ದೇಶ- ವಿದೇಶ

ಇಂದು ಪ್ರಧಾನಿಯಾಗಿ ಮೋದಿ ಪ್ರಮಾಣ ವಚನ: ಇಲ್ಲಿ ನೀವು ಲೈವ್‌ನಲ್ಲಿ ವೀಕ್ಷಿಸಬಹುದು

ನವದೆಹಲಿ: 18ನೇ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಒಕ್ಕೂಟ ಜಯ ಗಳಿಸಿದ್ದು ಸತತ ಮೂರನೇ ಬಾರಿಗೆ ಸರ್ಕಾರ ರಚನೆ ಮಾಡಲು ಎಲ್ಲಾ ಸಿದ್ಧತೆಗಳು ನಡೆದಿವೆ.

ಶುಕ್ರವಾರ ನಡೆದ ಎನ್‌ಡಿಎ ಎನ್‌ಡಿಎ ಸಭೆಯಲ್ಲಿ ನರೇಂದ್ರ ಮೋದಿ ಅರವನ್ನು ಮೂರನೇ ಬಾರಿಗೆ ಪ್ರಧಾನಿಯನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದ್ದು, ಅವರು ಇಂದು (ಜೂನ್‌.9) ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ರಾಷ್ಟ್ರಪತಿ ಭವನ ಸಭಾಂಗಣದಲ್ಲಿ ಇಂದು ನಡೆಯಲಿರುವ ಪ್ರಮಾಣ ವಚನ ಸಮಾರಂಭದಲ್ಲಿ ಪ್ರಧಾನಿಯಾಗಿ ಮೋದಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಜತೆಗೆ ಹಲವು ಸಂಪುಟ ಸಚಿವರು ಸಹಾ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಹೇಳಲಾಗಿದೆ.

ಈ ಸುದ್ದಿ ಸಮಾರಂಭವನ್ನು ನಾಗರೀಕರು ಎಕ್ಸ್‌ (X) ನಂತಹ ಸಾಮಾಜಿಕ ಮಾಧ್ಯಮ, ಸುದ್ದಿ ವಾಹಿನಿಗಳಲ್ಲಿ ನೇರ ಪ್ರಸಾರ ವೀಕ್ಷಿಸಬಹುದಾಗಿದೆ.

ಇಂದು ಸಂಜೆ 7.15 ಗಂಟೆಗೆ ಪ್ರಧಾನಿ ಮೋದಿ ಅವರು ಪ್ರಮಾಣವಚನ ಸ್ವೀಕರಿಸಲಿದ್ದು, ಈ ಕಾರ್ಯಕ್ರಮಕ್ಕೆ ದೇಶ ವಿದೇಶಗಳಿಂದ ಸುಮಾರು 8000ಕ್ಕೂ ಅಧಿಕ ಗಣ್ಯರಿಗೆ ಆಹ್ವಾನ ನೀಡಲಾಗಿದೆ. ಪ್ರಮಾಣವಚನ ಸಮಾರಂಭದ ನಂತರ ಗಣ್ಯರೆಲ್ಲರಿಗೂ ಸೇರಿದಂತೆ ರಾಷ್ಟ್ರಪತಿ ಭವನದಲ್ಲಿ ಔತಣಕೂಟ ಏರ್ಪಡಿಸಲಾಗಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಮಂಡ್ಯ | ಕಬ್ಬಿನ ಗದ್ದೆಯಲ್ಲಿ ಮೂರು ಚಿರತೆ ಮರಿಗಳು ಪತ್ತೆ

ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.…

10 hours ago

ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ದಾಳಿ : ಇರಾನಿನ ಕ್ಷಿಪಣಿ ತಾಣ ನಾಶ

ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…

11 hours ago

ಮರ್ಯಾದಾ ಹತ್ಯೆ ನಿಷೇಧ ಮಸೂದೆ ಮಂಡನೆ

ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…

13 hours ago

ಮೈಸೂರು ನಗರದಲ್ಲಿ ಮಳೆ ; ತಂಪಾದ ಇಳೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…

13 hours ago

ಯುಗಾದಿ ಸಂಭ್ರಮ : ಮೈಸೂರಲ್ಲಿ ಖರೀದಿ ಜೋರು

ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…

15 hours ago

ನಾಳೆ ಧುರಂಧರ್-2 ಬಿಡುಗಡೆ : ಎಲ್ಲಾ ದಾಖಲೆ ಮುರಿಯುವ ನಿರೀಕ್ಷೆ

ಮುಂಬೈ : ಆದಿತ್ಯ ಧರ್‌ ನಿರ್ದೇಶನದ, ರಣವೀರ್‌ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.‌19) ಬಿಡುಗಡೆಯಾಗಲಿದೆ. ಕಳೆದ ವರ್ಷ…

15 hours ago