Mysore
26
scattered clouds
Light
Dark

ನರೇಂದ್ರ ಮೋದಿಯೇ ದೇಶದ ಅತ್ಯಂತ ಜನಪ್ರಿಯ ಪ್ರಧಾನಿ: ಸಮೀಕ್ಷೆ ವರದಿಯಲ್ಲಿ ಬಹಿರಂಗ

ನವದೆಹಲಿ: ನರೇಂದ್ರ ಮೋದಿಯವರೇ ದೇಶದ ಅತ್ಯಂತ ಜನಪ್ರಿಯ ಪ್ರಧಾನಿ ಎಂದು ಸಮೀಕ್ಷೆಯೊಂದು ಬಹಿರಂಗಪಡಿಸಿದೆ.

ಭಾರತದ ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಅಧಿಕಾರಕ್ಕೆ ಬಂದಿದ್ದಾರೆ. ಮೋದಿಯವರ ಜನಪ್ರಿಯತೆಗೆ ಯಾವುದೇ ಕೊರತೆ ಇಲ್ಲ. ಸಮೀಕ್ಷೆಯ ಪ್ರಕಾರ ಇತಿಹಾಸದಲ್ಲಿ ಅತ್ಯಂತ ಜನಪ್ರಿಯ ಪ್ರಧಾನಿ ನರೇಂದ್ರ ಮೋದಿ ಎಂದು ಹೇಳಲಾಗಿದೆ.

ಸಮೀಕ್ಷೆಯ ಪ್ರಕಾರ ನಿಮ್ಮ ಮೆಚ್ಚಿನ ಪ್ರಧಾನಿ ಯಾರು ಎಂಬ ಪ್ರಶ್ನೆಗೆ ಶೇಕಡಾ 51ರಷ್ಟು ಜನರು ಪ್ರಧಾನಿ ಮೋದಿ ಅವರನ್ನು ಆಯ್ಕೆ ಮಾಡಿದ್ದಾರೆ.

ಇನ್ನು ಈ ಸಮೀಕ್ಷೆಯಲ್ಲಿ ಎರಡನೇ ನೆಚ್ಚಿನ ಪ್ರಧಾನಿಯಾಗಿ ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ, ಮೂರನೇ ನೆಚ್ಚಿನ ಪ್ರಧಾನಿಯಾಗಿ ಮನಮೋಹನ್‌ ಸಿಂಗ್‌, ನಾಲ್ಕನೇ ನೆಚ್ಚಿನ ಪ್ರಧಾನಿಯಾಗಿ ಇಂದಿರಾಗಾಂಧಿ ಇದ್ದಾರೆ.

ದೇಶದ ಅತ್ಯಂತ ಜನಪ್ರಿಯ ಪ್ರಧಾನಿಯಾಗಿ ನರೇಂದ್ರ ಮೋದಿ ಅವರ ಹೆಸರು ಮುಂಚೂಣಿಯಲ್ಲಿದ್ದು, ಮೋದಿಯ ವರ್ಚಸ್ಸು ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ.

ಪ್ರಧಾನಿ ನರೇಂದ್ರ ಮೋದಿ ಅವರು, ದೇಶದ ಭದ್ರತೆಗೆ ಜಾರಿಗೊಳಿಸಿರುವ ಕ್ರಮಗಳೇ ಈ ಎಲ್ಲಾ ಬೆಳವಣಿಗೆಗೆ ಕಾರಣ ಎನ್ನಲಾಗುತ್ತಿದೆ.