ದೇಶ- ವಿದೇಶ

ಕುವೈತ್‌ ಭೇಟಿ: ಅರೇಬಿಯನ್‌ ಗಲ್ಫ್‌ ಕಪ್‌ ಉದ್ಘಾಟನೆಯಲ್ಲಿ ಭಾಗಿಯಾದ ಪ್ರಧಾನಿ ಮೋದಿ

ಕುವೈತ್‌/ನವದೆಹಲಿ: 26ನೇ ಅರೇಬಿಯನ್‌ ಗಲ್ಫ್‌ ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಿದ್ದು, ಕುವೈತ್‌ ದೊರೆ ಶೇಖ್‌ ಮಿಶಾಲ್‌ ಅಲ್‌ ಅಹ್ಮದ್‌ ಅಲ್‌-ಜಾಬಿರ್‌ ಅಲ್‌ ಸಬಾಹ್‌ ಅವರನ್ನು ಭೇಟಿಯಾಗಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಕಾಲ ಕುವೈತ್‌ ಪ್ರವಾಸ ಕೈಗೊಂಡಿದ್ದು, ಈ ನಗರದ ಜಾಬಿರ್‌ ಅಲ್‌ ಅಹ್ಮದ್‌ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಡಿಸೆಂಬರ್‌.21 ರಂದು ಉದ್ಘಾಟನಾ ಸಮಾರಂಭ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.

ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು, ಕುವೈತ್‌ನ ದೊರೆ ಜೊತೆಗಿರುವ ಭಾವಚಿತ್ರವನ್ನು ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿದ್ದು, ಕುವೈತ್‌ನ ದೊರೆ ಶೇಖ್‌ ಮಿಶಾಲ್‌ ಅಲ್‌ ಅಹ್ಮದ್‌ ಅಲ್‌-ಜಾಬಿರ್‌ ಅಲ್‌ಸಬಾಹ್‌ ಅವರನ್ನು ಅರೇಬಿಯನ್‌ ಗಲ್ಫ್‌ ಕಪ್‌ ಉದ್ಘಾಟನಾ ಸಮಾರಂಭದಲ್ಲಿ ಭೇಟಿ ಮಾಡಿರುವುದು ಸಂತಸದ ಕ್ಷಣವಾಗಿದೆ ಎಂದು ಹೇಳಿದ್ದಾರೆ.

ಇನ್ನು ಈ ಗಣ್ಯರ ಭೇಟಿಯಿಂದ ಪರಸ್ಪರರ ನಡುವೆ ಅನೌಪಚಾರಿಕ ಸಂವಾದಕ್ಕೆ ಅವಕಾಶ ಮಾಡಿಕೊಟ್ಟಿದೆ ಎಂದು ವಿದೇಶಾಂಗ ವ್ಯವಹಾರಗಳ ಖಾತೆ ತಿಳಿಸಿದೆ.

ಕುವೈತ್‌ ದ್ವೈವಾರ್ಷಿಕ ಅರೇಬಿಯನ್‌ ಗಲ್ಫ್‌ ಕಪ್‌ ಅನ್ನು ಆಯೋಜಿಸುತ್ತಾ ಬಂದಿದ್ದು, ಇದರಲ್ಲಿ ಜಿಸಿಸಿ ದೇಶಗಳಾದ ಇರಾಕ್‌ ಹಾಗೂ ಯೆಮನ್‌ ಸೇರಿದಂತೆ ಒಟ್ಟು ಎಂಟು ದೇಶಗಳು ಗಲ್ಫ್‌ ಕಪ್‌ ಗೇಮ್‌ನಲ್ಲಿ ಭಾಗವಹಿಸುತ್ತಿವೆ.

