ದೇಶ- ವಿದೇಶ

‘ನಳಂದ’ ಕೇವಲ ಹೆಸರಲ್ಲ ಅದೊಂದು ಅಸ್ಮಿತೆ : ಪ್ರಧಾನಿ ಮೋದಿ

ಬಿಹಾರ : ನಳಂದ ಕೇವಲ ಒಂದು ಹೆಸರಲ್ಲ ಅದೊಂದು ಅಸ್ಮಿತೆ ಎಂದು ಪ್ರಧನಿ ನರೇಂದ್ರ ಮೋದಿ ಅಭಿಪ್ರಾಯ ವ್ಯಕ್ತಪಡಿಸಿದರು.

ಬಿಹಾರದ ರಾಜ್‌ಗಿರ್‌ನಲ್ಲಿ ನೂತನವಾಗಿ ನಿರ್ಮಿಸಿರುವ ನಳಂದ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ಫಲಕವನ್ನು ಅನಾವರಣ ಮಾಡಿ ಸಸಿ ನೆಡುವ ಮೂಲಕ ಇಂದು ಪ್ರಧಾನಿ ಮೋದಿ ಉದ್ಘಾಟನೆ ಮಾಡಿದ್ದಾರೆ. ಬಳಿಕ ಮಾತನಾಡಿದ ಪ್ರಧಾನಿ ಮೋದಿ, ಮೂರನೇ ಬಾರಿ ಪ್ರಧಾನಿಯಾದ ಬಳಿಕ ನಳಂದಕ್ಕೆ ಭೇಟಿ ನೀಡುವ ಅವಕಾಶ ಸಿಕ್ಕಿರುವುದಕ್ಕೆ ನನಗೆ ತುಂಬಾ ಸಂತೋಷವಾಗಿದೆ ಎಂದರು.

ನಳಂದ ಕೇವಲ ಒಂದು ಹೆಸರಲ್ಲ ಅದೊಂದು ಅಸ್ಮಿತೆ ಮತ್ತು ಗೌರವ. ನಳಂದ ಒಂದು ಮೌಲ್ಯ ಮತ್ತು ಮಂತ್ರ. ಬೆಂಕಿ ಪುಸ್ತಕವನ್ನು ಸುಡಬಹುದೆ ಹೊರತು ಜ್ಞಾನವನ್ನು ನಾಶ ಮಾಡಲು ಸಾಧ್ಯವಿಲ್ಲ ಎಂದರು.  ಇದೇ ಸಂದರ್ಭದಲ್ಲಿ ೧೭ದೇಶಗಳ ರಾಯಭಾರಿಗಳು ಕಾರ್ಯಕ್ರಮದಲ್ಲಿ ಭಾಗವಿಸುವ ಮೂಲಕ ವಿಶೇಷ ಕ್ಷಣಕ್ಕೆ ಸಾಕ್ಷಿಯಾದರು.

ಈ ವೇಳೆ ವಿದೇಶಾಂಗ ಸಚಿವ ಎಸ್‌.ಜೈಶಂಕರ್‌, ಬಿಹಾರದ ರಾಜ್ಯಪಾಲರಾದ ರಾಜೇಂದ್ರ ಅರ್ಲೇಕರ್‌, ಮುಖ್ಯಮಂತ್ರಿ ನಿತೀಶ್‌ ಕುಮಾರ್‌, ಉಪಮುಖ್ಯಮಂತ್ರಿಗಳಾದ ಸಾಮ್ರಾಟ್‌ ಚೌಧರಿ ಹಾಗೂ ವಿಜಯ್‌ ಸನ್ಹಾ ಉಪಸ್ಥಿತರಿದ್ದರು.

 

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ವರ್ತಕರಿಗೆ ಹಬ್ಬದ ನಿರಾಳತೆ: ದೀಪಾವಳಿ ನಂತರಕ್ಕೆ UPI ಮರ್ಚೆಂಟ್‌ ಶುಲ್ಕ ಜಾರಿ ಮುಂದೂಡಿಕೆ

ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್‌ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್‌ ಪಾವತಿಗಳ ಮೇಲಿನ…

1 hour ago

ಸ್ಟಿಂಗ್ ಆಪರೇಷನ್ ಬಗ್ಗೆ ಕುಮಾರಸ್ವಾಮಿಯನ್ನೇ ಕೇಳಿ: ಸಚಿವ ಪುಟ್ಟರಂಗಶೆಟ್ಟಿ

ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…

2 hours ago

ಸ್ಟಿಂಗ್ ಆಪರೇಷನ್ ಆರೋಪ: ಸಾಕ್ಷಿ ಬಿಡುಗಡೆಗೆ ಶಾಸಕ ತನ್ವೀರ್ ಸೇಠ್ ಒತ್ತಾಯ

ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…

3 hours ago

ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…

3 hours ago

ಕಾಡಾನೆ ದಾಳಿ: ರೈತ ಸಾವು

ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…

3 hours ago

ಓದುಗರ ಪತ್ರ: ರಾಜಕಾರಣಿಗಳದ್ದು ‘ಆಚಾರವಿಲ್ಲದ ನಾಲಿಗೆ’ ಆಗಬಾರದಲ್ಲವೇ?

ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…

6 hours ago