narrendra modi
ನವದೆಹಲಿ: ಯಾವುದೇ ಭಾರತೀಯ ಎಂದಿಗೂ ಮರೆಯಲ್ಲ: 50 ವರ್ಷಗಳ ಹಿಂದಿನ ತುರ್ತು ಪರಿಸ್ಥಿತಿ ನೆನೆದು ಕಾಂಗ್ರೆಸ್ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.
1975 ಜೂನ್.25ರಂದು ಭಾರತದಲ್ಲಿ ತುರ್ತು ಪರಿಸ್ಥಿತಿ ಹೇರಲಾಗಿತ್ತು. ಇಂದು 50 ವರ್ಷಗಳು ಪೂರ್ಣಗೊಂಡಿವೆ. ಇದು ಭಾರತದ ಪ್ರಜಾಪ್ರಭುತ್ವ ಇತಿಹಾಸದ ಕರಾಳ ಅಧ್ಯಾಯಗಳಲ್ಲಿ ಒಂದಾದ ತುರ್ತು ಪರಿಸ್ಥಿತಿ ಹೇರಿ ಇಂದು ಐವತ್ತು ವರ್ಷಗಳು ಕಳೆದಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ನಮ್ಮ ಸಂವಿಧಾನದ ಧ್ವನಿಯನ್ನು ಹೇಗೆ ಹತ್ತಿಕ್ಕಲಾಯಿತು ಮತ್ತು ನ್ಯಾಯಾಲಯವನ್ನು ನಿಯಂತ್ರಿಸಲು ಪ್ರಯತ್ನಿಸಲಾಯಿತು. 42ನೇ ತಿದ್ದುಪಡಿ ಅವರ ಕ್ರಮಗಳಿಗೆ ಒಂದು ಪ್ರಮುಖ ಉದಾಹರಣೆಯಾಗಿದೆ. ಬಡವರು, ಅಂಚಿನಲ್ಲಿರುವವರು ಮತ್ತು ದಲಿತರನ್ನು ನಿರ್ದಿಷ್ಟವಾಗಿ ಗುರಿಯಾಗಿಸಲಾಯಿತು. ತುರ್ತು ಪರಿಸ್ಥಿತಿಯ ವಿರುದ್ಧದ ಹೋರಾಟದಲ್ಲಿ ದೃಢವಾಗಿ ನಿಂತ ಎಲ್ಲರಿಗೂ ನಾವು ನಮನ ಸಲ್ಲಿಸುತ್ತೇನೆ ಎಂದು ಹೇಳಿದರು.
ತುರ್ತು ಪರಿಸ್ಥಿತಿಯ ದಿನಗಳನ್ನು ನೆನಪಿಸಿಕೊಳ್ಳುತ್ತಾ, ನಾನು ತುರ್ತು ಪರಿಸ್ಥಿತಿ ಹೇರಿದಾಗ ಆರ್‌ಎಸ್‌ಎಸ್‌ನ ಯುವ ಪ್ರಚಾರಕನಾಗಿದ್ದೆ. ತುರ್ತು ಪರಿಸ್ಥಿತಿ ವಿರೋಧಿ ಚಳುವಳಿ ನನಗೆ ಕಲಿಕೆಯ ಅನುಭವವಾಗಿತ್ತು. ಇದು ನಮ್ಮ ಪ್ರಜಾಪ್ರಭುತ್ವ ರಚನೆಯನ್ನು ರಕ್ಷಿಸುವ ಮಹತ್ವವನ್ನು ಪುನರುಚ್ಚರಿಸಿತು. ಅಲ್ಲದೇ ರಾಜಕೀಯ ವರ್ಣಪಟಲದಾದ್ಯಂತ ಎಲ್ಲಾ ಜನರಿಂದ ನಾನು ಬಹಳಷ್ಟು ಕಲಿಯಲು ಸಾಧ್ಯವಾಯಿತು ಎಂದು ಬರೆದುಕೊಂಡಿದ್ದಾರೆ.
ಹೊಸದಿಲ್ಲಿ : ಗಣರಾಜ್ಯೋತ್ಸವಕ್ಕೂ ಮುನ್ನ ರಾಷ್ಟ್ರ ರಾಜಧಾನಿಯಲ್ಲಿ ಅಶಾಂತಿ ಸೃಷ್ಟಿಸುವುದಾಗಿ ಬೆದರಿಕೆ ಹಾಕಿದ್ದಕ್ಕಾಗಿ ಸಿಖ್ ಫಾರ್ ಜಸ್ಟೀಸ್ ನಿಯೋಜಿತ ಭಯೋತ್ಪಾದಕ…
ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಪಿ.ದೊಡ್ಡಿ ಗ್ರಾಮದಲ್ಲಿ 5 ಕಾಡಾನೆಗಳ ಹಿಂಡು ಬೀಡುಬಿಟ್ಟು ಕಬ್ಬಿನ ಬೆಳೆ ಫಸಲನ್ನು ನಾಶಗೊಳಿಸಿರುವ ಘಟನೆ…
ಮಡಿಕೇರಿ : ಮೈಸೂರು-ಗೋಣಿಕೊಪ್ಪ ಹೆದ್ದಾರಿಯ ದಕ್ಷಿಣ ಕೊಡಗಿನ ತಿತಿಮತಿ ವ್ಯಾಪ್ತಿಯಲ್ಲಿ ಹುಲಿಯೊಂದು ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದು, ಹುಲಿ ಸೆರೆಗೆ ಶಾಸಕ…
ನಂಜನಗೂಡು : ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಖಾಸಗಿ ಶಾಲೆಗಳನ್ನು ಸಹ ನಾಚಿಸುವಂತಹ ಆಧುನಿಕ ಸೌಲಭ್ಯಗಳನ್ನು…
ಬೃಹತ್ ಕೈಗಾರಿಕೆ ಸಚಿವಾಲಯ ಅಧೀನದ ಎಆರ್‌ಎಐ ಘಟಕ ಸ್ಥಾಪನೆಗೆ ಪರಿಶೀಲನೆ ನಡೆಯುತ್ತಿದೆ : ಕುಮಾರಸ್ವಾಮಿ ಮಂಡ್ಯ : ಜಿಲ್ಲೆಯಲ್ಲಿ ಕೈಗಾರಿಕೆ…
ಮಂಡ್ಯ : ಕರ್ನಾಟಕ ರಾಜ್ಯವೇ ನನ್ನ ಪರಿಮಿತಿ. ಜನರು ಎಲ್ಲಿ ಅಪೇಕ್ಷೆ ಮಾಡುತ್ತಾರೆ ಅಲ್ಲಿಂದ ನನ್ನ ಸ್ಪರ್ಧೆ ಮಾಡುತ್ತೇನೆ ಎನ್ನುವ…