Narendra Modi conferred with Brazil's highest civilian honour
ಬ್ರೆಸಿಲಿಯಾ: ಬ್ರೆಜಿಲ್ ಭೇಟಿಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಗೌರವವಾದ ಗ್ರ್ಯಾಂಡ್ ಕಾಲರ್ ಆಫ್ ದಿ ನ್ಯಾಷನಲ್ ಆರ್ಡರ್ ಆಫ್ ದಿ ಸದರ್ನ್ ಕ್ರಾಸ್ ಪ್ರಶಸ್ತಿ ಪ್ರದಾನ ಮಾಡಲಾಗಿದೆ.
ಬ್ರೆಜಿಲ್ ಅಧ್ಯಕ್ಷ ಲೂಯಿಸ್ ಇನಾಸಿಯೊ ಲುಲಾ ಡ ಸಿಲ್ವಾ ಅವರು ಬ್ರೆಸಿಲಿಯಾದಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಈ ಪ್ರಶಸ್ತಿಯನ್ನು ಪ್ರದಾನ ಮಾಡಿದರು.
ಪ್ರಧಾನಿ ಮೋದಿ ಅವರು ಮೇ 2014ರಲ್ಲಿ ಪ್ರಧಾನಿಯಾದ ನಂತರ ವಿವಿಧ ದೇಶಗಳಿಂದ ಸಿಕ್ಕ 26ನೇ ಅಂತರಾಷ್ಟ್ರೀಯ ಪ್ರಶಸ್ತಿ ಇದಾಗಿದೆ.
ಗೌರವ ಪಡೆದು ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಅಧ್ಯಕ್ಷ ಲುಲಾ ಅವರಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ. ಇಂದು ನನಗೆ ಮಾತ್ರವಲ್ಲ. 140 ಕೋಟಿ ಭಾರತೀಯರಿಗೂ ಹೆಮ್ಮೆಯ ಮತ್ತು ಭಾವನಾತ್ಮಕ ಕ್ಷಣವಾಗಿದೆ. ಏಕೆಂದರೆ ನನಗೆ ಬ್ರೆಜಿಲ್‌ನ ಅತ್ಯುನ್ನತ ನಾಗರಿಕ ಗೌರವವನ್ನು ನೀಡಲಾಗಿದೆ. ನಾನು ಬ್ರೆಜಿಲ್ ಸರ್ಕಾರ ಮತ್ತು ಬ್ರೆಜಿಲ್ ಜನರಿಗೆ ಕೃತಜ್ಞತೆಯನ್ನು ವ್ಯಕ್ತಪಡಿಸಲು ಬಯಸುತ್ತೇನೆ ಎಂದು ಹೇಳಿದ್ದಾರೆ.
ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಿಗೆ ಕೋಳಿಮೊಟ್ಟೆ ವಿತರಣೆಗಾಗಿ ನೀಡಲಾಗುವ ಅನುದಾನ ಕಳೆದ ೬ತಿಂಗಳಿಂದ…
ಗುತ್ತಲು ಕೆರೆ, ಕಾಳೇನಹಳ್ಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಭೇಟಿ ಮಂಡ್ಯ: ನಗರದ ಗುತ್ತಲು ಕೆರೆಗೆ ತ್ಯಾಜ್ಯ…
ಪ್ರಶಾಂತ್ ಎಸ್. ಆರು ತಿಂಗಳಿನಿಂದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತ ನೀರಿನ ಘಟಕ ನಿರ್ವಹಣೆ ಮಾಡುವಲ್ಲಿ ಕೆಎಸ್‌ಆರ್‌ಟಿಸಿ ವಿಫಲ…
ಗಿರೀಶ್ ಹುಣಸೂರು ಹೊಸ ವರ್ಷಾಚರಣೆ, ಕ್ರಿಸ್‌ಮಸ್ ರಜೆ ನಿರೀಕ್ಷೆಯಲ್ಲಿ ವ್ಯಾಪಾರಸ್ಥರು, ಉದ್ಯಮಿಗಳು ಮೈಸೂರು: ೨೦೨೫ನೇ ವರ್ಷಕ್ಕೆ ವಿದಾಯ ಹೇಳಿ, ೨೦೨೬ರ…
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…