ನವದೆಹಲಿ: ಹಂಗಾಮಿ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್‌ಘಾಟ್‌ನಲ್ಲಿರುವ ಮಹಾತ್ಮ ಗಾಂಧಿ ಸ್ಮಾರಕಕ್ಕೆ ತೆರಳಿ ಗೌರವ ನಮನ ಸಲ್ಲಿಸಿದರು.
ಇಂದು (ಜೂನ್.9) ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯನ್ನಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಭಾನುವಾರ ಮಹಾತ್ಮ ಗಾಂಧಿ ಅವರ ಸ್ಮಾರಕಕ್ಕೆ ನಮನ ಸಲ್ಲಿಸಿದ್ದಾರೆ.
ಇಂದು ಸಂಜೆ ನಡೆಯಲಿರುವ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅವರ ಸಚಿವ ಸಂಪುಟ ಸದಸ್ಯರು ಸಹಾ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಬಿಜೆಪಿ ನೇತೃತ್ವದ ಎನ್‌ಡಿಎ ಮಿತ್ರಕೂಟದಲ್ಲಿ ಟಿಡಿಪಿ, ಜೆಡಿಯು ಶಿವಸೇನೆ ಸೇರಿದಂತೆ ಹಲವು ಪಕ್ಷಗಳು ಸ್ಥಾನ ಪಡೆದಿದ್ದು, ಸಚಿವ ಸಂಪುಟದಲ್ಲಿ ಈ ಪಕ್ಷಗಳಿಗೂ ಸ್ಥಾನ ಸಿಗುವ ಸಾದ್ಯತೆಗಳಿವೆ.





