ಸಿಂಹ…

ನಾವಿಬ್ಬರು ಪ್ರೊ. ಬಿ. ಪಿ. ಮಹೇಶ್ ಚಂದ್ರ ಗುರುಗಳ ಶಿಷ್ಯರು. ನಮ್ಮಿಬ್ಬರಿಗೂ ಪ್ರೊ. ಗುರು ಇಷ್ಟ. ನೀನು ಮಂಗಳೂರು ವಿವಿ,…

3 hours ago

ದಸರಾ ಬರುತ್ತಿದೆ, ಮೈಸೂರು ಸಿದ್ಧವಾಗುತ್ತಿದೆಯೇ?

ಶ್ರೇಯಸ್ ದೇವನೂರು ಅಭಿವೃದ್ಧಿಯ ಹೆಸರಿನಲ್ಲಿ ಅರ್ಧ ಕಾಮಗಾರಿ, ಸಂಚಾರದ ಹೆಸರಿನಲ್ಲಿ ಹೆಚ್ಚುತ್ತಿರುವ ಸಂಕಷ್ಟ  ಮೈಸೂರು ದಸರಾ ಎಂದರೆ ಕೇವಲ ಹತ್ತು…

3 hours ago

ಫಾಲ್ಕೆ ಪ್ರಶಸ್ತಿ ಕಲಾಸೇವೆಗೆ ಸಂದ ಗೌರವ: ಅನಂತ್ ನಾಗ್‌

ಸಂದರ್ಶನ: ಬಾನಾಸು  ಇಂದು ಗುಜರಾತಿನ ಕೆವಾಡಿಯಾದಲ್ಲಿ ೭೨ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ನಡೆಯಲಿದೆ. ಚಿತ್ರರಂಗಕ್ಕೆ ಸಲ್ಲಿಸಿದ ಅಮೋಘ ಸೇವೆಗಾಗಿ…

3 hours ago