ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರಕ್ಕೆ ಇಂದಿಗೆ 11 ವರ್ಷವಾಗಿದ್ದು, ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ 11 ವರ್ಷ ಪೂರೈಸಿದೆ.
ಇನ್ನು ಪ್ರಧಾನಿ ಮೋದಿ ಸರ್ಕಾರದ ಸಾಧನೆಗಳನ್ನು ಇಂದು ಬಿಜೆಪಿ ವತಿಯಿಂದ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಲಾಗುತ್ತದೆ. ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ನಾಯಕರು ಸುದ್ದಿಗೋಷ್ಠಿ ನಡೆಸಲಿದ್ದು, ಮೋದಿ ಸರ್ಕಾರದ ಮೂರನೇ ಅವಧಿಯ ಸಾಧನೆಗಳ ಬಗ್ಗೆ ಮಾಹಿತಿ ನೀಡಲಿದ್ದಾರೆ.
ಕಳೆದ ಒಂದು ವರ್ಷದ ಅವಧಿಯಲ್ಲಿ ನರೇಂದ್ರ ಮೋದಿ ಸರ್ಕಾರದ ಸಾಧನೆಗಳು:
ಪಹಲ್ಗಾಮ್ ಉಗ್ರರ ದಾಳಿಗೆ ಪ್ರತಿಯಾಗಿ ಪಾಕಿಸ್ತಾನದ ವಿರುದ್ಧ ಯಶಸ್ವಿಯಾಗಿ ಆಪರೇಷನ್ ಸಿಂಧೂರ ಕಾರ್ಯಾಚರಣೆ
12 ಲಕ್ಷ ರೂಪಾಯಿವರೆಗಿನ ವಾರ್ಷಿಕ ಆದಾಯಕ್ಕೆ ತೆರಿಗೆ ಪಾವತಿಯಿಂದ ಸಂಪೂರ್ಣ ವಿನಾಯಿತಿ
ಸುಮಾರು 60 ಕೋಟಿ ಜನರು ಆಗಮಿಸಿದ್ದ ಪ್ರಯಾಗ್‌ರಾಜ್ ಕುಂಭಮೇಳ ಯಶಸ್ವಿ ಕಾರ್ಯಾಚರಣೆ
ಬಲಿಷ್ಠ ಜಪಾನ್ ಹಿಂದಿಕ್ಕಿ ಜಗತ್ತಿನ ನಾಲ್ಕನೇ ಆರ್ಥಿಕತೆಯಾಗಿ ಹೊರಹೊಮ್ಮಿದ ಭಾರತ





