ಗಾಂಧಿನಗರ (ಗುಜರಾತ್): ಪಿಎಂ ನರೇಂದ್ರ ಮೋದಿ ಅವರು ಇಂದು ( ಸೆಪ್ಟೆಂಬರ್ 18 ) ಬೆಳಿಗ್ಗೆ 10 ಗಂಟೆಗೆ ಗಾಂಧಿನಗರದ ವಾವೋಲ್‌ನಲ್ಲಿರುವ ಶಾಲಿನ್-2 ಸೊಸೈಟಿಯಲ್ಲಿ ʼಪಿಎಂ ಸೂರ್ಯ ಘರ್: ಉಚಿತ ವಿದ್ಯುತ್ ಯೋಜನೆ’ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು.
ಕೇಂದ್ರ ಸರ್ಕಾರದ ಪ್ರಮುಖ ಯೋಜನೆಯಾದ ಪಿಎಂ ಸೂರ್ಯ ಘರ್: ಉಚಿತ ವಿದ್ಯುತ್ ಯೋಜನೆಯನ್ನು 2024ರ ಫೆ.29 ರಂದು ಸುಮಾರು 75, 021 ಕೋಟಿ ರೂ.ಗಳ ಯೋಜನೆ ಅಡಿಯಲ್ಲಿ ಗುಜರಾತ್ ರಾಜ್ಯದ ಮನೆಗಳ ಮೇಲ್ಛಾವಣಿಯಲ್ಲಿ ಸೌರ ಫಲಕಗಳನ್ನು ಅಳವಡಿಸಲಾಗಿತ್ತು. ಇಂದು ಪ್ರಧಾನಿ ಮೋದಿ ಅವರು ಹಲವಾರು ನಿವಾಸಿಗಳೊಂದಿಗೆ ಸಂವಾದ ನಡೆಸಿದ್ದಾರೆ.
ಮೋದಿ ಅವರು ಸಂವಾದ ನಡೆಸುವ ಸಂದರ್ಭದಲ್ಲಿ ಫಲಾನುಭವಿಗಳಿಗೆ, ಕೇಂದ್ರ ಸರ್ಕಾರದ ಪ್ರಮುಖ ಉದ್ದೇಶ ಮನೆಗಳ ಮೇಲ್ಛಾವಣಿಯಲ್ಲಿ ಸೌರಫಲಕಗಳನ್ನು ಅಳವಡಿಸುವುದಾಗಿತ್ತು. ಏಕೆಂದರೆ ಇದರಿಂದ ತಮ್ಮ ವಸತಿ ಗೃಹಗಳಲ್ಲಿ ಸ್ವಂತ ವಿದ್ಯುತ್ ಉತ್ಪಾದಿಸಲು ಅವಕಾಶ ಮಾಡಿಕೊಡಲಾಗುತ್ತದೆ. ಒಟ್ಟು ವಿದ್ಯುತ್ ವೆಚ್ಚದಲ್ಲಿಯೂ ಸರ್ಕಾರಕ್ಕೆ ಉಳಿತಾಯವಾಗುವಂತೆ ಮಾಡುತ್ತದೆ. ಅಲ್ಲದೆ ನೂತವಾಗಿ ವಿದ್ಯುತ್‌ನ್ನು ನವೀಕರಿಸಬಹುದಾದ ಶಕ್ತಿಯ ಸದ್ಬಳಕೆ ಮಾಡಬಹುದು ಎಂದು ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಈ ವಿಚಾರದ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿಯಾಗಿ ಬರೆದುಕೊಂಡಿದ್ದಾರೆ. ʼನಾನು ಇತ್ತೀಚೆಗೆ ಗುಜರಾತ್ಗೆ ಭೇಟಿ ನೀಡಿದ್ದಾಗ ಶಗಶಿಭಾಯಿ ಸುತಾರ್ ಅವರ ಮನೆಗೆ ಹೋಗಿದ್ದೆ, ಅವರ ಕುಟುಂಬವು ಪಿಎಂ ಸೂರ್ಯ ಘರ್ ಉಚಿತ ವಿದ್ಯುತ್ ಯೋಜನೆಯಿಂದ ಪ್ರಯೋಜನ ಪಡೆದಿದೆ. ನಾನು ಇತರೆ ಫಲಾನುಭವಿಗಳನ್ನು ಕೂಡ ಭೇಟಿಯಾದೆʼ ಎಂದು ಅವರ ಹೈಲೈಟ್ಸ್‌ನಲ್ಲಿ ಬರೆದುಕೊಂಡಿದ್ದಾರೆ.
ಗುಂಡ್ಲುಪೇಟೆ: ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರಾಣಿಗಳಿಗೆ ಕುಡಿಯುವ ನೀರಿನ ಸಮಸ್ಯೆಗೆ ಈಗ ಬ್ರೇಕ್ ಹಾಕಲಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಅರಣ್ಯಾಧಿಕಾರಿಗಳು…
ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿರುವುದು ನಿಜ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.…
ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾರಾವ್ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಡಿಐಆರ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೇಗೆ ಎಂಬ…
ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…
ಬೆಂಗಳೂರು: ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…
ಸಮತೋಲನದ ಬಜೆಟ್!... ಮೂಡಿ ಬಂದಿದೆ ಸರ್ವರ ಹಿತ ಏಳ್ಗೆಯ ಕರ್ನಾಟಕದ ಮಾದರಿ ಜನಪರ ಬಜೆಟ್! ಮುಖ್ಯಮಂತ್ರಿಗಳ ಅನುಭವದ ಮೂಸೆಯಲಿ ಸುಸ್ಥಿರ…