ಅರ್ಚನ ಎಸ್‌ ಎಸ್

Recent Posts

ಹೆಣ್ಣು ಕಾನೂನನ್ನು ಅರಿತರೆ ಅಷ್ಟೇ, ದೌರ್ಜನ್ಯ ಎದುರಿಸಲು ಸಾಧ್ಯ: ನಾಗಲಕ್ಷ್ಮೀ ಚೌಧರಿ

ಮಂಡ್ಯ: ಹೆಣ್ಣು ಕಾನೂನು ಅರಿತಕೊಂಡಾಗಷ್ಟೇ, ಹೆಣ್ಣಿನ ಮೇಲಾಗುತ್ತಿರುವ ದೌರ್ಜನ್ಯ ಎದುರಿಸಲು ಸಾಧ್ಯ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ…

35 mins ago

ಮೈಸೂರು:  ವೈದ್ಯರ ನಿರ್ಲಕ್ಷ್ಯಕ್ಕೆ ಬಾಲಕಿ ಬಲಿ

ಮೈಸೂರು: ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣ ಮಾಸುವ ಮುನ್ನವೇ ಸಾಂಸ್ಕೃತಿಕ ನಗರಿ ಮೈಸೂರಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ಬಾಲಕಿ ಸಾವನ್ನಪ್ಪಿರುವ…

54 mins ago

ಡಿ.ಕೆ.ಸಹೋದರರಿಗೆ ಮದುವೆ ಕರೆಯೋಲೆ ನೀಡಿದ ಡಾಲಿ ಧನಂಜಯ್‌

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ಡಾಲಿ ಧನಂಜಯ್‌ ಅವರು ತಮ್ಮ ಮದುವೆ ಕರೆಯೋಲೆಯನ್ನು ಡಿಸಿಎಂ ಡಿ.ಕೆ.ಶಿವಕುಮಾರ್‌ ಹಾಗೂ ಡಿ.ಕೆ.ಸುರೇಶ್‌ ಅವರಿಗೆ ನೀಡಿ…

1 hour ago

ಶುಚಿತ್ವ, ನಿರ್ವಹಣೆಯಲ್ಲಿ ಉತ್ತಮ ಗುಣಮಟ್ಟ ಕಾಯ್ದುಕೊಂಡ ಜಯದೇವ :ಸಿ.ಎಂ ಪ್ರಶಂಸೆ

ಕಲಬುರಗಿಯಲ್ಲಿ 371 ಹಾಸಿಗೆಗಳ ಜಯದೇವ ಹೃದ್ರೋಗ ಆಸ್ಪತ್ರೆಯ ನೂತನ ಕಟ್ಟಡವನ್ನು ಉದ್ಘಾಟಿಸಿ ಸಿಎಂ ಮಾತು.. ಕಲಬುರಗಿ: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ…

2 hours ago

ಪ್ರಹ್ಲಾದ್‌ ಜೋಶಿರವರ ಫೇಕ್‌ ಎನ್‌ಕೌಂಟರ್‌ ಹೇಳಿಕೆ: ಕೇಂದ್ರ ಸಚಿವ ಸ್ಥಾನಕ್ಕೆ ಶೋಭೆ ತರಲ್ಲ-ಎಚ್‌.ಕೆ.ಪಾಟೀಲ

ಬೆಳಗಾವಿ: ಎಂಎಲ್‌ಸಿ ಸಿ.ಟಿ.ರವಿ ಬಂಧನಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಅವರು ಪೊಲೀಸರ ವಿರುದ್ಧ ಫೇಕ್‌ ಎನ್‌ಕೌಂಟರ್‌ ಹೇಳಿಕೆ…

2 hours ago

ನ್ಯೂ ಇಯರ್‌ ಸೆಲಬ್ರೇಷನ್ | ಬೆಂಗಳೂರು ಪೊಲೀಸರಿಂದ ಹೊಸ ನಿಯಮ

ನ್ಯೂ ಇಯರ್ ಸೆಲಬ್ರೇಷನ್‌ಗೆ ದಿನಗಣನೆ ಬೆಂಗಳೂರು: 2024ನ್ನು ಮುಗಿಸಿ 2025ನ್ನು ಬರಮಾಡಿಕೊಳ್ಳಲು ಸಿಲಿಕಾನ್‌ ಸಿಟಿಯೇ ತುದಿಗಾಲಲ್ಲಿ ಕಾತರದಿಂದ ಕಾಯುತ್ತಿದೆ. ಸದ್ಯ…

2 hours ago